ಕಾಂಗ್ರೆಸ್ನ ಭಾರತ್ ಜೋಡೋ 4ನೇ ದಿನದ ಪಾದಯಾತ್ರೆ ವೇಳೆ ಮಸೀದಿ ಚರ್ಚ್ಗೆ ಭೇಟಿ ನೀಡಿದ ರಾಹುಲ್ ಗಾಂಧಿ
ಕಾಂಗ್ರೆಸ್ನ 4ನೇ ದಿನದ ಪಾದಯಾತ್ರೆ ವೇಳೆ ರಾಹುಲ್ ಗಾಂಧಿ ನಗರದ ಮಸೀದಿ, ಚರ್ಚ್ಗಳಿಗೆ ಭೇಟಿ ನೀಡಿದ್ದಾರೆ. ಶಾಸಕ ತನ್ವೀರ್ ಸೇಠ್ ಅವರೊಂದಿಗೆ ನಗರದ ಆಜಂ ಮಸೀದಿಗೆ ರಾಹುಲ್ ಗಾಂಧಿ ಭೇಟಿ ನೀಡಿದರು.
ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ(Mysore Dasara 2022) ಸಂಭ್ರಮ ಮನೆ ಮಾಡಿದೆ ಇದರ ನಡುವೆ ಕಾಂಗ್ರೆಸ್ ನಾಯಕರು ಭಾರತ್ ಜೋಡೋ ಪಾದಯಾತ್ರೆಯನ್ನೂ(Bharat Jodo Yatra) ನಡೆಸುತ್ತಿದ್ದಾರೆ. ಮೈಸೂರಿನ ಹರ್ಡಿಂಗೆ ರಸ್ತೆಯಿಂದ ಕಾಂಗ್ರೆಸ್ನ 4ನೇ ದಿನದ ಪಾದಯಾತ್ರೆ ಆರಂಭವಾಗಿದ್ದು ರಾಹುಲ್ ಗಾಂಧಿ, ಡಿಕೆ ಶಿವಕುಮಾರ್, ಸಿದ್ರಾಮಯ್ಯ, ತನ್ವೀರ್ ಸೇಠ್, ಡಾ. ಯತೀಂದ್ರ ಭಾರೀ ಉತ್ಸಾಹದಿಂದ ಮೈಸೂರಿನ ಬೀದಿಗಳಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಸದ್ಯ ಪಾದಯಾತ್ರೆ ಮೈಸೂರು ನಗರ ದಾಟಿದ ಮೈಸೂರು ಹೊರವಲಯ ತಲುಪಿದೆ.
ಕಾಂಗ್ರೆಸ್ನ 4ನೇ ದಿನದ ಪಾದಯಾತ್ರೆ ವೇಳೆ ರಾಹುಲ್ ಗಾಂಧಿ ನಗರದ ಮಸೀದಿ, ಚರ್ಚ್ಗಳಿಗೆ ಭೇಟಿ ನೀಡಿದ್ದಾರೆ. ಶಾಸಕ ತನ್ವೀರ್ ಸೇಠ್ ಅವರೊಂದಿಗೆ ನಗರದ ಆಜಂ ಮಸೀದಿಗೆ ರಾಹುಲ್ ಗಾಂಧಿ ಭೇಟಿ ನೀಡಿದರು. ಹಾಗೂ ಇದೇ ವೇಳೆ ಮಸೀದಿ ಎದುರಲ್ಲಿರುವ ಮೈಸೂರಿನ ಪ್ರಸಿದ್ಧ ಸೇಂಟ್ ಫಿಲೋಮಿನಾ ಚರ್ಚ್ಗೂ ರಾಹುಲ್ ಗಾಂಧಿ ಭೇಟಿ ನೀಡಿದರು. ಇನ್ನು ಚಾಮರಾಜ ಕ್ಷೇತ್ರಕ್ಕೆ ಪಾದಯಾತ್ರೆ ತಗುಪಿದ ನಂತರ ಮಾಜಿ ಶಾಸಕ ವಾಸು ಕೂಡ ಪಾದಯಾತ್ರೆಯಲ್ಲಿ ಭಾಗಿಯಾದರು.
ರಾಹುಲ್ ಗಾಂಧಿಗೆ ಪೊಲೀಸ್ ಸರ್ಪಗಾವಲು
ಪಾದಯಾತ್ರೆ ಹಿನ್ನೆಲೆ ಮೈಸೂರು ನಗರದಲ್ಲಿ ರಾಹುಲ್ ಗೆ ಪೊಲೀಸ್ ಸರ್ಪಗಾವಲು ನೀಡಿದೆ. ಐನೂರಕ್ಕೂ ಹೆಚ್ಚು ಪೊಲೀಸರಿಂದ ಸೆಕ್ಯೂರಿಟಿ ನೀಡಲಾಗಿದ್ದು ಭದ್ರ ಪಹರೆಯ ನಡುವೆ ರಾಹುಲ್ ಗಾಂಧಿ ಹೆಜ್ಜೆ ಹಾಕುತ್ತಿದ್ದಾರೆ.
ಸೆಲ್ಫಿಗೆ ಮುಗಿಬಿದ್ದ ಕಾರ್ಯಕರ್ತರು
ಪಾದಯಾತ್ರೆ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಕಾರ್ಯಕರ್ತರು ಮುಗಿಬಿದ್ದ ಘಟನೆ ನಡೆಯಿತು. ಹಾಗೂ ತನ್ವೀರ್ ಸೇಠ್ ಅವರು ರಾಹುಲ್ ಅವರಿಗೆ ಕಾರ್ಯಕರ್ತರನ್ನು ಪರಿಚಯ ಮಾಡಿಕೊಡುವ ಕೆಲಸ ಮಾಡಿದರು. ಪಾದಯಾತ್ರೆ ಉದ್ದಕ್ಕೂ ಪಕ್ಷದ ಪದಾಧಿಕಾರಿಗಳು ಹಾಗೂ ಸಂಘಟಕರನ್ನ ಗುರುತಿಸಿ ತಾವೇ ಖುದ್ದಾಗಿ ರಾಹುಲ್ ಅವರಿಗೆ ಡಿಕೆ ಶಿವಕುಮಾರ್ ಪರಿಚಯ ಮಾಡಿಕೊಟ್ಟರು.
After the downpour of last night that created iconic images, day 26 of #BharatJodoYatra started on dot at 6:30 am from the heart of historic Mysuru. @RahulGandhi & padayatris will be walking 22 kms at a fast clip today, to reach end point 3 hours before usual schedule at 4:30 pm. pic.twitter.com/QzFFE33RKx
— Jairam Ramesh (@Jairam_Ramesh) October 3, 2022
ಮೈಸೂರಿಗೆ ಇಂದು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ; ಕೊಡಗಿನಲ್ಲಿ 2 ದಿನ ವಿಶ್ರಾಂತಿ
ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರು ಭಾರತ್ ಜೋಡೋ ಯಾತ್ರೆಯಲ್ಲಿ(Bharat Jodo Yatra) ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆ ಇಂದು ಮಧ್ಯಾಹ್ನದ ವೇಳೆಗೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ(Priyanka Gandhi) ಮೈಸೂರಿಗೆ ಆಗಮಿಸಲಿದ್ದಾರೆ ಎನ್ನಲಾಗಿದೆ. ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಸೋನಿಯಾ ಮತ್ತು ಪ್ರಿಯಾಂಕ ಆಗಮಿಸಲಿದ್ದಾರೆ.
ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಪಾದಯಾತ್ರೆ ಸದ್ಯ ಮೈಸೂರಿಗೆ ತಲುಪಿದ್ದು ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಯಾತ್ರೆಯಲ್ಲಿ ಭಾಗಿಯಾಗುವ ಮುನ್ನ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ವಿಮಾನ ನಿಲ್ದಾಣದಿಂದ ನೇರವಾಗಿ ಚಾಮುಂಡಿಬೆಟ್ಟಕ್ಕೆ ತೆರಳುವ ಸಾಧ್ಯತೆ ಇದೆ. ನಂತರ ಮತ್ತೆ ಹೆಲಿಕಾಫ್ಟರ್ ಮೂಲಕ ಕೊಡಗಿಗೆ ತೆರಳಲಿದ್ದಾರೆ. ಕೊಡಗಿನಲ್ಲಿ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇನ್ನು ಸಂಜೆ ವೇಳೆಗೆ ರಾಹುಲ್ ಗಾಂಧಿ ಕೂಡ ಕೊಡಗಿಗೆ ಹೋಗಿ ಕುಟುಂಬದ ಜೊತೆ ಎರಡು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಅಕ್ಟೋಬರ್ 6 ರಂದು ಮಂಡ್ಯದಲ್ಲಿ ಐಕ್ಯತಾ ರಾಲಿಯಲ್ಲಿ ರಾಹುಲ್, ಪ್ರಿಯಾಂಕ ಭಾಗಿಯಾಗಲಿದ್ದಾರೆ. ಒಂದು ದಿನದ ಪಾದಯಾತ್ರೆ ನಂತರ ಪ್ರಿಯಾಂಕ ವಾಪಸ್ಸು ಕೊಡಗಿಗೆ ತೆರಳಲಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:21 am, Mon, 3 October 22