ಜೂನ್ 21ಕ್ಕೆ ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ; ಅಗತ್ಯ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಪಿಎಂಒ
ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಆಹ್ವಾನಿಸಿದ್ದರು.
ಮೈಸೂರು: ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಹಿನ್ನೆಲೆ ಈ ಬಾರಿ ದೇಶದ ಪ್ರಧಾನಿ ನರೇಂದ್ರ ಮೋದಿ (Narendra Modi) ಮೈಸೂರಿಗೆ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ಬಗ್ಗೆ ಪ್ರಧಾನಿ ಕಾರ್ಯಾಲಯ ದೃಢಪಡಿಸಿದ್ದು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ಗೆ ಪತ್ರ ಬರೆದಿದೆ. ಪಿ.ರವಿಕುಮಾರ್ಗೆ ಬರೆದ ಪತ್ರದಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಪಿಎಂಒ ತಿಳಿಸಿದೆ. ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕುಟುಂಬ ಸಮೇತರಾಗಿ ಪ್ರಧಾನಿಯನ್ನು ಭೇಟಿಯಾಗಿ ಆಹ್ವಾನಿಸಿದ್ದರು.
ಆಯುಷ್ ಸಚಿವಾಲಯವು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಗರದ ರೇಸ್ ಕೋರ್ಸ್ ಆವರಣದಲ್ಲಿ ಭರ್ಜರಿ ಸಿದ್ಧತೆ ಮಾಡಲಾಗುತ್ತಿದೆ. ವಿಜಯನಗರದಲ್ಲಿರುವ ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ಯೋಗ ದಿನಾಚರಣೆ ಕುರಿತು ಪೋಸ್ಟರ್ ಬಿಡುಗಡೆ ಮಾಡಲಾಯಿತು. 2017ರಲ್ಲಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗಿದ್ದ ಮೈಸೂರು, ಮತ್ತೆ ಗಿನ್ನೆಸ್ ದಾಖಲೆ ಸೇರಲು ಸಾಂಸ್ಕೃತಿಕ ನಗರಿಯಲ್ಲಿ ಸಿದ್ಧತೆ ನಡೆದಿದ್ದು, ಈ ಬಾರಿ 2 ಲಕ್ಷ ಯೋಗಪಟುಗಳನ್ನು ಸೇರಿಸುವ ಆಶಯವಿದೆ.
#IDY@Mysuru! Welcome to Modiji and Thanks to @JoshiPralhad Sir. I am grateful to Joshi Sir for all his help n blessings. pic.twitter.com/Nlx54Xb1L8
— Pratap Simha (@mepratap) May 20, 2022
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಮೋದಿ ಮೈಸೂರಿಗೆ ಬರುವ ಬಗ್ಗೆ ಗೊಂದಲ ಇತ್ತು. ಆದರೆ ಪ್ರಧಾನಿ ಕಾರ್ಯಾಲಯ ಇದೀಗ ಮೋದಿ ಬರುವ ಬಗ್ಗೆ ಸ್ಪಷ್ಟತೆ ನೀಡಿದೆ.
ಇದನ್ನೂ ಓದಿ: PM Modi: ವಿದೇಶ ಪ್ರವಾಸಕ್ಕೆ ತೆರಳುವಾಗ ರಾತ್ರಿ ಪ್ರಯಾಣಕ್ಕೆ ಆದ್ಯತೆ ನೀಡುವ ಪ್ರಧಾನಿ ಮೋದಿ; ಕಾರಣವೇನು?
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:44 am, Sat, 21 May 22