ರವಿ ಚೆನ್ನಣ್ಣನವರ್ ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಅಷ್ಟೇ: ಗೃಹ ಸಚಿವ ಆರಗ ಜ್ಞಾನೇಂದ್ರ
ಯಾರು ಬೇಕಾದರೂ ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಇನ್ನೂ ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ವರ್ಗಾವಣೆ ಶಿಕ್ಷೆಯಲ್ಲ. ರವಿ ಚನ್ನಣ್ಣನವರ್ ಅವರ ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಎಂದು ಮೈಸೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.
ಮೈಸೂರು: ರವಿ ಚನ್ನಣ್ಣನವರ್ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂದಿರುವ ದೂರು ಆಧರಿಸಿ ತನಿಖೆ ಶುರುವಾಗಿದೆ. ಯಾರು ಬೇಕಾದರೂ ಯಾರ ಮೇಲೆ ಬೇಕಾದರೂ ಆರೋಪ ಮಾಡಬಹುದು. ಇನ್ನೂ ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ವರ್ಗಾವಣೆ ಶಿಕ್ಷೆಯಲ್ಲ. ರವಿ ಚನ್ನಣ್ಣನವರ್ ಅವರ ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಎಂದು ಮೈಸೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಹೇಳಿಕೆ ನೀಡಿದ್ದಾರೆ.
ರಾಷ್ಟ್ರ ಕಟ್ಟಲು ನಾವು ಬದುಕಬೇಕಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಕೊವಿಡ್ ಹಿನ್ನೆಲೆ ಪ್ರಶಿಕ್ಷಣಾರ್ಥಿಗಳ ಪೋಷಕರು ಭಾಗಿಯಾಗಿಲ್ಲ. ಒಂದು ಹೊಸ ರಕ್ತ ಗೃಹ ಇಲಾಖೆಗೆ ಸೇರ್ಪಡೆಯಾಗುತ್ತಿದೆ. ನಮ್ಮ ರಾಷ್ಟ್ರ ಧ್ವಜ ಪೊಲೀಸ್ ಧ್ವಜ ಒಟ್ಟಿಗೆ. ಅವರೆಡು ಬರಿ ಬಟ್ಟೆಯ ಚೂರಲ್ಲ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದಿಂದ ಗಳಿಸಿರುವ ಪವಿತ್ರ ಧ್ವಜ. ತ್ಯಾಗದ ಸಂದೇಶ ಇದರಲ್ಲಿ ಅಡಗಿದೆ. ರಾಷ್ಟ್ರ ಕಟ್ಟಲು ನಾವು ಬದುಕಬೇಕಿದೆ. ಬದುಕನ್ನು ಕಟ್ಟಿ ಮಡಿದರು ನಾವು ರಾಷ್ಟ್ರ ಕಟ್ಟಲು ಬದುಕಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಈ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ.
ಬಳಿಕ ಮಾತನಾಡಿದ ಅವರು, ರಕ್ಷಣೆ ಅಂದರೆ ಗಡಿಯ ಸೈನಿಕರು. ಆತಂರಿಕ ಭದ್ರತೆ ನಾಗರೀಕರ ಮಾನ ಪ್ರಾಣ ಕಾಪಾಡುವ ಹೊಣೆಗಾರಿಕೆ ಪೊಲೀಸರದ್ದು. ಸೈನಿಕರಷ್ಟೇ ಪೊಲೀಸರು 24*7 ಕೆಲಸ ಮಾಡುತ್ತಿದ್ದಾರೆ. ಸೈನಿಕರಿಗಿಂತ ಪೊಲೀಸರು ವಿಭಿನ್ನ. ಸೈನಿಕರಿಗೆ ಶತೃಗಳು ಕಾಣಿಸುತ್ತಾರೆ. ಕೊಲ್ಲಬೇಕು ಅಥವಾ ಮಡಿಯಬೇಕು. ಆದರೆ ಪೊಲೀಸರು ಕೊಲ್ಲಲು ಇಲ್ಲ ಕಾನೂನು ಇದಕ್ಕೆ ಅಡ್ಡಿಬರುತ್ತದೆ. ಸೈನಿಕರಷ್ಟು ಕಠಿಣವಾಗಿ ವರ್ತಿಸುವ ಹಾಗೆ ಇಲ್ಲ ಎಂದು ತಿಳಿಸಿದ್ದಾರೆ.
ಸಾರ್ವಜನಿಕರನ್ನು ಬಂಧುಗಳಂತೆ ನೋಡಬೇಕು. ಕಾನೂನು ವಿರೋಧಿಸುವ ಕ್ರಿಮಿನಲ್‌ಗಳಿಗೆ ಭಯ ಹುಟ್ಟಿಸಬೇಕು. ನಾಗರೀಕರಿಗೆ ಸಜ್ಜನರಿಗೆ ಅಭಯವನ್ನು ನೀಡಬೇಕು. ಕೆಲವು ಪೊಲೀಸರು ಅನಿಷ್ಟತನ ನೋಡಿದಾಗ ಉತ್ತಮ ನಡವಳಿಕೆಯವರು ತಲೆ ತಗ್ಗಿಸಬೇಕಾಗಿದೆ. ಒಮ್ಮೆಯೂ ತಲೆ ತಗ್ಗಿಸುವ ಕೆಲಸ ಮಾಡಬಾರದು. ಯಾವುದೇ ಅಪಚಾರಗಳು ನಮ್ಮಿಂದ ಆಗಬಾರದು. ನಾವು ಅವರ ರಕ್ಷಕರಾಗಬೇಕು ನಾವು ಯಾರ ಗುಲಾಮರಾಗಬಾರದು ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬಳಿಕ ಮಾತನಾಡಿದ ಅವರು, ಬಹಳ ಜನ ಹೇಳುತ್ತಾರೆ ಪೊಲೀಸ್ ಠಾಣೆಗಳು ಮರ್ಯಾದಸ್ಥರು ಹೋಗವ ಸ್ಥಳವಲ್ಲ ಅಂತಾ. ಇಲ್ಲಿ ಹಲವರು ಉನ್ನತ ಶಿಕ್ಷಣ ಪಡೆದವರಿದ್ದಾರೆ. ಈ ತರಬೇತಿ ನೀಡಿರುವುದು ಯಾರಿಗೂ ಹಿಂಸೆ ಕೊಡಲು ಅಲ್ಲ. ಇದು ಜನರ ರಕ್ಷಣೆಗೆ ನೀಡಿರುವ ತರಬೇತಿ. ಸೈಬರ್ ವಿಂಗ್ ಎಫ್‌ಎಸ್‌ಎಲ್ ವಿಭಾಗವನ್ನು ಬಲಪಡಿಸುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ಎಫ್‌ಎಸ್‌ಎಲ್ ಲ್ಯಾಬ್‌ಗೆ ಚಿಂತನೆ ಮಾಡಿದ್ದೇವೆ. ಉತ್ತಮ ಶಸ್ತ್ರಾಸ್ತ್ರ ನಿಮಗೆ ಕೊಡುತ್ತಿದ್ದೇವೆ. ಹೆಣ್ಣು ಕೇವಲ ಅಡುಗೆ ಮನೆಗೆ ಸೀಮಿತವಲ್ಲ. ಸಾರ್ವಜನಿಕರ ರಕ್ಷಣೆಗೂ ಸಹ ಆಕೆ ಬದ್ದ ಎಂದು ಹೇಳಿದ್ದಾರೆ.
ಅಕಾಡೆಮಿ ನಿರ್ದೇಶಕ ವಿಪುಲ್ ಕುಮಾರ್ ಹೊಗಳಿದ ಗೃಹ ಸಚಿವರು
ಹೃದಯದಿಂದ ಅಕಾಡೆಮಿಯಲ್ಲಿ ಅಧಿಕಾರಿಗಳು ಕೆಲಸ ಮಾಡಲ್ಲ. ಎಲ್ಲೂ ಸಿಗಲಿಲ್ಲ ಅಂದರೆ ಇಲ್ಲಿ ಓಕೆ ಅನ್ನೋ ವಾತಾವರಣ ಇದೆ. ಆದರೆ ವಿಪುಲ್ ಕುಮಾರ್ ಇಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಟೋಯಿಂಗ್ ವೇಳೆ ಸಾರ್ವಜನಿಕರಿಗೆ ಕಿರಿಕಿರಿ ವಿಚಾರ
ಎಲ್ಲಿಯವರೆಗೂ ಸಾರ್ವಜನಿಕರು ಹೊಣೆಗಾರಿಕೆ ಅರಿಯುವುದಿಲ್ಲ.ಅಲ್ಲಿಯವರೆಗೂ ಪೊಲೀಸರಿಂದ ಕಾನೂನಾತ್ಮಕ ಕ್ರಮ ಅನಿವಾರ್ಯ. ಜನರು ಅಡ್ಡಾದಿಡ್ಡಿ ವಾಹನ ನಿಲ್ಲಿಸುವುದರಿಂದ ಸಮಸ್ಯೆಯಾಗುತ್ತಿದೆ. ಖಾಸಗಿಯವರಿಂದ ಟೋಯಿಂಗ್ ವೇಳೆ ಜನರಿಗೆ ಸಮಸ್ಯೆಯಾಗುತ್ತಿದೆ. ಹೆಚ್ಚು ಕಮಿಷನ್‌ಗಾಗಿ ತೊಂದರೆ ನೀಡಿರುವುದು ಸತ್ಯ. ಹೀಗಾಗಿ ಸದ್ಯಕ್ಕೆ ಟೋಯಿಂಗ್ ನಿಲ್ಲಿಸಲಾಗಿದೆ. ಇಂದು ಈ ಬಗ್ಗೆ ಸಂಜೆ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.
ಬಳಿಕ ಮಾತನಾಡಿದ ಅವರು, ಬಜೆಟ್‌ನಲ್ಲಿ ಗೃಹ ಇಲಾಖೆಗೆ ಹೆಚ್ಚು ಪ್ರಾತಿನಿಧ್ಯ ಸಿಗಲಿದೆ. ನಮ್ಮ ಸರ್ಕಾರ ಬಂದ ದಿನದಿಂದ ಗೃಹ ಇಲಾಖೆಗೆ ಒತ್ತು ನೀಡಲಾಗಿದೆ. ಗೃಹ ಇಲಾಖೆಯ ಎಲ್ಲಾ ಹುದ್ದೆ ಭರ್ತಿ ಮಾಡಲಾಗುತ್ತಿದೆ. ನಿವೃತ್ತಿಯಾದಷ್ಟೇ ಹುದ್ದೆಗೆ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮುಂಬಡ್ತಿ ನೇಮಕಾತಿ ಅನುಪಾತ ಬದಲಾವಣೆ ವಿಚಾರ
ಪೊಲೀಸ್ ಇಲಾಖೆ ಬೇರೆ ಇಲಾಖೆಗಿಂತ ಭಿನ್ನ. ಪೊಲೀಸ್ ಇಲಾಖೆಗೆ ಹೊಸ ಬ್ಲಡ್ ಬರಬೇಕು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು. ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಇದನ್ನೂ ಓದಿ: ಮಗು ಹುಟ್ಟಿದ ಬಳಿಕ ಯಡಿಯೂರಪ್ಪನವರ ಮೊಮ್ಮಗಳು ಖಿನ್ನತೆಗೆ ಒಳಗಾಗಿದ್ದರು; ಆತ್ಮಹತ್ಯೆ ಕಾರಣ ಬಿಚ್ಚಿಟ್ಟ ಆರಗ ಜ್ಞಾನೇಂದ್ರ
ಮೈಸೂರು: 45ನೇ ಬ್ಯಾಚ್ ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳ ನಿರ್ಗಮನ ಪಥಸಂಚಲನ; ಯಾರೆಲ್ಲಾ ಆಯ್ಕೆಯಾಗಿದ್ದಾರೆ ಗೊತ್ತಾ?
Published On - 11:00 am, Wed, 2 February 22