AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಾಜ ಮಾರುಕಟ್ಟೆ ಹೊಸದಾಗಿ ನಿರ್ಮಾಣಕ್ಕೆ ವಿರೋಧಿಸಿ ಮೈಸೂರಿನ ಚಿಕ್ಕಗಡಿಯಾರ ಬಳಿ ಇಂದು ಪ್ರತಿಭಟನೆ

ದೇವರಾಜ ಮಾರುಕಟ್ಟೆ ಶಿಥಿಲಗೊಂಡಿರುವ ಹಿನ್ನೆಲೆ ಅದನ್ನು ನೆಲಸಮ ಮಾಡಿ ಹೊಸದಾಗಿ ಕಟ್ಟಲು ಪಾಲಿಕೆ ಮುಂದಾಗಿದೆ. ಆದ್ರೆ 100 ವರ್ಷದ ಇತಿಹಾಸ ಹೊಂದಿರುವ ದೇವರಾಜ ಮಾರ್ಕೆಟ್ ಹೊಸದಾಗಿ ಕಟ್ಟುವ ಮೈಸೂರು ಪಾಲಿಕೆ ನಿರ್ಧಾರಕ್ಕೆ ವ್ಯಾಪಾರಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ದೇವರಾಜ ಮಾರುಕಟ್ಟೆ ಹೊಸದಾಗಿ ನಿರ್ಮಾಣಕ್ಕೆ ವಿರೋಧಿಸಿ ಮೈಸೂರಿನ ಚಿಕ್ಕಗಡಿಯಾರ ಬಳಿ ಇಂದು ಪ್ರತಿಭಟನೆ
ಮೈಸೂರು ಪಾಲಿಕೆ
TV9 Web
| Updated By: ಆಯೇಷಾ ಬಾನು|

Updated on:Apr 20, 2022 | 11:00 AM

Share

ಮೈಸೂರು: ದೇವರಾಜ ಮಾರುಕಟ್ಟೆ ಹೊಸದಾಗಿ ನಿರ್ಮಾಣಕ್ಕೆ ವಿರೋಧ ಹಿನ್ನೆಲೆ ಕಟ್ಟಡ ಉಳಿಸಿಕೊಂಡು ನವೀಕರಣ ಮಾಡುವಂತೆ ಒತ್ತಾಯ ಕೇಳಿ ಬಂದಿದ್ದು ಮೈಸೂರಿನ ಚಿಕ್ಕಗಡಿಯಾರ ಬಳಿ ಇಂದು ಪ್ರತಿಭಟನಾ ಱಲಿ ನಡೆಯಲಿದೆ. ಮಧ್ಯಾಹ್ನದವರೆಗೆ ಮಾರುಕಟ್ಟೆ ಬಂದ್ ಮಾಡಿ ಪ್ರತಿಭಟನೆ ನಡೆಸಲು ಮುಂದಾಗಿದ್ದು ಱಲಿಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಆಹ್ವಾನ ನೀಡಲಾಗಿದೆ.

ದೇವರಾಜ ಮಾರುಕಟ್ಟೆ ಶಿಥಿಲಗೊಂಡಿರುವ ಹಿನ್ನೆಲೆ ಅದನ್ನು ನೆಲಸಮ ಮಾಡಿ ಹೊಸದಾಗಿ ಕಟ್ಟಲು ಪಾಲಿಕೆ ಮುಂದಾಗಿದೆ. ಆದ್ರೆ 100 ವರ್ಷದ ಇತಿಹಾಸ ಹೊಂದಿರುವ ದೇವರಾಜ ಮಾರ್ಕೆಟ್ ಹೊಸದಾಗಿ ಕಟ್ಟುವ ಮೈಸೂರು ಪಾಲಿಕೆ ನಿರ್ಧಾರಕ್ಕೆ ವ್ಯಾಪಾರಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಪಾರಂಪರಿಕ ಕಟ್ಟಡವನ್ನ ಉಳಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಕಟ್ಟಡವನ್ನ ನವೀಕರಣ ಮಾಡಿ ಹೊಸದಾಗಿ ಕಟ್ಟ ಬೇಡಿ ಎಂದು ಪ್ರತಿಭಟನೆಗೆ ಮುಂದಾಗಿದ್ದಾರೆ.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ಇನ್ನು ಮತ್ತೊಂದೆಡೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಮೈಸೂರಿನಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನಾ ಱಲಿ ಹಮ್ಮಿಕೊಂಡಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಮೈಸೂರಿನ ಗಾಂಧಿ ವೃತ್ತದಲ್ಲಿ ಸಭೆ ನಡೆಯಲಿದ್ದು ಸಭೆ ಬಳಿಕ ಕಾಂಗ್ರೆಸ್ ಕಾರ್ಯಕರ್ತರಿಂದ ಪಾದಯಾತ್ರೆ ನಡೆಯುತ್ತೆ. ಗಾಂಧಿ ವೃತ್ತದಿಂದ ಮೈಸೂರು ಡಿಸಿ ಕಚೇರಿಯವರೆಗೆ ಱಲಿ ನಡೆಯಲಿದೆ. ಈಶ್ವರಪ್ಪರನ್ನ ಬಂಧಿಸುವಂತೆ ಮೈಸೂರು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತೆ.

ಪ್ರತಿಭಟನಾ ಮೆರವಣಿಗೆಗೆ ರಾಜವಂಶಸ್ಥ ಯದುವೀರ್ ಚಾಲನೆ ದೇವರಾಜ ಮಾರುಕಟ್ಟೆ ನೆಲಸಮಕ್ಕೆ ಪಾರಂಪರಿಕ ಸಮಿತಿ ಅಸ್ತು ಹಿನ್ನೆಲೆ ಮೈಸೂರಿನ ದೇವರಾಜ ಮಾರುಕಟ್ಟೆ ಸಮಿತಿಯಿಂದ ಹೋರಾಟ ನಡೆಯುತ್ತಿದೆ. ಪ್ರತಿಭಟನಾ ಮೆರವಣಿಗೆಗೆ ರಾಜವಂಶಸ್ಥ ಯದುವೀರ್ ಚಾಲನೆ ನೀಡಿದ್ದಾರೆ. ಈವರೆಗೆ ಮಾರುಕಟ್ಟೆಯ ಯಾವುದೇ ಅಂಗಡಿ ವರ್ತಕರು ತೆರೆದಿಲ್ಲ. ದೇವರಾಜ ಮಾರುಕಟ್ಟೆಯಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ಶುರುವಾಗಿದ್ದು ದೇವರಾಜ ಮಾರ್ಕೆಟ್, ಲ್ಯಾನ್ಸ್​ಸ್ಟೋನ್ ಬಿಲ್ಡಿಂಗ್ ಉಳಿಸಲು ಒತ್ತಾಯಿಸಲಾಗಿದೆ.

ಇನ್ನು ದೇವರಾಜ ಮಾರುಕಟ್ಟೆಗೆ 100 ವರ್ಷ ಆಗಿದೆ ಅದನ್ನು ಕೆಡವಬೇಕು ಅನ್ನೋ ವಿಚಾರಕ್ಕೆ ಸಂಬಂಧಿಸಿ ಮೈಸೂರು ಅರಮನೆಯನ್ನು ಕಟ್ಟಿ 100 ವರ್ಷದ ಮೇಲಾಗಿದೆ. ಈಗ ಅರಮನೆ ಕೆಡವಿ ಬೇರೆ ಕಟ್ಟಲು ಆಗುತ್ತಾ? ಎಂದು ಮೈಸೂರಿನಲ್ಲಿ ರಾಜವಂಶಸ್ಥ ಯದುವೀರ್ ಪ್ರಶ್ನಿಸಿದ್ದಾರೆ. ಮೈಸೂರಿನ ಸಂಸ್ಕೃತಿ ಪಾರಂಪರಿಕ ಕಟ್ಟಡಗಳ ಜೊತೆ ಬೆರೆತಿದೆ. ನೂರು ವರ್ಷ ಆಗಿದೆ ಎಂದು ಕಟ್ಟಡಗಳನ್ನು ಒಡೆಯುತ್ತಾ ಹೋದರೆ ಪಾರಂಪರಿಕತೆ ಉಳಿಯುತ್ತಾ? ಒಂದು ಪಾರಂಪರಿಕ ಕಟ್ಟಡ ಕೆಡವಿದ ಮೇಲೆ ಅದೇ ಮಾದರಿಯಲ್ಲಿ ಕಟ್ಟಿದರೂ ಕೂಡಾ ಆ ಕಟ್ಟಡಕ್ಕೆ ಹಳೇ ಇತಿಹಾಸ ಬರುವುದಿಲ್ಲ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಪಾರಂಪರಿಕ ಕಟ್ಟಡ ಉಳಿಸುವ ಹೊಸ ತಜ್ಞರ ಸಮಿತಿ ರಚನೆ ಮಾಡಬೇಕು. ಜನರ ಅಭಿಪ್ರಾಯಗಳಿಗೆ, ಭಾವನಗಳಿಗೆ ಸ್ಪಂದಿಸುವುದು ಸರ್ಕಾರದ ಜವಾಬ್ದಾರಿ. ನಮ್ಮ ವಂಶದ ಖಾಸಗಿ ಆಸ್ತಿಗಳ ನವೀಕರಣ ಅದು ಬೇರೆ ವಿಚಾರ. ಆದರೆ ಸಾರ್ವಜನಿಕರ ಸ್ವತ್ತಿನ ಕಟ್ಟಡಗಳದ್ದು ಬೇರೆಯ ವಿಚಾರ. ಅರಮನೆಯ ಆಸ್ತಿಯ ವಿಚಾರಕ್ಕೂ ಸಾರ್ವಜನಿಕರ ಸ್ವತ್ತಿನ ಪಾರಂಪರಿಕ ಕಟ್ಟಡಗಳಿಗೂ ಸಂಬಂಧ ಕಲ್ಪಿಸಬೇಡಿ ಎಂದರು.

ಇದನ್ನೂ ಓದಿ: ‘ಕೆಜಿಎಫ್​ 2’ನಲ್ಲಿ ರವೀನಾ ಟಂಡನ್​ ಕಂಡು ಥಿಯೇಟರ್​ ಪರದೆಗೆ ದುಡ್ಡು ಎಸೆದ ಫ್ಯಾನ್ಸ್​; ವಿಡಿಯೋ ಹಂಚಿಕೊಂಡ ನಟಿ

ಚಾಣಕ್ಯ ನೀತಿ: ವ್ಯಕ್ತಿಯನ್ನು ಶ್ರೀಮಂತವಾಗಿಸುತ್ತವೆ ಈ ನಾಲ್ಕು ಅಭ್ಯಾಸಗಳು..

Published On - 8:28 am, Wed, 20 April 22

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್