ಮೈಸೂರು ಸೆ.23: ಪ್ರಶ್ನೆ ಪತ್ರಿಕೆ (Question Paper) ಮಾರಾಟವಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (Karnataka State Open University) ಬಿಕಾಂ ಕಂಪ್ಯೂಟರ್ ಇನ್ ಬ್ಯುಸಿನೆಸ್ ಪರೀಕ್ಷೆಯನ್ನು (Exam) ಮತ್ತೊಮ್ಮೆ ನಡೆಸಲು ನಿರ್ಧರಿಸಿದೆ. ವಿಶ್ವವಿದ್ಯಾಲಯ ಸದ್ಯದರಲ್ಲೇ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಿದೆ. ಪ್ರಶ್ನೆ ಪತ್ರಿಕೆ ಮಾರಾಟ ಪ್ರಕರಣದಲ್ಲಿ ಜಯಲಕ್ಷ್ಮಿಪುರಂ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನವೀನ್, ಮುರುಳೀಧರ್ ಬಂಧಿತ ಆರೋಪಿಗಳು.
ಪರೀಕ್ಷೆಗೆ ಒಂದು ದಿನ ಮೊದಲೇ ವಿಶ್ವವಿದ್ಯಾಲಯದ ಬಿಕಾಂನ ಕಂಪ್ಯೂಟರ್ ಇನ್ ಬಿಸಿನೆಸ್ ವಿಷಯದ ಪ್ರಶ್ನೆ ಪತ್ರಿಕೆ ಮಾರಾಟವಾಗಿತ್ತು. ಕೆಎಸ್‌ಓಯು ಮಂಗಳೂರು ಕೇಂದ್ರದ ಸಿಬ್ಬಂದಿ 2000 ರೂ.ಗೆ ಮಾರಾಟ ಮಾಡಿದ್ದಾರೆ. ಪ್ರಶ್ನೆ ಪತ್ರಿಕೆಯನ್ನು ವಾಟ್ಸಾಪ್ ಮೂಲಕ ಆರೋಪಿಗಳಿಗೆ ಕಳುಹಿಸಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ಮುಕ್ತವಾಗಿ ವಿವರಿಸಿದ ವಿವಿಯ ಉಪನ್ಯಾಸಕ!
ಇನ್ನು ಆರೋಪಿಗಳು ಪರಿಶೀಲನೆ ಮಾಡಲು ಹಣ ನೀಡಿ ಪ್ರಶ್ನೆ ಪತ್ರಿಕೆ ಖರೀದಿಸಿರುವ ಆರೋಪ ಕೇಳಿಬಂದಿದೆ. ಪರೀಕ್ಷೆ ದಿನ ನೀಡಿದ ಪ್ರಶ್ನೆ ಪತ್ರಿಕೆ ಹಾಗೂ ಮಾರಾಟವಾದ ಪ್ರಶ್ನೆ ಪತ್ರಿಕೆ ಎರಡು ಒಂದೇ ಆಗಿದ್ದವು. ಈ ಬಗ್ಗೆ ಚಂದು.ಹೆಚ್.ಎಸ್. ಎಂಬ ವಿದ್ಯಾರ್ಥಿ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ