ಹೊಸ ವರ್ಷಾಚರಣೆ ಪ್ರಯುಕ್ತ ಮೈಸೂರಿಗೆ ದಾಖಲೆ ಸಂಖ್ಯೆಯ ಪ್ರವಾಸಿಗರ ಭೇಟಿ
ಕೆಆರ್‌ಎಸ್‌ನಲ್ಲಿರುವ ಬೃಂದಾವನ ಉದ್ಯಾನವನವು ಡಿಸೆಂಬರ್ 23 ರಿಂದ 30 ರವರೆಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರಿಗೆ ಸಾಕ್ಷಿಯಾಗಿದೆ. 23,714 ವಯಸ್ಕ ಪ್ರವಾಸಿಗರು ಭೇಟಿ ನೀಡಿದ್ದು, ಪ್ರವೇಶ ಶುಲ್ಕದ ಮೂಲಕ 11,85,700 ರೂ. ಸಂಗ್ರಹವಾಗಿದೆ.
ಮೈಸೂರು, ಜನವರಿ 3: ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಸಾಂಸ್ಕೃತಿಕ ನಗರಿ ಮೈಸೂರಿಗೆ (Mysuru) ಡಿಸೆಂಬರ್ 31ರಂದು ದಾಖಲೆ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ಕ್ರಿಸ್ಮಸ್ ರಜೆ ಹಾಗೂ ಹೊಸ ವರ್ಷದ (New year) ಸಂಭ್ರಮಾಚರಣೆಯೊಂದಿಗೆ 2023ರ ಡಿಸೆಂಬರ್ 31 ದಾಖಲೆಯ ಸಂಖ್ಯೆಯ ಪ್ರವಾಸಿಗರು ನಗರಕ್ಕೆ ಭೇಟಿ ನೀಡಿದ್ದಾರೆ.
ಡಿಸೆಂಬರ್ 31ರಂದು ಒಟ್ಟು 1.84 ಲಕ್ಷ ಪ್ರವಾಸಿಗರು ಮೈಸೂರು ಅರಮನೆಗೆ ಭೇಟಿ ನೀಡಿದರೆ, ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಡಿಸೆಂಬರ್ ಕೊನೆಯ ವಾರದಲ್ಲಿ 2.28 ಲಕ್ಷ ಮಂದಿ ಭೇಟಿ ನೀಡಿದ್ದಾರೆ. ನೆರೆಯ ಮಂಡ್ಯ ಜಿಲ್ಲೆಯ ಕೃಷ್ಣ ರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆಯ ಬೃಂದಾವನ ಗಾರ್ಡನ್‌ಗಳು ಸಹ ಇದೇ ಅವಧಿಯಲ್ಲಿ ಭಾರಿ ಪ್ರವಾಸಿಗರ ಭೇಟಿಗೆ ಸಾಕ್ಷಿಯಾಗಿದೆ. ಹಿಂದಿನ ಎರಡು ವರ್ಷಗಳಲ್ಲಿ ಕೋವಿಡ್ -19 ಸಾಂಕ್ರಾಮಿಕದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿರಲಿಲ್ಲ. ಆದರೆ, 2023 ರಲ್ಲಿ ಮೈಸೂರು ಮತ್ತು ಸುತ್ತಮುತ್ತಲಿನ ಪ್ರವಾಸಿ ಆಕರ್ಷಣೆಗಳನ್ನು ಹೊಂದಿರುವ ಪ್ರದೇಶಗಳಿಗೆ ದಾಖಲೆ ಸಂಖ್ಯೆಯ ಪ್ರವಾಸಿಗರು ಬಂದಿದ್ದಾರೆ.
ಇದನ್ನೂ ಓದಿ: ಮೈಸೂರು: ಅರುಣ್ ಯೋಗಿರಾಜ್ ಕುಟುಂಬಸ್ಥರನ್ನು ಸನ್ಮಾನಿಸಿದ ಕಾಂಗ್ರೆಸ್ ಮುಖಂಡರು
ಕೆಆರ್‌ಎಸ್‌ನಲ್ಲಿರುವ ಬೃಂದಾವನ ಉದ್ಯಾನವನವು ಡಿಸೆಂಬರ್ 23 ರಿಂದ 30 ರವರೆಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರಿಗೆ ಸಾಕ್ಷಿಯಾಗಿದೆ. 23,714 ವಯಸ್ಕ ಪ್ರವಾಸಿಗರು ಭೇಟಿ ನೀಡಿದ್ದು, ಪ್ರವೇಶ ಶುಲ್ಕದ ಮೂಲಕ 11,85,700 ರೂ. ಸಂಗ್ರಹವಾಗಿದೆ. 33,068 ಮಕ್ಕಳು ಭೇಟಿ ನೀಡಿದ್ದು, 3,30,680 ರೂ. ಸಂಗ್ರಹವಾಗಿದೆ. ಪ್ರವೇಶ ಟಿಕೆಟ್ ಶುಲ್ಕದಲ್ಲಿ ರಿಯಾಯಿತಿಗೆ ಅರ್ಹತೆಯುಳ್ಳು 31,228 ಮಕ್ಕಳು ಭೇಟಿ ನೀಡಿದ್ದು, ಅಂಥವರಿಂದ 1,56,140 ರೂ. ಆದಾಯ ಗಳಿಸಲಾಗಿದೆ.
ಅದೇ ರೀತಿ, ಮೈಸೂರಿನ ಚಾಮುಂಡಿ ಬೆಟ್ಟಕ್ಕೂ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು, ಭಕ್ತರು ಭೇಟಿ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ