ಮನೆಯಲ್ಲೇ ಹೈಟೆಕ್ ವೇಶ್ಯವಾಟಿಕೆ ದಂಧೆ: ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದ 6 ಪುರುಷರು, ಇಬ್ಬರು ಯುವತಿಯರು

ವೇಶ್ಯಾವಾಟಿಕೆ ನಡೆಯುತಿದ್ದ ಮನೆಯ ಮೇಲೆ ಪೊಲೀಸರು ದಾಳಿ ಮಾಡಿ 6 ಜನ ಪುರುಷರು ಹಾಗೂ ಇಬ್ಬರು ಮಹಿಳೆಯರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಓಡನಾಡಿ ಸಂಸ್ಥೆ, ಈ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದು, ಈ ಮಾಹಿತಿ ಮೇರೆಗೆ ಮೈಸೂರು ಜಿಲ್ಲೆಯ ಪೊಲೀಸರು ತಕ್ಷಣವೇ ತಂಡದೊಂದಿಗೆ ದಾಳಿ ಮಾಡಿದ್ದಾರೆ.

ಮನೆಯಲ್ಲೇ ಹೈಟೆಕ್ ವೇಶ್ಯವಾಟಿಕೆ ದಂಧೆ: ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದ 6 ಪುರುಷರು, ಇಬ್ಬರು ಯುವತಿಯರು
Dasanakoppalu Prostitution
Edited By:

Updated on: Jul 07, 2025 | 4:22 PM

ಮೈಸೂರು, (ಜುಲೈ 07): ಮೈಸೂರು (Mysuru) ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ (Dasanakoppalu Village) ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ (Prostitution) ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಆರು ಜನರನ್ನು ಬಂಧಿಸಿದ್ದಾರೆ. ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗ ಪೊಲೀಸರು ದಾಳಿ ಮಾಡಿದ್ದು, ಆರೋಪಿಗಳನ್ನು ರೆಡ್‌ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿಯ ವೇಳೆ ಆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದ್ದು, 6 ಪುರುಷರು ಮತ್ತು ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದಾರೆ.

ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಓಡನಾಡಿ ಸಂಸ್ಥೆ, ಈ ಅಕ್ರಮದ ಬಗ್ಗೆ ಮಾಹಿತಿ ನೀಡಿದ್ದು, ಮೈಸೂರು ಜಿಲ್ಲೆಯ ಪೊಲೀಸರು ಕೂಡಲೇ ತಂಡದೊಂದಿಗೆ ದಾಸನಕೊಪ್ಪಲು ಗ್ರಾಮದ ಒಂದು ಮನೆ ಮೇಲೆ ದಾಳಿ ಮಾಡಿದ್ದು, ಆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದೆ. ಇನ್ನು 6 ಪುರುಷರು ಮತ್ತು ಇಬ್ಬರು ಯುವತಿಯರು ಸಿಕ್ಕಿಬಿದ್ದಿದ್ದಾರೆ. ಸಿಕ್ಕಿಬಿದ್ದ ಯುವತಿಯರನ್ನ ಯುವತಿಯರನ್ನ ಪುನರ್ವಸತಿ ಕೇಂದ್ರಗಳಿಗೆ ಕಳಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ ಪತ್ತೆ

ಬಂಧಿತರು ಇಬ್ಬರು ಹೆಣ್ಣು ಮಕ್ಕಳನ್ನು ಕರೆದಂದು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಇನ್ನು ಆರೋಪಿಗಳು 30 ದಿನಗಳಿಗೆ ಒಮ್ಮೆ ಮನೆ ಬದಲಾಯಿಸಿ ವೇಶ್ಯಾವಾಟಿಗೆ ದಂಧೆ ನಡೆಸುತ್ತಿದ್ದರು. ಬೇರೆ ಬೇರೆ ಕಡೆಗಳಿಂದ ಯುವತಿಯರಿಗೆ ಹಣ ಕೊಟ್ಟು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ

ಇನ್ನು ಕಳೆದ 3 ದಿನಗಳ ಹಿಂದೆ ಇದೇ ಮನೆಯಲ್ಲಿ ನಕಲಿ ಪೇಯಿಂಗ್ ಗೆಸ್ಟ್ ಎಂದು ಯುವತಿಯರನ್ನು ಇರಿಸಲಾಗಿತ್ತು ಎಂಬ ಮಾಹಿತಿ ಕೂಡ ಸಿಕ್ಕಿದೆ. ಸ್ಥಳೀಯರು ಕೂಡ ಈ ಕುರಿತು ಅನುಮಾನ ವ್ಯಕ್ತಪಡಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:19 pm, Mon, 7 July 25