ಮೈಸೂರು, ಆ.30: ಸಿದ್ದರಾಮಯ್ಯ(Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ” 100 ದಿನಗಳು” ಪೂರೈಸಿ ಮುಂದೆ ದಾಪುಗಾಲು ಇಡುತ್ತಿದೆ. ಮತ್ತೊಂದೆಡೆ ರಾಜ್ಯ ಸರ್ಕಾರದ(Karnataka Government) ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ(Gruha Lakshmi Scheme) ಇಂದು ಚಾಲನೆ ಸಿಗಲಿದೆ. ಈ ಎರಡೂ ಸಂಭ್ರಮಗಳನ್ನು ಅದ್ದೂರಿಯಾಗಿ ಆಚರಿಸಲು ಮೈಸೂರಿನಲ್ಲಿ(Mysuru) ವೇದಿಕೆ ಸಿದ್ಧವಾಗಿದೆ. ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲೆ ಅತಿ ಹೆಚ್ಚು ನಿರೀಕ್ಷೆ ಇದ್ದ ಯೋಜನೆ ಗೃಹಲಕ್ಷ್ಮಿ. ಇಂದು ಈ ಗೃಹಲಕ್ಷ್ಮಿ ಯೋಜನೆಗೆ ಅರಮನೆ ನಗರಲ್ಲಿ ಚಾಲನೆ ಸಿಗಲಿದೆ. ಯೋಜನೆ ಚಾಲನೆಗೆ ಸಾಂಸ್ಕೃತಿಕ ನಗರಿ ಶೃಂಗಾರಗೊಂಡಿದೆ.
ಮೈಸೂರಿನ ರಾಜ ಬೀದಿಗಳಲ್ಲಿ ಕಾಂಗ್ರೆಸ್ನ ಫ್ಲೆಕ್ಸ್, ಬ್ಯಾನರ್ಗಳು ರಾರಾಜಿಸುತ್ತಿವೆ. ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ನುಡಿದಂತೆ ನಡೆದಿದ್ದೇವೆ ಅಂತ ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತನ್ನ ಈಡೇರಿಸಲು ಸರ್ಕಾರ ಮುಂದಾಗಿದೆ. ಸದ್ಯ ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ, ಅದರಲ್ಲೂ ರಾಜ್ಯದ ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗುತ್ತಿದೆ. ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಾಕಲಾಗಿರುವ ಬೃಹತ್ ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ್ ಖರ್ಗೆಯವರು ಬಟನ್ ಒತ್ತುವ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸದ್ಯ ಕಾರ್ಯಕ್ರಮಕ್ಕೆ ಸುಮಾರು 1 ಲಕ್ಷ ಜನರನ್ನು ಸೇರಿಸುವ ಉದ್ದೇಶ ಹೊಂದಿದ್ದು ಇದಕ್ಕಾಗಿ ಸಕಲ ಸಿದ್ದತೆಯನ್ನ ಸರ್ಕಾರ ಮಾಡಿಕೊಂಡಿದೆ.ಈಗಾಲೆ ಬೃಹತ್ ವೇದಿಕೆ ನಿರ್ಮಾಣವಾಗಿದ್ದು.ಇಂದು 12 ಗಂಟೆಗೆ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರ ಜೊತೆ ಸಿಎಂ ಚಾಲನೆ ನೀಡಲಿದ್ದು, ಎಲ್ಲಾ ಸಿದ್ದತೆಗಳು ಪೂರ್ಣವಾಗಿವೆ.
ಇದನ್ನೂ ಓದಿ: Gruha Lakshmi Scheme: ನಾನೇ ಯಜಮಾನಿ ಎಂದು ರಂಗೋಲಿ ಹಾಕಿ ಗೃಹಲಕ್ಷ್ಮಿ ಯೋಜನೆಗೆ ಸ್ವಾಗತಕೋರಿದ ಮಹಿಳೆಯರು
ಇನ್ನು ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಲು ಡಿಸಿಎಂ ಡಿಕೆ ಶಿವಕುಮಾರ್ ಮೈಸೂರಿನಲ್ಲೇ ವಾಸ್ತವ್ಯ ಹೂಡಿ ಕಾರ್ಯಕ್ರಮದ ರೂಪುರೇಷೆ ಕಳೆದೆರಡುದಿನದಿಂದಲು ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ವೇದಿಕೆಗೆ ಸಿಎಂ ಸಿದ್ದರಾಮಯ್ಯ ಕೂಡ ಭೇಟಿ ನೀಡಿ ಡಿಸಿಎಂ ಜೊತೆ ಪರಿಶೀಲನೆ ನಡೆಸಿದ್ರು. ಇನ್ನು ವೇದಿಕೆಯಲ್ಲಿ ಒಂದು ಲಕ್ಷ ಫಲಾನುಭವಿಗಳ ಜೊತೆ ರಾಜ್ಯದ ಪ್ರತಿ ಗ್ರಾ.ಪಂ ಕಚೇರಿ ಆವರಣದಲ್ಲು ಲೈವ್ ಮೂಲಕ ತೋರಿಸಲಾಗುತ್ತದೆ. ಇದಷ್ಟೆ ಅಲ್ಲದೆ ಅಲ್ಲಿ ಕುಳಿತ ಫಲಾನುಭವಿಗಳ ಜೊತೆ ಕೂಡ ಸಂವಾದ ನಡೆಸಲು ಈಗಾಗಲೇ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಅದರ ಡ್ರೈ ರನ್ ನಿನ್ನೆ ಮಾಡಲಾಯಿತು.
ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗುತ್ತಿದ್ದಂತೆ ಮನೆ ಯಜಮಾನಿ ಮಹಿಳೆ ಖಾತೆಗೆ ನೇರವಾಗಿ 2 ಸಾವಿರ ಜಮೆಯಾಗಲಿದೆ. ಸಧ್ಯ ಗೃಹಲಕ್ಷ್ಮಿ ಯೋಜನೆಯಲ್ಲಿ ಒಟ್ಟು ಒಂದು ಕೋಟಿ 11 ಲಕ್ಷದಷ್ಟು ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ 18 ಲಕ್ಷದಷ್ಡು ಫಾಲನುಭವಿಗಳ ಅರ್ಜಿಗಳಲ್ಲಿ ಟೆಕ್ನಿಕಲ್ ಸಮಸ್ಯೆಗಳು ಕಂಡುಬಂದಿವೆ. ಆಗಸ್ಟ್ 15 ರ ನಂತರ ಅರ್ಜಿ ಸಲ್ಲಿಕೆ ಮಾಡಿದ ಫಲಾನುಭವಿಗಳಿಗೆ ಮುಂದಿನ ತಿಂಗಳು ಹಣ ಜಮೆಯಾಗಲಿದೆ. ಈ ಯೋಜನೆಗೆ ಒಂದು ವರ್ಷಕ್ಕೆ 35 ಸಾವಿರ ಕೋಟಿ ವೆಚ್ಚವಾಗಲಿದೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮಿ ಕಾರ್ಯಕ್ರಮ ಹಿನ್ನೆಲೆ ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 8ರಿಂದ ಸಂಜೆ 6ರವರೆಗೆ ವಾಹನ ಸಂಚಾರ ನಿರ್ಬಂಧ ಹೇರಿ ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ. ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಆಗಮಿಸುವ ಹಿನ್ನೆಲೆ ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತ ಸಂಚಾರ ನಿರ್ಬಂಧ ಹೇರಲಾಗಿದೆ. KSRTC ಬಸ್ ಸೇರಿ ಎಲ್ಲಾ ವಾಹನಗಳಿಗೆ ಪರ್ಯಾಯ ಮಾರ್ಗ ನಿಗದಿ ಮಾಡಲಾಗಿದೆ. ಮಹಾರಾಜ ಕಾಲೇಜು ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ. ಕಾರ್ಯಕ್ರಮಕ್ಕೆ ಬರುವ ವಾಹನಗಳ ಪಾರ್ಕಿಂಗ್ಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಮೈಸೂರು ನಗರದ ವಿವಿಧ ಮೈದಾನಗಳಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ