AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2021: ಅಕ್ಟೋಬರ್ 1ರಂದು ಮೈಸೂರು ಅರಮನೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಅಕ್ಟೋಬರ್ 1ರಿಂದ ಅರಮನೆಯಲ್ಲಿ ರಾಜವಂಶಸ್ಥರಿಂದ ಸಾಂಪ್ರದಾಯಿಕ ದಸರಾ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆಯೊಳಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.

Mysuru Dasara 2021: ಅಕ್ಟೋಬರ್ 1ರಂದು ಮೈಸೂರು ಅರಮನೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ
ಮೈಸೂರು ಅರಮನೆ ಆವರಣ
TV9 Web
| Edited By: |

Updated on:Sep 23, 2021 | 9:29 AM

Share

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಕ್ಷಣಗಣನೆ ಆರಂಭವಾಗಿದೆ. ರಾಜ ಪರಂಪರೆಯ ಅರಮನೆಯಲ್ಲಿ ದಸರಾ ಸಿದ್ದತೆಗಳು ಮೇಳೈಸುತ್ತಿವೆ. ಆದರೆ ಅಕ್ಟೋಬರ್ 1ರಂದು ಮೈಸೂರು ಅರಮನೆಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.

ಅರಮನೆಯಲ್ಲಿ ರಾಜವಂಶಸ್ಥರಿಂದ ಸಾಂಪ್ರದಾಯಿಕ ದಸರಾ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಮನೆ ಖಾಸಗಿ ದರ್ಬಾರ್ ಹಾಲ್‌ನಲ್ಲಿ ಅಕ್ಟೋಬರ್ 1 ಕ್ಕೆ ಶುಕ್ರವಾರ ಅಭಿಜಿತ್ ಲಗ್ನದಲ್ಲಿ ಸಿಂಹಾಸನ ಜೋಡಣಾ ಕಾರ್ಯ ನಡೆಯಲಿದೆ. ಸಿಂಹಾಸನ ಜೋಡಣೆಗೂ ಮುನ್ನ ಹೋಮ ಹವನ ಮಾಡಲಾಗುತ್ತೆ. ಹೀಗಾಗಿ ಅಕ್ಟೋಬರ್ 1ರಂದು ಮೈಸೂರು ಅರಮನೆಯೊಳಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.

ಮತ್ತೊಂದು ಕಡೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2021ಕ್ಕೆ ಗಜಪಡೆಗೆ ತಾಲೀಮು ನಡೆಯುತ್ತಿದೆ. ಜಂಬೂಸವಾರಿ ಕ್ಯಾಪ್ಟನ್ ಅಭಿಮನ್ಯು ಆನೆಗೆ ಮತ್ತೆ ತಾಲೀಮು ಮಾಡಿಸಲಾಗುತ್ತಿದೆ. ಮೊದಲಿಗೆ 200 ಕೆಜಿ ಭಾರ ಹೊರಿಸಿ ತಾಲೀಮು ಮಾಡಲಾಯಿತು. ಇಂದು 500 ಕೆಜಿ ಭಾರವನ್ನು ಹೊರಿಸಿ ತಾಲೀಮು ಮಾಡಿಸಲಾಗುತ್ತಿದೆ. ಹಂತ ಹಂತವಾಗಿ ತೂಕವನ್ನು ಹೆಚ್ಚಿಸಿ ಮೈಸೂರು ಅರಮನೆ ಆವರಣದಲ್ಲಿಯೇ ಕ್ಯಾಪ್ಟನ್ ಅಭಿಮನ್ಯುಗೆ ತಾಲೀಮು ನಡೆಸಲಾಗುತ್ತಿದೆ. ಮೈಸೂರು ದಸರಾ ದಿನದಂದು ಕ್ಯಾಪ್ಟನ್ ಅಭಿಮನ್ಯು 750 ಕೆಜಿಯ ಅಂಬಾರಿ ಹೊರಲಿದ್ದಾನೆ.

ಇದನ್ನೂ ಓದಿ: Mysuru Dasara 2021: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ, ಗಜಪಡೆಗೆ ತೂಕ ಹೊರಿಸಿ ತಾಲೀಮು

ಮೈಸೂರು ದಸರಾ ಮಹೋತ್ಸವ 2021: ಈ ಬಾರಿಯ ದಸರಾ ಬಗ್ಗೆ ವಿವರಣೆ ನೀಡಿದ ಸಚಿವ ಎಸ್​ಟಿ ಸೋಮಶೇಖರ್

Published On - 9:17 am, Thu, 23 September 21

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್