ಜೂನ್​​ 21ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗೋದು ಬಹುತೇಕ ಫಿಕ್ಸ್

ಜೂನ್​​ 21ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗಿಯಾಗೋದು ಬಹುತೇಕ ಫಿಕ್ಸ್
ಪ್ರಧಾನಿ ನರೇಂದ್ರ ಮೋದಿ

2017ರಲ್ಲಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗಿದ್ದ ಮೈಸೂರು, ಮತ್ತೆ ಗಿನ್ನೆಸ್​​​ ದಾಖಲೆ ಸೇರಲು ಸಾಂಸ್ಕೃತಿಕ ನಗರಿಯಲ್ಲಿ ಸಿದ್ಧತೆ ನಡೆದಿದ್ದು, ಈ ಬಾರಿ 2 ಲಕ್ಷ ಯೋಗಪಟುಗಳನ್ನು ಸೇರಿಸುವ ಆಶಯವಿದೆ. 

TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

May 15, 2022 | 11:55 AM

ಮೈಸೂರು: ಜೂನ್​​ 21ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗೋದು ಬಹುತೇಕ ಫಿಕ್ಸ್ ಆಗಿದೆ. ಮೈಸೂರು ಸಂಸದ ಪ್ರತಾಪಸಿಂಹ ಈ ಬಗ್ಗೆ ಪ್ರಧಾನಿಯವರಿಗೆ ಮನವಿ ಮಾಡಿದ್ದು, ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಆಯುಷ್ ಸಚಿವಾಲಯವು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಗರದ ರೇಸ್ ಕೋರ್ಸ್ ಆವರಣದಲ್ಲಿ ಭರ್ಜರಿ ಸಿದ್ಧತೆ ಮಾಡಲಾಗುತ್ತಿದೆ. ವಿಜಯನಗರದಲ್ಲಿರುವ ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ಯೋಗ ದಿನಾಚರಣೆ ಕುರಿತು ಪೋಸ್ಟರ್​ ಬಿಡುಗಡೆ ಮಾಡಲಾಯಿತು. 2017ರಲ್ಲಿ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಗಿದ್ದ ಮೈಸೂರು, ಮತ್ತೆ ಗಿನ್ನೆಸ್​​​ ದಾಖಲೆ ಸೇರಲು ಸಾಂಸ್ಕೃತಿಕ ನಗರಿಯಲ್ಲಿ ಸಿದ್ಧತೆ ನಡೆದಿದ್ದು, ಈ ಬಾರಿ 2 ಲಕ್ಷ ಯೋಗಪಟುಗಳನ್ನು ಸೇರಿಸುವ ಆಶಯವಿದೆ.

ವಿಶ್ವವಿಖ್ಯಾತ ಹಂಪಿಯಲ್ಲಿ ಯೋಗೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಿಶ್ವವಿಖ್ಯಾತ ಹಂಪಿಯ ಶ್ರೀ ವಿಜಯ ವಿಠ್ಠಲ ದೇವಾಲಯದಲ್ಲಿ ಯೋಗೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಲ್ಲಿನ ತೇರಿನ‌ ಮುಂದೆ ವಚನನಾಂದ ಶ್ರೀಗಳಿಂದ ಯೋಗಾಭ್ಯಾಸ ಮಾಡಲಾಯಿತು. ಯೋಗದ ಕುರಿತು ಜನಜಾಗೃತಿ ಮೂಡಿಸುವ ವಿಶಿಷ್ಟ ಕಾರ್ಯಕ್ರಮ ಇದಾಗಿದ್ದು, ಇಂದಿನಿಂದ ಯೋಗ ದಿನದವರೆಗೂ ವಾರಕ್ಕೊಂದು ಕಾರ್ಯಕ್ರಮ ನಡೆಯಲಿವೆ. ವಿನಯ್ ಗುರೂಜಿ, ಭವರ್ ಲಾಲ್, ಸಚಿವ ಆನಂದ್ ಸಿಂಗ್ ಭಾಗಿಯಾಗಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow us on

Related Stories

Most Read Stories

Click on your DTH Provider to Add TV9 Kannada