ಪಿಎಸ್​ಐ ಮರು ಪರೀಕ್ಷೆ ಸರ್ಕಾರದ ನಿರ್ಧಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲ

| Updated By: ಗಂಗಾಧರ​ ಬ. ಸಾಬೋಜಿ

Updated on: Apr 30, 2022 | 3:21 PM

ಶಾಸಕ ಪ್ರಿಯಾಂಕ್​ ಖರ್ಗೆಗೆ ಸಿಐಡಿ ನೋಟಿಸ್ ವಿಚಾರ ಮಾತನಾಡಿದ್ದು, ಪ್ರಿಯಾಂಕ್ ಖರ್ಗೆಗೆ ನೋಟಿಸ್​ ನೀಡುವ ಅಗತ್ಯ ಇರಲಿಲ್ಲ. ಅವರ ಬಳಿ ಏನ್ ದಾಖಲೆ ಇದೆಯೋ ಅದನ್ನ ಕೇಳಬಹುದಿತ್ತು. ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಸಾಕ್ಷ್ಯ ಸಂಗ್ರಹಿಸಬೇಕು.

ಪಿಎಸ್​ಐ ಮರು ಪರೀಕ್ಷೆ ಸರ್ಕಾರದ ನಿರ್ಧಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲ
ಮಾಜಿ ಸಿಎಂ ಸಿದ್ದರಾಮಯ್ಯ
Follow us on

ಮೈಸೂರು: ಪಿಎಸ್‌ಐ (PSI) ಮರು ಪರೀಕ್ಷೆಗೆ ಸರ್ಕಾರದ ನಿರ್ಧಾರ ವಿಚಾರ ಹಿನ್ನೆಲೆ ಸರ್ಕಾರದ ನಿರ್ಧಾರಕ್ಕೆ ಸಿದ್ದರಾಮಯ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ. ಪರಿಕ್ಷೆಯಲ್ಲಿ ಯಾರು ಅಕ್ರಮ ಮಾಡಿದ್ದಾರೆ, ಯಾರು ಸರಿಯಾಗಿ ಬರೆದಿದ್ದಾರೆ ಗೊತ್ತಾಗಲ್ಲ. ತನಿಖೆ ಮುಂದುವರಿದು 20 ಜನರ ಬಂಧನ ಆಗಿದೆ. ಈಗಿರುವಾಗ ಮರು ಪರೀಕ್ಷೆ ಮಾಡುವುದು ಸರಿ ಇದೆ. ಆದರೆ ಈಗ ಪರೀಕ್ಷೆ ಬರೆದಿರುವ ಯಾರ ಬಳಿಯೂ ಪರಿಕ್ಷಾ ಶುಲ್ಕ ಪಡೆಯಬಾರದು. ಬಿಜೆಪಿ ದುರಾಡಳಿತದಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಗೃಹ ಸಚಿವ ಆರಗ ಜ್ಞಾನೇಂದ್ರ ಒಂದು ಕ್ಷಣವೂ ಪದವಿಯಲ್ಲಿ ಮುಂದುವರಿಯಬಾರದು. ಮುಖ್ಯಮಂತ್ರಿ ಇದರ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಟಿ. ನರಸೀಪುರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಂಧಿತ ದಿವ್ಯಾ ಹಾಗರಗಿ ಸತ್ಯ ಹೇಳಲೇಬೇಕಲ್ವಾ? ಇದರ ಹಿಂದೆ ಯಾರಿದ್ದಾರೆ? ಹೇಗೆ ಪ್ರಶ್ನೆ ಪತ್ರಿಕೆ ಲೀಕ್ ಆಯ್ತು? ಎಲ್ಲಾ ಗೊತ್ತಾಗಬೇಕಲ್ವಾ? ಈ ಎಲ್ಲದರ ಬಗ್ಗೆ ತನಿಖೆ ಆಗಲಿ ಎಂದರು.

ಶಾಸಕ ಪ್ರಿಯಾಂಕ್​ ಖರ್ಗೆಗೆ ಸಿಐಡಿ ನೋಟಿಸ್ ವಿಚಾರ ಮಾತನಾಡಿದ್ದು, ಪ್ರಿಯಾಂಕ್ ಖರ್ಗೆಗೆ ನೋಟಿಸ್​ ನೀಡುವ ಅಗತ್ಯ ಇರಲಿಲ್ಲ. ಅವರ ಬಳಿ ಏನ್ ದಾಖಲೆ ಇದೆಯೋ ಅದನ್ನ ಕೇಳಬಹುದಿತ್ತು. ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಸಾಕ್ಷ್ಯ ಸಂಗ್ರಹಿಸಬೇಕು. ಅದನ್ನ ಬಿಟ್ಟು ನೋಟಿಸ್​​​​​​​​​​​ ಯಾಕೆ ಕೊಡಬೇಕು ಸಿದ್ದರಾಮಯ್ಯ ಪ್ರಶ್ನಿಸಿದರು. ಹಳೇ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು ವಿಚಾರವಾಗಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದು, ಪಶ್ಚಿಮ ಬಂಗಾಳದ ಮೇಲೂ ಇದೇ ರೀತಿ ನಿರೀಕ್ಷೆ ಇಟ್ಟುಕೊಂಡಿದ್ದರು ಆದರೆ ಏನಾಯ್ತು? ಇಲ್ಲೂ ಅದೇ ರೀತಿ ಆಗಲಿದೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ವಿಚಾರ ನನಗೆ ಕ್ಷೇತ್ರ ಇಲ್ಲ ಅಂತಲ್ಲ. ಬಾದಾಮಿ ಇಲ್ವಾ? ಅಲ್ಲಿಂದಲೇ ಮತ್ತೆ ಸ್ಪರ್ಧಿಸಿದರೂ ಸ್ಪರ್ಧಿಸಬಹುದು. ಸುಮಾರು 20 ಕ್ಷೇತ್ರಗಳಲ್ಲಿ ಜನ ಕರೆಯುತ್ತಿದ್ದಾರೆ. ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಕೋಲಾರ ಎಲ್ಲ ಕಡೆ ಕರೆಯುತ್ತಿದ್ದಾರೆ. ಚುನಾವಣೆಗೆ ತುಂಬಾ ದಿನ ಇದೆ. ಹತ್ತಿರ ಬಂದಾಗ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.

ಹಿಂದಿ ರಾಷ್ಟ್ರ ಭಾಷೆ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಂವಿಧಾನ 15 ಭಾಷೆಗಳನ್ನು ಅಧಿಕೃತ ಭಾಷೆಗಳಿಗೆ ಮಾನ್ಯತೆ ನೀಡಿದೆ. ಹಿಂದಿ ಕೂಡ ಒಂದು ಭಾಷೆ ಅದು ರಾಷ್ಟ್ರ ಭಾಷೆ ಅಂತ ಎಲ್ಲಿಯೂ ಹೇಳಿಲ್ಲ. ಅಮಿತ್ ಶಾ ಸಂಪರ್ಕ ಭಾಷೆಯಾಗಿ ಬಳಸಬೇಕು ಅಂದಿರುವ ಕಾರಣಕ್ಕಾಗಿ ಬಿಜೆಪಿಯವರು ಓಲೈಕೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸೋನಿಯಾ ಗಾಂಧಿ ಗುಲಾಮ ಎಂಬ ಹೇಳಿಕೆ ವಿಚಾರವಾಗಿ ಹೇಳಿಕೆ ನೀಡಿದ್ದು, ಶಾಸಕ ಸಿ.ಟಿ.ರವಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾರು ಯಾರಿಗೂ ಗುಲಾಮರಲ್ಲ. ಅಮಿತ್ ಶಾ ಓಲೈಸಿ ಮಾತನಾಡಿದ್ದಕ್ಕೆ ಸಿಟಿ.ರವಿಯನ್ನು ಗುಲಾಮ ಎಂದಿದ್ದು. ಸೋನಿಯಾ ಗಾಂಧಿ ಹಿಂದಿ ರಾಷ್ಟ್ರೀಯ ಭಾಷೆ ಅಂದಿದ್ದಾರಾ? ರಾಹುಲ್ ಗಾಂಧಿ ಆ ರೀತಿ ಮಾತನಾಡಿದ್ದಾರಾ ಪ್ರಜಾಪ್ರಭುತ್ವದಲ್ಲಿ ಯಾರಿಗೆ ಯಾರೂ ಗುಲಾಮರಲ್ಲ ಎಂದು ಹೇಳಿದರು.

ಇದನ್ನೂ ಓದಿ;

ಆಟೋ ಹಾಗೂ ಖಾಸಗಿ ಬಸ್​ ನಡುವೆ ಭೀಕರ ಅಪಘಾತ: ಆಟೋ ಚಾಲಕ ಸ್ಥಳದಲ್ಲೇ ದುರ್ಮರಣ

Yuvraj Singh: ವಿರಾಟ್ ಚೆನ್ನಾಗಿ ಆಡ್ತಿಲ್ಲ…ಕೊಹ್ಲಿಯ ಕೆಟ್ಟ ಫಾರ್ಮ್​ ಬಗ್ಗೆ ಯುವಿ ಹೇಳಿದ್ದೇನು?