AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು: ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯಕ್ಷಗಾನ ಕಲಾವಿದರು ಮೇಳಕ್ಕೆಂದು 6-8 ತಿಂಗಳು ತಿರುಗಾಟದಲ್ಲೇ ಇರುವುದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ ಎಂದಿದ್ದಾರೆ.

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು: ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ
ಪುರುಷೋತ್ತಮ ಬಿಳಿಮಲೆ
ರಾಮ್​, ಮೈಸೂರು
| Edited By: |

Updated on:Nov 19, 2025 | 10:13 AM

Share

ಮೈಸೂರು, ನವೆಂಬರ್​ 19: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದು, ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಸೂರಿನ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು ಹಾಗೂ ನಾವು ಕೂಗುವ ಕೂಗು ಕೃತಿಗಳನ್ನು ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿರುವ ಆಡಿಯೋವೀಗ ವೈರಲ್​ ಆಗಿದೆ.

ಸತ್ಯವನ್ನು ಹೇಳಲು ಹಿಂಜರಿಯಬಾರದು. ಯಕ್ಷಗಾನ ಕಲಾವಿದರು ಮೇಳಕ್ಕೆಂದು 6-8 ತಿಂಗಳು ತಿರುಗಾಟದಲ್ಲೇ ಇರುವುದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹವೇ ಇರುತ್ತಿತ್ತು. ಸ್ತ್ರೀವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ಆ ಮೂಲಕ ರಂಗಭೂಮಿ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳಲಾಗ್ತಿತ್ತು ಎಂದು ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಇದನ್ನೂ ಓದಿ: ಇದು ಯಕ್ಷಗಾನ ಗೊಂಬೆಯಾಟ; ಸೂತ್ರದಲ್ಲೇ ಕಥೆ ಹೇಳುವ ಪರಿ ರೋಚಕ

‘ರಂಗಭೂಮಿ ಎದುರಿನಿಂದ ಕಾಣುವುದಕ್ಕಿಂದ ವಿಭಿನ್ನ’

ಈಗೆಲ್ಲ ನಿಮಗೆ ಸಿನಿಮಾ ಹೀರೋಯಿನ್​ಗಳು ಕ್ರಶ್​ ಆಗುವ ರೀತಿ, ನಮಗೆಲ್ಲ ಬಾಲ್ಯದಲ್ಲಿ ಯಕ್ಷಗಾನದ ಸ್ತ್ರೀವೇಶಧಾರಿಗಳು ಕ್ರಶ್​ ಆಗಿದ್ದರು. ಅವರು ರಂಗದ ಮೇಲೆ ಕುಣಿದರೆ ಚೆಂದವೋ ಚಂದ, ಅವರ ಮೇಲೆ ನಮಗೆ ಕಣ್ಣು ಇರುತ್ತಿತ್ತು. ಆದರೆ ಅವರ ಮೇಲೆ ಇರುತ್ತಿದ್ದ ಒತ್ತಡ ಬಹಳ. ಕಲಾವಿದ ಕಲಾವಿದರ ನಡುವೆ ಸಂಬಂಧಕ್ಕೆ ಒಪ್ಪದಿದ್ದರೆ ಮುಂದಿನ ವರ್ಷ ಮೇಳ ಸಿಗುವುದಿಲ್ಲ, ಅದು ಅವರ ಬದುಕಿನ ಪ್ರಶ್ನೆ. ಹೀಗಾಗಿ ರಂಗಭೂಮಿ ಎದುರಿನಿಂದ ಕಾಣುವುದಕ್ಕಿಂದ ವಿಭಿನ್ನವಾಗಿದೆ. ವಿದ್ವಾಂಸರು, ಜಾನಪದ ವಿದ್ವಾಂಸರು ಇದನ್ನ ತಿಳಿದು ಅರ್ಥ ಮಾಡಿಕೊಂಡು ಯಾರ ಭಾವನೆಗೆ ನೋವಾಗದಂತೆ ಬರೆದರೆ ಜಾನಪದಕ್ಕೆ ಇನ್ನೊಂದು ಹೊಸ ಆಯಾಮ ಬರುತ್ತೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:05 am, Wed, 19 November 25

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?