ಕನ್ನಡ ಧ್ವಜದಲ್ಲಿ ರಾಹುಲ್ ಗಾಂಧಿ ಚಿತ್ರ: ಕನ್ನಡ ಪರ ಸಂಘಟನೆಗಳಿಂದ ಆಕ್ಷೇಪ

ಬಾವುಟದ ಮೇಲೆ ರಾಹುಲ್ ಗಾಂಧಿ ಚಿತ್ರ ಬಳಕೆ ಮಾಡಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ಕನ್ನಡ ಧ್ವಜದಲ್ಲಿ ರಾಹುಲ್ ಗಾಂಧಿ ಚಿತ್ರ: ಕನ್ನಡ ಪರ ಸಂಘಟನೆಗಳಿಂದ ಆಕ್ಷೇಪ
ಮೈಸೂರು ಜಿಲ್ಲೆಯಲ್ಲಿ ಸುರಿಯುವ ಮಳೆಯಲ್ಲೇ ರಾಹುಲ್​ ಗಾಂಧಿ ಭಾಷಣ ಮಾಡಿದರು.Image Credit source: @INCKarnataka
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 03, 2022 | 2:25 PM

ಮೈಸೂರು: ಕರ್ನಾಟಕದಲ್ಲಿ ‘ಭಾರತ್ ಜೋಡೊ ಯಾತ್ರೆ’ಯ ಮೂಲಕ ಸದ್ದು ಮಾಡಿರುವ ರಾಹುಲ್ ಗಾಂಧಿ ಇದೀಗ ವಿವಾದದಲ್ಲಿ ಸಿಲುಕಿದ್ದಾರೆ. ರಾಹುಲ್ ಗಾಂಧಿ ಅವರ ಭಾವಚಿತ್ರವಿದ್ದ ಕನ್ನಡ ಧ್ವಜವು ಭಾನುವಾರ (ಅ 2) ಅಲ್ಲಲ್ಲಿ ಕಂಡು ಬಂದಿದ್ದು ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯ ಬಗ್ಗೆ ಕರ್ನಾಟಕ ನವ ನಿರ್ಮಾಣ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದ್ದು, ‘ಕನ್ನಡ ಧ್ವಜಗಳನ್ನು ರಾಜಕಾರಣಕ್ಕೆ ಬಳಸುವುದು ಸರಿಯಲ್ಲ. ವಯನಾಡು ಕ್ಷೇತ್ರದ ಸಂಸದರಾಗಿರುವ ರಾಹುಲ್ ಗಾಂಧಿ ಅವರು ಕರ್ನಾಟಕದ ಅಭಿವೃದ್ಧಿಗೆ ನೀಡಿರುವ ಕೊಡುಗೆ ಏನು? ಈ ಬಗ್ಗೆ ರಾಹುಲ್ ಗಾಂಧಿ ಅವರು ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ ಎಂದು ‘ರಿಪಬ್ಲಿಕ್ ವರ್ಲ್ಡ್​’ ಜಾಲತಾಣ ವರದಿ ಮಾಡಿದೆ.

ಬಾವುಟದ ಮೇಲೆ ರಾಹುಲ್ ಗಾಂಧಿ ಚಿತ್ರ ಬಳಕೆ ಮಾಡಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ‘ಈ ಬಗ್ಗೆ ನಾನು ಕ್ಷಮೆ ಕೇಳುವುದಿಲ್ಲ. ಬಾವುಟದ ಮೇಲೆ ಚಿತ್ರ ಬಳಸುವ ನಿರ್ಧಾರ ತೆಗೆದುಕೊಂಡಿದ್ದು ನಾನು’ ಎಂದು ಪ್ರತಿಕ್ರಿಯಿಸಿದ್ದಾರೆ. ‘ನಿಜವಾದ ಕನ್ನಡಪರ ಸಂಘಟನೆಗಳು ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಬಿಜೆಪಿ ಬೆಂಬಲಿಗರ ಆಕ್ರೋಶದ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ’ ಎಂದಿದ್ದಾರೆ.

ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ಬಿಜೆಪಿ ನಾಯಕ ವಿವೇಕ್ ರೆಡ್ಡಿ ಖಂಡಿಸಿದ್ದಾರೆ. ‘ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಯಾರೂ ವಿರೋಧಿಸುತ್ತಿಲ್ಲ. ಆದರೆ ಒಬ್ಬ ವ್ಯಕ್ತಿಯ ಚಿತ್ರವನ್ನು ಇಡೀ ರಾಜ್ಯದ ಜನರು ಗೌರವಿಸುವ ಧ್ವಜದ ಮೇಲೆ ಮುದ್ರಿಸಿದ್ದು ಸರಿ ಕಾಣುತ್ತಿಲ್ಲ’ ಎಂದಿದ್ದಾರೆ.

ಭಾರತ್ ಜೋಡೋ ಯಾತ್ರೆಗಾಗಿ ಮೈಸೂರು ಜಿಲ್ಲೆಯ ವಿವಿಧೆಡೆ ಹಾಕಿದ್ದ ಹಿಂದಿ ಅಕ್ಷರಗಳಿರುವ ಫ್ಲೆಕ್ಸ್​ ಬ್ಯಾನರ್​ಗಳಿಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕಪ್ಪು ಬಣ್ಣ ಬಳಿದಿದ್ದರು. ಮೈಸೂರು-ಗುಂಡ್ಲುಪೇಟೆ ರಸ್ತೆ ಹಾಗೂ ನಂಜನಗೂಡು ಬಳಿ ಹಿಂದಿ ಅಕ್ಷರಗಳಿಗೆ ಮಸಿ ಬಳಿದು ಕನ್ನಡ ಬಳಸಿ ಎಂಬ ಸಂದೇಶ ಬರೆಯಲಾಗಿತ್ತು.

ಕರ್ನಾಟಕದಲ್ಲಿ ಕಾಂಗ್ರೆಸ್​ನ 4ನೇ ದಿನದ ಪಾದಯಾತ್ರೆಯ ಪ್ರಯುಕ್ತ ರಾಹುಲ್ ಗಾಂಧಿ ಮೈಸೂರಿನ ಪ್ರಸಿದ್ಧ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು. ನಂತರ ದೇಗುಲದ ಎದುರು ಡಿ.ಕೆ.ಶಿವಕುಮಾರ್ ಮಾರ್ಗದರ್ಶನದಲ್ಲಿ ಈಡುಗಾಯಿ ಹೊಡೆದರು. ಮೈಸೂರು ನಗರದ ವಿವಿಧೆಡೆ ಮಸೀದಿ, ಚರ್ಚ್​ಗಳಿಗೂ ರಾಹುಲ್ ಭೇಟಿ ನೀಡಿದರು. ಆಜಂ ಮಸೀದಿ, ಸೇಂಟ್ ಫಿಲೋಮಿನಾ ಚರ್ಚ್​​ಗೆ ಭೇಟಿ ನೀಡಿದ್ದ ರಾಹುಲ್ ಅವರೊಂದಿಗೆ ಶಾಸಕ ತನ್ವೀರ್ ಸೇಠ್​​ ಇದ್ದರು.

Published On - 2:24 pm, Mon, 3 October 22

ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ