ಮೈಸೂರು: ನಿವೃತ್ತ ಪೊಲೀಸ್ ಅಧಿಕಾರಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ

ಹೇಳಿ ಕೇಳಿ ನಿವೃತ್ತ ಪೊಲೀಸ್ ಅಧಿಕಾರಿ, ಪೊಲೀಸ್ ಅಧಿಕಾರಿಯಾಗಿದ್ದವರ ಮನೆ ಇದು ಎನ್ನುವ ಭಯ ಇಲ್ಲದೇ ಅವರ ಕಟ್ಟಡ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.

ಮೈಸೂರು: ನಿವೃತ್ತ ಪೊಲೀಸ್ ಅಧಿಕಾರಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ
Edited By:

Updated on: Nov 01, 2023 | 8:35 AM

ಮೈಸೂರು, (ನವೆಂಬರ್ 01): ಹೇಳಿ ಕೇಳಿ ನಿವೃತ್ತ ಪೊಲೀಸ್ ಅಧಿಕಾರಿ, ಪೊಲೀಸ್ ಅಧಿಕಾರಿಯಾಗಿದ್ದವರ ಮನೆ ಇದು ಎನ್ನುವ ಭಯ ಇಲ್ಲದೇ ಅವರ ಕಟ್ಟಡ ಬಾಡಿಗೆ ಪಡೆದು ವೇಶ್ಯಾವಾಟಿಕೆ (prostitution) ದಂಧೆ ನಡೆಸುತ್ತಿರುವ ಪ್ರಕರಣ ಮೈಸೂರಿನಲ್ಲಿ(Mysuru) ಬೆಳಕಿಗೆ ಬಂದಿದೆ. ಹೌದು..ಮೈಸೂರಿನ ಲಲಿತ‌ಮಹಲ್ ನಗರದ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಮನೆಯನ್ನು ಬಾಡಿಗೆ ಪಡೆದು ಫ್ಯಾಮಿಲಿ ಸಲೂನ್ ಹೆಸರಲ್ಲಿ ಮಹೇಶ್​ ಎಂಬಾತ ವೇಶ್ಯಾವಾಟಿಕೆ ನಡೆಸುತ್ತಿರುವುದು ಬಟಾಬಯಲಾಗಿದೆ. ಒಡನಾಡಿ, ಪೊಲೀಸ್ ಕಮಿಷನರ್ ವಿಶೇಷ ದಳ ಕಾರ್ಯಾಚರಣೆ ನಡೆಸಿ ವೇಶ್ಯಾವಾಟಿಕೆ ದಂಧೆಯನ್ನು ಪತ್ತೆ ಮಾಡಿದೆ.

ಮಹೇಶ್ ಎಂಬಾತ ಸಲೂನ್ ನಡೆಸುವುದಾಗಿ ಮೈಸೂರಿನ ಲಲಿತ‌ಮಹಲ್ ನಗರದ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಕಟ್ಟಡವನ್ನು ಬಾಡಿಗೆ ಪಡೆದುಕೊಂಡಿದ್ದ. ಅದರಂತೆ ಹೊರಗಡೆ ನೋಡುವವರುಗೆ ಫ್ಯಾಮಿಲಿ ಸಲೂನ್ ಅಂತ ಬೋರ್ಡ್ ಹಾಕಿದ್ದ. ಆದ್ರೆ, ಒಳಗಡೆ ಮಾತ್ರ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಇದನ್ನು ಒಡನಾಡಿ, ಪೊಲೀಸ್ ಕಮಿಷನರ್ ವಿಶೇಷ ದಳ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಿದೆ. ಈ ಬಗ್ಗೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us