ಜೆಎನ್ಯು ಘಟನೆ ಖಂಡಿಸಿ ಮೈಸೂರಿನಲ್ಲಿ ಮೊಳಗಿತು ಪ್ರತಿಭಟನೆ ಕೂಗು
ಮೈಸೂರು: ದೆಹಲಿಯ ಜೆಎನ್ಯು ಕ್ಯಾಂಪಸ್ನಲ್ಲಿ ದಾಂದಲೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ವಿವಿ ಮಾನಸಗಂಗೋತ್ರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಜೆಎನ್ಯು ಘಟನೆ ಖಂಡಿಸಿ ನಿನ್ನೆ ರಾತ್ರಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘ, ಮೈಸೂರು ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿಗಳ ಒಕ್ಕೂಟ ಮತ್ತು ಎಸ್ಎಫ್ಐ, ಬಹುಜನ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ಕ್ಲಾಕ್ಟವರ್ನಿಂದ ಕುವೆಂಪು ಪ್ರತಿಮೆವರೆಗೆ ಪಂಜಿನ ಮೆರವಣಿಗೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ’ ನಾಮಫಲಕ, ಪೋಸ್ಟರ್ಗಳ ಪ್ರದರ್ಶನ ಮಾಡಲಾಗಿದೆ. ಇದೇ ವೇಳೆ ಕೇಂದ್ರ ಸರ್ಕಾರ, ಎಬಿವಿಪಿ ವಿರುದ್ಧ ವಿದ್ಯಾರ್ಥಿಗಳು ಘೋಷಣೆ ಕೂಗುವ […]

ಮೈಸೂರು: ದೆಹಲಿಯ ಜೆಎನ್ಯು ಕ್ಯಾಂಪಸ್ನಲ್ಲಿ ದಾಂದಲೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ವಿವಿ ಮಾನಸಗಂಗೋತ್ರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಜೆಎನ್ಯು ಘಟನೆ ಖಂಡಿಸಿ ನಿನ್ನೆ ರಾತ್ರಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘ, ಮೈಸೂರು ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿಗಳ ಒಕ್ಕೂಟ ಮತ್ತು ಎಸ್ಎಫ್ಐ, ಬಹುಜನ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ಕ್ಲಾಕ್ಟವರ್ನಿಂದ ಕುವೆಂಪು ಪ್ರತಿಮೆವರೆಗೆ ಪಂಜಿನ ಮೆರವಣಿಗೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ’ ನಾಮಫಲಕ, ಪೋಸ್ಟರ್ಗಳ ಪ್ರದರ್ಶನ ಮಾಡಲಾಗಿದೆ. ಇದೇ ವೇಳೆ ಕೇಂದ್ರ ಸರ್ಕಾರ, ಎಬಿವಿಪಿ ವಿರುದ್ಧ ವಿದ್ಯಾರ್ಥಿಗಳು ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.