AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Lakshmi Scheme: ಗೃಹ ಲಕ್ಷ್ಮಿ ಯೋಜನೆಗಿಂದು ಚಾಲನೆ; ಮೈಸೂರಿನಲ್ಲಿ ಹೇಗಿದೆ ಸಿದ್ದತೆ?

ಮೈಸೂರಿನ ರಾಜ ಬೀದಿಗಳಲ್ಲಿ ಕಾಂಗ್ರೆಸ್​ನ ಫ್ಲೆಕ್ಸ್, ಬ್ಯಾನರ್​ಗಳು ರಾರಾಜಿಸುತ್ತಿವೆ. ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ನುಡಿದಂತೆ ನಡೆದಿದ್ದೇವೆ ಅಂತ ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತನ್ನ ಈಡೇರಿಸಲು ಸರ್ಕಾರ ಮುಂದಾಗಿದೆ. ಸದ್ಯ ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ, ಅದರಲ್ಲೂ ರಾಜ್ಯದ ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗುತ್ತಿದೆ.

Gruha Lakshmi Scheme: ಗೃಹ ಲಕ್ಷ್ಮಿ ಯೋಜನೆಗಿಂದು ಚಾಲನೆ; ಮೈಸೂರಿನಲ್ಲಿ ಹೇಗಿದೆ ಸಿದ್ದತೆ?
ಗೃಹ ಲಕ್ಷ್ಮಿ ಯೋಜನೆಗೆ ಸಕಲ ಸಿದ್ಧತೆ
ದಿಲೀಪ್​, ಚೌಡಹಳ್ಳಿ
| Edited By: ಆಯೇಷಾ ಬಾನು|

Updated on: Aug 30, 2023 | 7:08 AM

Share

ಮೈಸೂರು, ಆ.30: ಸಿದ್ದರಾಮಯ್ಯ(Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ” 100 ದಿನಗಳು” ಪೂರೈಸಿ ಮುಂದೆ ದಾಪುಗಾಲು ಇಡುತ್ತಿದೆ. ಮತ್ತೊಂದೆಡೆ ರಾಜ್ಯ ಸರ್ಕಾರದ(Karnataka Government) ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ(Gruha Lakshmi Scheme) ಇಂದು ಚಾಲನೆ ಸಿಗಲಿದೆ. ಈ ಎರಡೂ ಸಂಭ್ರಮಗಳನ್ನು ಅದ್ದೂರಿಯಾಗಿ ಆಚರಿಸಲು ಮೈಸೂರಿನಲ್ಲಿ(Mysuru) ವೇದಿಕೆ ಸಿದ್ಧವಾಗಿದೆ. ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲೆ ಅತಿ ಹೆಚ್ಚು ನಿರೀಕ್ಷೆ ಇದ್ದ ಯೋಜನೆ ಗೃಹಲಕ್ಷ್ಮಿ. ಇಂದು ಈ ಗೃಹಲಕ್ಷ್ಮಿ ಯೋಜನೆಗೆ ಅರಮನೆ ನಗರಲ್ಲಿ ಚಾಲನೆ ಸಿಗಲಿದೆ. ಯೋಜನೆ ಚಾಲನೆಗೆ ಸಾಂಸ್ಕೃತಿಕ ನಗರಿ ಶೃಂಗಾರಗೊಂಡಿದೆ.

ಮೈಸೂರಿನ ರಾಜ ಬೀದಿಗಳಲ್ಲಿ ಕಾಂಗ್ರೆಸ್​ನ ಫ್ಲೆಕ್ಸ್, ಬ್ಯಾನರ್​ಗಳು ರಾರಾಜಿಸುತ್ತಿವೆ. ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ನುಡಿದಂತೆ ನಡೆದಿದ್ದೇವೆ ಅಂತ ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತನ್ನ ಈಡೇರಿಸಲು ಸರ್ಕಾರ ಮುಂದಾಗಿದೆ. ಸದ್ಯ ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ, ಅದರಲ್ಲೂ ರಾಜ್ಯದ ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗುತ್ತಿದೆ. ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಾಕಲಾಗಿರುವ ಬೃಹತ್ ವೇದಿಕೆಯಲ್ಲಿ‌ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ್ ಖರ್ಗೆಯವರು ಬಟನ್ ಒತ್ತುವ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸದ್ಯ ಕಾರ್ಯಕ್ರಮಕ್ಕೆ ಸುಮಾರು 1 ಲಕ್ಷ ಜನರನ್ನು ಸೇರಿಸುವ ಉದ್ದೇಶ ಹೊಂದಿದ್ದು ಇದಕ್ಕಾಗಿ ಸಕಲ ಸಿದ್ದತೆಯನ್ನ ಸರ್ಕಾರ ಮಾಡಿಕೊಂಡಿದೆ.‌ಈಗಾಲೆ ಬೃಹತ್‌ ವೇದಿಕೆ‌ ನಿರ್ಮಾಣವಾಗಿದ್ದು.ಇಂದು 12 ಗಂಟೆಗೆ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರ ಜೊತೆ ಸಿಎಂ ಚಾಲನೆ ನೀಡಲಿದ್ದು, ಎಲ್ಲಾ ಸಿದ್ದತೆಗಳು ಪೂರ್ಣವಾಗಿವೆ.

ಇದನ್ನೂ ಓದಿ: Gruha Lakshmi Scheme: ನಾನೇ ಯಜಮಾನಿ ಎಂದು ರಂಗೋಲಿ ಹಾಕಿ ಗೃಹಲಕ್ಷ್ಮಿ ಯೋಜನೆಗೆ ಸ್ವಾಗತಕೋರಿದ ಮಹಿಳೆಯರು

ಇನ್ನು ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಲು ಡಿಸಿಎಂ ಡಿಕೆ ಶಿವಕುಮಾರ್ ಮೈಸೂರಿನಲ್ಲೇ ವಾಸ್ತವ್ಯ ಹೂಡಿ ಕಾರ್ಯಕ್ರಮದ ರೂಪುರೇಷೆ ಕಳೆದೆರಡುದಿನದಿಂದಲು ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ವೇದಿಕೆಗೆ ಸಿಎಂ ಸಿದ್ದರಾಮಯ್ಯ ಕೂಡ ಭೇಟಿ ನೀಡಿ ಡಿಸಿಎಂ ಜೊತೆ ಪರಿಶೀಲನೆ ನಡೆಸಿದ್ರು. ಇನ್ನು ವೇದಿಕೆಯಲ್ಲಿ ಒಂದು‌ ಲಕ್ಷ ಫಲಾನುಭವಿಗಳ ಜೊತೆ ರಾಜ್ಯದ ಪ್ರತಿ ಗ್ರಾ.ಪಂ ಕಚೇರಿ ಆವರಣದಲ್ಲು ಲೈವ್ ಮೂಲಕ ತೋರಿಸಲಾಗುತ್ತದೆ. ಇದಷ್ಟೆ ಅಲ್ಲದೆ ಅಲ್ಲಿ‌ ಕುಳಿತ ಫಲಾನುಭವಿಗಳ ಜೊತೆ ಕೂಡ ಸಂವಾದ ನಡೆಸಲು ಈಗಾಗಲೇ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಅದರ ಡ್ರೈ ರನ್ ನಿನ್ನೆ ಮಾಡಲಾಯಿತು.

ಮನೆ ಯಜಮಾನಿ ಖಾತೆಗೆ 2000 ರೂ

ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗುತ್ತಿದ್ದಂತೆ ಮನೆ ಯಜಮಾನಿ ಮಹಿಳೆ ಖಾತೆಗೆ ನೇರವಾಗಿ 2 ಸಾವಿರ ಜಮೆಯಾಗಲಿದೆ. ಸಧ್ಯ ಗೃಹಲಕ್ಷ್ಮಿ ಯೋಜನೆಯಲ್ಲಿ ಒಟ್ಟು ಒಂದು ಕೋಟಿ 11 ಲಕ್ಷದಷ್ಟು ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ 18 ಲಕ್ಷದಷ್ಡು ಫಾಲನುಭವಿಗಳ ಅರ್ಜಿಗಳಲ್ಲಿ ಟೆಕ್ನಿಕಲ್ ಸಮಸ್ಯೆಗಳು ಕಂಡುಬಂದಿವೆ. ಆಗಸ್ಟ್ 15 ರ ನಂತರ ಅರ್ಜಿ ಸಲ್ಲಿಕೆ ಮಾಡಿದ ಫಲಾನುಭವಿಗಳಿಗೆ ಮುಂದಿನ ತಿಂಗಳು ಹಣ ಜಮೆಯಾಗಲಿದೆ. ಈ ಯೋಜನೆಗೆ ಒಂದು ವರ್ಷಕ್ಕೆ 35 ಸಾವಿರ ಕೋಟಿ ವೆಚ್ಚವಾಗಲಿದೆ.

ಮಹಾರಾಜ ಕಾಲೇಜು ಮೈದಾನ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧ

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮಿ ಕಾರ್ಯಕ್ರಮ ಹಿನ್ನೆಲೆ ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 8ರಿಂದ ಸಂಜೆ 6ರವರೆಗೆ ವಾಹನ ಸಂಚಾರ ನಿರ್ಬಂಧ ಹೇರಿ ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ. ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಆಗಮಿಸುವ ಹಿನ್ನೆಲೆ ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತ ಸಂಚಾರ ನಿರ್ಬಂಧ ಹೇರಲಾಗಿದೆ. KSRTC ಬಸ್​ ಸೇರಿ ಎಲ್ಲಾ ವಾಹನಗಳಿಗೆ ಪರ್ಯಾಯ ಮಾರ್ಗ ನಿಗದಿ ಮಾಡಲಾಗಿದೆ. ಮಹಾರಾಜ ಕಾಲೇಜು ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧ. ಕಾರ್ಯಕ್ರಮಕ್ಕೆ ಬರುವ ವಾಹನಗಳ ಪಾರ್ಕಿಂಗ್​​ಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಮೈಸೂರು ನಗರದ ವಿವಿಧ ಮೈದಾನಗಳಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ