Raghu Achar: ನನ್ನ ಮರ್ಯಾದೆ ಪ್ರಶ್ನೆ ಇದು, ಯಾರಾದರೂ ಕಾಂಗ್ರೆಸ್‌ಗೆ ಮತ ನೀಡಿದರೆ ಓಡಿಸಿಬಿಡುತ್ತೇನೆ

ಯಾರಾದರೂ ಕಾಂಗ್ರೆಸ್‌ಗೆ ವೋಟ್ ಹಾಕಿದ್ರೆ ಓಡಿಸ್ಬುಡ್ತೀನಿ, ಇದು ನನ್ನ ಮರ್ಯಾದೆ ಪ್ರಶ್ನೆ ಇದೆ ಎಂದು ಮಾಜಿ ಎಂಎಲ್​ಸಿ ರಘು ಆಚಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Raghu Achar: ನನ್ನ ಮರ್ಯಾದೆ ಪ್ರಶ್ನೆ ಇದು, ಯಾರಾದರೂ ಕಾಂಗ್ರೆಸ್‌ಗೆ ಮತ ನೀಡಿದರೆ ಓಡಿಸಿಬಿಡುತ್ತೇನೆ
Raghu Achar
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 11, 2023 | 4:52 PM

ಹುಣಸೂರು: ನನ್ನ ಮರ್ಯಾದೆ ಪ್ರಶ್ನೆ ಇದು, ಯಾರಾದರೂ ಕಾಂಗ್ರೆಸ್‌ಗೆ ಮತ ನೀಡಿದರೆ ಓಡಿಸಿಬಿಡುತ್ತೇನೆ ಎಂದು ಮಾಜಿ ಎಂಎಲ್​ಸಿ ರಘು ಆಚಾರ್ (Raghu Achar) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇವರಾಜ ಅರಸು ಕರ್ಮ ಭೂಮಿಯಲ್ಲಿ ನಿಂತು ಸಮುದಾಯಕ್ಕೆ ಕೆಲಸ ಮಾಡುತ್ತೇನೆ ಎಂದು ರಘು ಆಚಾರ್ ಹುಣಸೂರಿಗೆ ಹೇಳಿಕೆ ನೀಡಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ ಜತೆ ಹುಣಸೂರಿಗೆ ಭೇಟಿ ನೀಡಿದ್ದ ರಘು ಆಚಾರ್, ಡಿ.ದೇವರಾಜ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಅರಸು ಹುಟ್ಟೂರು ಕಳ್ಳಹಳ್ಳಿಗೂ ಭೇಟಿ ನೀಡಿ ಡಿ.ದೇವರಾಜ ಅರಸು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಡಿ.ದೇವರಾಜ ಅರಸು ಧೀಮಂತ ನಾಯಕರು, ಅವರು ಹಿಂದುಳಿದ ವರ್ಗಗಳ ನಿಜವಾದ ನಾಯಕ, ಹಾಗಾಗಿ ನಾನು ರಾಜಕೀಯ ಶುರು ಮಾಡುವಾಗ ಡಿ.ದೇವರಾಜ ಅರಸುಗೆ ಪೂಜೆ ಸಲ್ಲಿಸಿದ್ದೇನೆ, ಜೆಡಿಎಸ್​​ಗೆ ಸೇರ್ಪಡೆ ಬಳಿಕವೂ ಅವರ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗ: ತಪ್ಪಿದ ಕಾಂಗ್ರೆಸ್ ಟಿಕೆಟ್, ರಘು ಆಚಾರ್ ಜೆಡಿಎಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಹಿಂದುಳಿದ ವರ್ಗಗಳ ನಾಯಕ ಎನಿಸಿಕೊಂಡಿರುವ ಯಾರು ಹಿಂದುಳಿದ ಸಮುದಾಯಗಳಿಗೆ ಏನು ಮಾಡಿಲ್ಲ, ಅಹಿಂದ ಏನೂ ನಡೆಯಲ್ಲ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹುಣಸೂರಿನಲ್ಲಿ ರಘು ಆಚಾರ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಕಾಂಗ್ರೆಸ್​ ತೊರೆದು ಜೆಡಿಎಸ್ ಸೇರ್ಪಡೆಯಾಗಿರುವ ರಘು ಆಚಾರ್ ಅರಸು ಅವರಿಂದ ಮಾತ್ರ ಹಿಂದುಳಿದ ವರ್ಗದ ಎಲ್ಲಾ ಸಮುದಾಯಗಳಿಗೆ ನ್ಯಾಯ ಸಿಕ್ಕಿದೆ. ಅದಕ್ಕಾಗಿ ಹಿಂದಿನಿಂದಲೂ ನಾನು ಇಲ್ಲಿಗೆ ಬಂದು ಹೋಗುತ್ತೇನೆ ಎಂದು ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​​ನಲ್ಲಿ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡಿರುವ ಮಾಜಿ ಎಂಎಲ್​ಸಿ ರಘು ಆಚಾರ್, ಜೆಡಿಎಸ್ ಸೇರ್ಪಡೆಗೊಂಡು ಕಾಂಗ್ರೆಸ್ ವಿರುದ್ಧ ತೊಡೆತಟ್ಟಲು ಸಜ್ಜಾಗುತ್ತಿದ್ದಾರೆ.

Published On - 4:52 pm, Tue, 11 April 23

ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್