ಮೈಸೂರು: ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ ವಿರೋಧ; ಕನ್ನಡ ವೇದಿಕೆಯಿಂದ ಪ್ರತಿಭಟನೆ
ರೋಪ್ ವೇ ನಿರ್ಮಾಣದಿಂದ ಸಾವಿರಾರು ಮರ ಕಾಡು ನಾಶ ಆಗುತ್ತದೆ. ಚಾಮುಂಡಿ ಬೆಟ್ಟ ಹಾಳು ಮಾಡುವುದು ಬೇಡ. ಯಾವುದೇ ಕಾರಣಕ್ಕೂ ಸರ್ಕಾರ ಈ ಯೋಜನೆ ಜಾರಿ ಮಾಡಬಾರದು ಎಂದು ಪ್ರತಿಭಟನಾನಿರತರು ಒತ್ತಾಯ ಮಾಡಿದ್ದಾರೆ.
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ವಿಚಾರಕ್ಕೆ ವಿರೋಧ ವ್ಯಕ್ತವಾಗಿದೆ. ರೋಪ್ ವೇ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಮೈಸೂರು ಕನ್ನಡ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ಬಳಿ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಚಾಮುಂಡಿ ಬೆಟ್ಟಕ್ಕೆ ಸಾಕಷ್ಟು ಮಾರ್ಗಗಳು ಇವೆ. ಸರ್ಕಾರ ಹಣ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರುತ್ತಿದೆ ಎಂದು ಆರೋಪ ಮಾಡಲಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿ ನೆಪದಲ್ಲಿ ಅರಣ್ಯ ಸಂಪತ್ತು ಹಾಳು ಮಾಡಲು ಸರ್ಕಾರ ಹೊರಟಿದೆ ಎಂದು ಆಕ್ರೋಶ ಕೇಳಿಬಂದಿದೆ.
ರೋಪ್ ವೇ ನಿರ್ಮಾಣದಿಂದ ಸಾವಿರಾರು ಮರ ಕಾಡು ನಾಶ ಆಗುತ್ತದೆ. ಚಾಮುಂಡಿ ಬೆಟ್ಟ ಹಾಳು ಮಾಡುವುದು ಬೇಡ. ಯಾವುದೇ ಕಾರಣಕ್ಕೂ ಸರ್ಕಾರ ಈ ಯೋಜನೆ ಜಾರಿ ಮಾಡಬಾರದು ಎಂದು ಪ್ರತಿಭಟನಾನಿರತರು ಒತ್ತಾಯ ಮಾಡಿದ್ದಾರೆ.
ವಿಷದ ಬೀಜ ತಿಂದು ಒದ್ದಾಡುತ್ತಿದ್ದ ಜಿಂಕೆಯನ್ನು ರಕ್ಷಿಸಿದ ದನಗಾಹಿಗಳು
ಮತ್ತೊಂದೆಡೆ ವಿಷದ ಬೀಜ ತಿಂದು ಒದ್ದಾಡುತ್ತಿದ್ದ ಜಿಂಕೆಯನ್ನು ದನಗಾಹಿಗಳು ರಕ್ಷಿಸಿದ ಘಟನೆ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕಟ್ಟೆ ಮಾದೇಶ್ವರ ಸ್ವಾಮಿ ದೇವಾಲಯದ ಸಮೀಪ ಇರುವ ಜಮೀನಿನಲ್ಲಿ ಒದ್ದಾಡುತ್ತಿದ್ದ ಜಿಂಕೆಯನ್ನು ರಕ್ಷಣೆ ಮಾಡಲಾಗಿದೆ. ಜಿಂಕೆ ಹುಲ್ಲು ತಿನ್ನುವ ವೇಳೆ ವಿಷದ ಬೀಜ ಸೇವನೆ ಮಾಡಿತ್ತು ಎಂದು ಹೇಳಲಾಗಿದೆ. ಇದನ್ನು ಗಮನಿಸಿದ ದನಗಾಹಿಗಳಾದ ರೇವಣ್ಣ ಮತ್ತು ಕರಿಯಪ್ಪರಿಂದ ಜಿಂಕೆಗೆ ನೀರು ಕುಡಿಸಿ ರಕ್ಷಣೆ ಮಾಡಲಾಗಿದೆ. ನೀರನ್ನು ಕುಡಿಸಿದ ಅರ್ಧ ಗಂಟೆಗಳ ಬಳಿಕ ಜಿಂಕೆಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಇದನ್ನೂ ಓದಿ: Crime News: ಬೆಂಗಳೂರಿನಲ್ಲಿ ಮುಂಬೈನ ಗ್ಯಾಂಗ್ಸ್ಟರ್ ಬಂಧನ, ಮೈಸೂರು ದೇವು ಹತ್ಯೆ ಪ್ರಕರಣದ 11 ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Published On - 12:34 pm, Tue, 8 March 22