Gruha Lakshmi Scheme: ಮೈಸೂರಿನ ಮಹಾರಾಜ ಕಾಲೇಜು ಮೈದಾನ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ನಿಗದಿ

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಾಳೆ ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮ ಹಿನ್ನೆಲೆ ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ನಾಳೆ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ವಾಹನ ಸಂಚಾರ ನಿರ್ಬಂಧ ಹೇರಿ ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ. ಮಹಾರಾಜ ಕಾಲೇಜು ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧಿಸಲಾಗಿದೆ.

Gruha Lakshmi Scheme: ಮೈಸೂರಿನ ಮಹಾರಾಜ ಕಾಲೇಜು ಮೈದಾನ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ನಿಗದಿ
ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮ ಹಿನ್ನೆಲೆ ಮಹಾರಾಜ ಕಾಲೇಜು ಮೈದಾನ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Aug 29, 2023 | 7:50 AM

ಬೆಂಗಳೂರು, ಆ.29: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಯಲ್ಲೊಂದಾದ ಗೃಹ ಲಕ್ಷ್ಮಿ ಯೋಜನೆಗೆ(Gruha Lakshmi Scheme) ನಾಳೆ(ಆ.30) ಚಾಲನೆ ಸಿಗಲಿದೆ.‌ ಕಾರ್ಯಕ್ರಮ ರೂಪರೇಷೆಗಳು ಬಹುತೇಕ ಮುಕ್ತಾಯವಾಗಿದ್ದು, ಕಾರ್ಯಕ್ರಮ ಯಶಸ್ವಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಜೊತೆ ಡಿಕೆ ಶಿವಕುಮಾರ್(DK Shivakumar) ಬೆನ್ನೆಲುಬಾಗಿ ನಿಂತಿದ್ದಾರೆ. ಇನ್ನು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಾಳೆ ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮ ಹಿನ್ನೆಲೆ ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ನಾಳೆ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ವಾಹನ ಸಂಚಾರ ನಿರ್ಬಂಧ ಹೇರಿ ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಗೆ ಕೌಂಟ್ ಡೌನ್ ಶುರುವಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಾರ್ಯಕ್ರಮ ಸಿದ್ದತೆ ಬರದಿಂದ ಸಾಗಿದೆ.‌ ಇನ್ನೊಂದೆ ಇಡೀ ಮೈಸೂರಿನ ರಸ್ತೆಗಳಲ್ಲಿ ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. ನಾಳಿನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕೇಂದ್ರ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ್ ಖರ್ಗೆಯವರು ಬರಲಿದ್ದಾರೆ. ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಭಾಗವಹಿಸುವ ಹಿನ್ನೆಲೆ ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. KSRTC ಬಸ್​ ಸೇರಿ ಎಲ್ಲಾ ವಾಹನಗಳಿಗೆ ಪರ್ಯಾಯ ಮಾರ್ಗ ನಿಗದಿ ಮಾಡಲಾಗಿದೆ. ಜೊತೆಗೆ ಮಹಾರಾಜ ಕಾಲೇಜು ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವ ವಾಹನಗಳ ಪಾರ್ಕಿಂಗ್​​ಗೆ ಮೈಸೂರು ನಗರದ ವಿವಿಧ ಮೈದಾನಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಮಾಹಿತಿ ನೀಡಿದರು.

ಇದನ್ನೂ ಓದಿ: ಸತತ 8 ಗಂಟೆಗಳ ಕಾಲ ಮೈಸೂರು ಕೆಡಿಪಿ ಸಭೆ ಮಾಡಿದ ಸಿದ್ದರಾಮಯ್ಯ: ಏನೆಲ್ಲಾ ನಡೆಯಿತು? ಇಲ್ಲಿದೆ ಸಭೆಯ ಮುಖ್ಯಾಂಶಗಳು

ಫುಲ್ ಆ್ಯಕ್ಟೀವ್ ಆದ ಡಿಸಿಎಂ ಡಿಕೆ ಶಿವಕುಮಾರ್

ನಿನ್ನೆ ಮೈಸೂರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಫುಲ್ ಆ್ಯಕ್ಟಿವ್ ಆಗಿದ್ದಾರೆ. ಮೈಸೂರಿಗೆ ಬಂದಿಳಿಯುತ್ತಿದಂತೆ ನೇರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಜೊತೆ ವೇದಿಕೆ ಬಳಿ ತೆರಳಿ ಸಿದ್ದತೆ ಪರಿಶೀಲನೆ ನಡೆಸಿದ್ರು. ಅದಷ್ಟೆ ಅಲ್ಲದೆ ರಾಜ್ಯದ ಪ್ರತಿ ಗ್ರಾ.ಪಂ ಯಲ್ಲು ಕೂಡ ಕಾರ್ಯಕ್ರಮ ಮಾಡಲು ತೀರ್ಮಾನಿಸಿರುವುದರಿಂದ ಗ್ರಾ.ಪಂ ಗಳಲ್ಲಿ ಮಾಡಿಕೊಂಡಿರುವ ಸಿದ್ದತೆ ಬಗ್ಗೆ ಜೋಮ್ ಮೀಟಿಂಗ್ ನಡೆಸಿ ಅಧಿಕಾರಿಗಳ ಜೊತೆ ಮಾಹಿತಿ ಪಡೆದು ಆನ್ ಲೈನ್ ಮೂಲಕವೇ ಪರಿಶೀಲನೆ ನಡೆಸಿದ್ರು.

ನಾಡದೇವತೆ ಚಾಮುಂಡೇಶ್ವರಿ ದರ್ಶನ ಮಾಡಲಿರುವ ಸಿಎಂ, ಡಿಸಿಎಂ

ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ ಮುನ್ನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಿದ್ದಾರೆ. ನಾಳೆ ಬೆಳಗ್ಗೆ 9 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ಸಿಎಂ, ಡಿಸಿಎಂ ಭೇಟಿ ನೀಡಲಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡಿ ಬೆಟ್ಟದಲ್ಲಿ ಸಿದ್ದರಾಮಯ್ಯ, ಡಿಕೆಶಿ ವಾಗ್ದಾನ ಮಾಡಿದ್ದರು. ಮತದಾನಕ್ಕೆ ಒಂದು ದಿನ ಮೊದಲು ಹೋಗಿ ಪೂಜೆ ಮಾಡಿದ್ದರು. ಇದೀಗ ಅನುಷ್ಠಾನದ ಹಿಂದಿನ ದಿನ‌ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಸಚಿವೆ ಹೆಬ್ಬಾಳ್ಕರ್ ಸೇರಿ ಹಲವು ನಾಯಕರು ಸಾಥ್‌ ನೀಡಲಿದ್ದಾರೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ