Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ರಾತ್ರಿ 9 ಗಂಟೆ ವರೆಗೂ ಪ್ರವಾಸಿಗರಿಗೆ ಅರಮನೆ ಭೇಟಿಗೆ ಅವಕಾಶ ನೀಡಲು ಚಿಂತನೆ

ಮೈಸೂರು ಅರಮನೆಗೆ ಸಂಜೆ 6ಗಂಟೆಯ ನಂತರ ಪ್ರವಾಸಿಗರಿಗೆ ನಿರ್ಬಂಧವಿತ್ತು. ಆದರೆ ಈಗ ರಾತ್ರಿ 9ಗಂಟೆ ವರೆಗೂ ಪ್ರವಾಸಿಗರಿಗೆ ಅರಮನೆಗೆ ಭೇಟಿ ನೀಡಲು ಅವಕಾಶ ಕೊಡಲು ಚಿಂತನೆ ನಡೆದಿದೆ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುವ ಸಲುವಾಗಿ ವರ್ಷದ 26 ವಾರಾಂತ್ಯಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಚಿಂತಿಸುತ್ತಿದೆ.

ಮೈಸೂರು: ರಾತ್ರಿ 9 ಗಂಟೆ ವರೆಗೂ ಪ್ರವಾಸಿಗರಿಗೆ ಅರಮನೆ ಭೇಟಿಗೆ ಅವಕಾಶ ನೀಡಲು ಚಿಂತನೆ
ಮೈಸೂರು ಅರಮನೆ
Follow us
TV9 Web
| Updated By: ಆಯೇಷಾ ಬಾನು

Updated on: Dec 20, 2023 | 12:59 PM

ಮೈಸೂರು, ಡಿ.20: ಅರಮನೆ ನಗರಿ ಮೈಸೂರಿನಲ್ಲಿ (Mysuru Palace) ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಮೈಸೂರು ಅರಮನೆಯಲ್ಲಿ ಮಾಗಿ ಉತ್ಸವಕ್ಕೆ ವೇದಿಕೆ ಸಿದ್ಧವಾಗಿದೆ. ಇದರ ನಡುವೆ ದಸರಾ (Mysuru Dasara) ಸಂಭ್ರಮವನ್ನು ಮೀರಿ ಪ್ರವಾಸೋದ್ಯಮವನ್ನು ಹೆಚ್ಚಿಸಲು ಮತ್ತು ಬ್ರಾಂಡ್ ಮೈಸೂರನ್ನು ಪ್ರಚಾರ ಮಾಡಲು ಉತ್ಸುಕವಾಗಿರುವ ರಾಜ್ಯ ಸರ್ಕಾರವು ಸಂಜೆ ಪ್ರವಾಸಿಗರಿಗೆ ಮೈಸೂರು ಅರಮನೆಯನ್ನು ತೆರೆಯಲು ಚಿಂತಿಸಿದೆ. ಜಿಲ್ಲಾಡಳಿತ ಮತ್ತು ಅರಮನೆ ಮಂಡಳಿಯು ರಾತ್ರಿ 9 ರವರೆಗೆ ಮೈಸೂರು ಅರಮನೆ ಪ್ರವಾಸಿಗರಿಗಾಗಿ ತೆರೆಯುವ ಬಗ್ಗೆ ಚಿಂತನೆ ನಡೆಸಿದೆ.

ಮೈಸೂರು ಅರಮನೆಯು ಪ್ರಪಂಚದಾದ್ಯಂತ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಹೀಗಾಗಿ ಕರ್ನಾಟಕ ಸರ್ಕಾರವು ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುವ ಸಲುವಾಗಿ ವರ್ಷದ 26 ವಾರಾಂತ್ಯಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಚಿಂತಿಸುತ್ತಿದೆ. ಈ ಹಿಂದೆ ಮೈಸೂರು ಅರಮನೆಗೆ ಸಂಜೆ 6ಗಂಟೆಯ ನಂತರ ಪ್ರವಾಸಿಗರಿಗೆ ನಿರ್ಬಂಧವಿತ್ತು. ಆದರೆ ಈಗ ರಾತ್ರಿ 9ಗಂಟೆ ವರೆಗೂ ಪ್ರವಾಸಿಗರಿಗೆ ಅರಮನೆಗೆ ಭೇಟಿ ನೀಡಲು ಅವಕಾಶ ಕೊಡಲು ಮುಂದಾಗಿದೆ.

ವೀಕೆಂಡ್ ಅಥವಾ ಒಂದು ದಿನದ ಪ್ರವಾಸ ಕೈಗೊಳ್ಳುವ ಪ್ರವಾಸಿಗರು ಚಾಮುಂಡಿ ಬೆಟ್ಟ ಸೇರಿದಂತೆ ಇತರೆ ಕಡೆಗಳಿಗೆ ಭೇಟಿ ನೀಡಿ ಅರಮನೆ ಭೇಟಿಗೆ ಬಂದಾಗ ಸಮಯದ ಅಭಾವದಿಂದ ಅರಮನೆಯನ್ನು ನೋಡಲಾಗದೆ ಹಿಂತಿರುವ ಬಗ್ಗೆ ತಿಳಿದುಬಂದಿದೆ. ಹೀಗಾಗಿ ಸಮಯವನ್ನು ಹೆಚ್ಚಿಸುವ ಬಗ್ಗೆ ಚಿಂತಿಸಲಾಗುತ್ತಿದೆ. ಇನ್ನು ಅರಮನೆ ಬಳಿ ಸಂಜೆ ವೇಳೆಯಲ್ಲಿ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚರ್ಚಿಸುತ್ತಿದೆ. ಇನ್ನೂ ಮೂರು ಗಂಟೆಗಳ ಕಾಲ ಅರಮನೆಯನ್ನು ತೆರೆಯಲು ಒಪ್ಪಿಗೆ ಸಿಕ್ಕರೆ ಆ ಪಾಳಿಯಲ್ಲಿ ಕೆಲಸ ಮಾಡಲು ಹೆಚ್ಚುವರಿ ಸಿಬ್ಬಂದಿಯ ಅವಶ್ಯಕತೆ ಬೀಳುತ್ತದೆ. ಹೀಗಾಗಿ ಅರಮನೆ ಮಂಡಳಿಯು ವೆಚ್ಚಗಳನ್ನು ಪೂರೈಸಲು ಪ್ರವೇಶ ಟಿಕೆಟ್ ಶುಲ್ಕವನ್ನು ದ್ವಿಗುಣಗೊಳಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಡಿಸೆಂಬರ್​ 22ರಿಂದ ಜ.1ರವರೆಗೆ ಮೈಸೂರಿನಲ್ಲಿ ಮಾಗಿ ಉತ್ಸವ

ಅರಮನೆಯಲ್ಲಿ ಮಾಗಿ ಸಂಭ್ರಮ

ಇನ್ನು ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಪ್ರವಾಸಿಗರನ್ನು ಸೆಳೆಯಲು ಅರಮನೆ ಮೈದಾನದಲ್ಲಿ ಮಾಗಿ ಹಬ್ಬ ಆಚರಿಸಲಾಗುತ್ತಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಎಲ್ಲಾ ಕಡೆ ಜಾಗೃತಿ ಫಲಕಗಳ ಪ್ರದರ್ಶನ ಮಾಡಲಾಗುವುದು ಎಂದು ಟಿವಿ9ಗೆ ಅರಮನೆ ಆಡಳಿತ ಮಂಡಳಿ ಉಪನಿರ್ದೇಶಕ ಟಿ ಎಸ್ ಸುಬ್ರಮಣ್ಯ ಮಾಹಿತಿ ನೀಡಿದ್ದಾರೆ.

ಈ ಬಾರಿ ಮಾಗಿ ಉತ್ಸವದ ವೇಳೆ ತಾಯಿ ಚಾಮುಂಡೇಶ್ವರಿ ಉತ್ಸವಮೂರ್ತಿ ವಿಶೇಷ ಮೆರವಣಿಗೆ ಇರಲಿದೆ. ರಾಜಲಾಂಛನದ ಜೊತೆಗೆ ಅರಮನೆ ಆವರಣದಲ್ಲಿ ಮೆರವಣಿಗೆ ನಡೆಯಲಿದೆ. 35 ವಿಧದ 4 ಲಕ್ಷ ಹೂವುಗಳ ಪ್ರದರ್ಶನ ಮಾಡಲಾಗುತ್ತಿದೆ. ಸೋಮನಾಥಪುರದ ಚನ್ನಕೇಶವ ದೇವಾಲಯ, ಕರ್ನಾಟಕದ‌ ನಕ್ಷೆ, ಹಂಪಿ ಕಲ್ಲಿನ ರಥ, ಶಿವಲಿಂಗ, ಮಲೈ ಮಹದೇಶ್ವರ ಮೂರ್ತಿ, ಮಹಾರಾಣಿ ಕೆಂಪಚೆಲುವ ನಂಜಮ್ಮಣ್ಣಿ ಮೂರ್ತಿ, ಉಳುವ ಯೋಗಿಯ ಕಲಾಕೃತಿಗಳು ಹೂವುಗಳಲ್ಲಿ ಅರಳಲಿವೆ. ಡಿ.22 ರಿಂದ 25ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ