AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore police: ಐಶಾರಾಮಿ ಕಾರು, ಶ್ರೀಮಂತರ ಮನೆಯೇ ಇವನ ಟಾರ್ಗೆಟ್: 56 ಕಳ್ಳತನ ಮಾಡಿದ್ದರೂ ಪೊಲೀಸರಿಗೆ ಮಾತ್ರ ಸಿಕ್ಕಿರಲಿಲ್ಲ- ಕೊನೆಗೂ ಅಂದರ್​

ಯಾರಿಗೂ ಸಿಗದೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಅಂತರಾಜ್ಯ ಕಳ್ಳನ ಬಂಧನವಾಗಿದೆ. ಈತ ಮತ್ತಷ್ಟು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಿದೆ. ಮೈಸೂರು ವಿವಿ ಪುರಂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Mysore police: ಐಶಾರಾಮಿ ಕಾರು, ಶ್ರೀಮಂತರ ಮನೆಯೇ ಇವನ ಟಾರ್ಗೆಟ್: 56 ಕಳ್ಳತನ ಮಾಡಿದ್ದರೂ ಪೊಲೀಸರಿಗೆ ಮಾತ್ರ ಸಿಕ್ಕಿರಲಿಲ್ಲ- ಕೊನೆಗೂ ಅಂದರ್​
56 ಕಳ್ಳತನ ಮಾಡಿದ್ದರೂ ಪೊಲೀಸರಿಗೆ ಮಾತ್ರ ಸಿಕ್ಕಿರಲಿಲ್ಲ- ಕೊನೆಗೂ ಅಂದರ್​
ರಾಮ್​, ಮೈಸೂರು
| Edited By: ಸಾಧು ಶ್ರೀನಾಥ್​|

Updated on: Aug 03, 2023 | 3:21 PM

Share

ಆತ ಖತರ್ನಾಕ್ ಕಳ್ಳ. ಐಶಾರಾಮಿ ಕಾರುಗಳು, ಶ್ರೀಮಂತರ ಮನೆಯೇ ಈತನ ಟಾರ್ಗೆಟ್. ಈ ರೀತಿ ಆತ ಮಾಡಿದ್ದು ಒಂದಲ್ಲ ಎರಡಲ್ಲ ಬರೋಬ್ಬರಿ 56 ಕಳ್ಳತನ. ಸಿಸಿ ಕ್ಯಾಮೆರಾದಲ್ಲಿ ಆತನ ಕೃತ್ಯ ಸೆರೆಯಾದರೂ ಪೊಲೀಸರಿಗೆ ಮಾತ್ರ ಸಿಕ್ಕಿರಲಿಲ್ಲ. ದಕ್ಷಿಣ ಭಾರತದ ಪೊಲೀಸರಿಗೆ ತಲೆ ನೋವಾಗಿದ್ದಾತನನ್ನು (escaping thief ) ಮೈಸೂರು ಪೊಲೀಸರು ಹೆಡೆ ಮುರಿ‌ ಕಟ್ಟಿ ತಂದಿದ್ದಾರೆ. ಈ ಫೋಟೋದಲ್ಲಿರುವ ಈ ಆಸಾಮಿಯನ್ನು ಒಮ್ಮೆ ನೋಡಿ. ಈತ ನಿಮ್ಮ ಮನೆಯ ಅಕ್ಕ ಪಕ್ಕ ಅಥವಾ ನಿಮ್ಮ ದುಬಾರಿ ಕಾರುಗಳ ಬಳಿ ಸುಳಿದಾಡಿದ್ರೆ ಸ್ವಲ್ಪ ಹುಷಾರಾಗಿರಿ. ಯಾಕಂದ್ರೆ ಈತ ಒಬ್ಬ ಖತರ್ನಾಕ್ ಕಳ್ಳ. ಐಷಾರಾಮಿ ಕಾರುಗಳು, ಶ್ರೀಮಂತರ ಮನೆಗಳೇ (Rich car, rich houses) ಈತನ ಟಾರ್ಗೆಟ್. ಕರ್ನಾಟಕ ಆಂಧ್ರ ತಮಿಳುನಾಡು ಕೇರಳ ತೆಲಂಗಾಣ ಸೇರಿದಂತೆ ಒಂದಲ್ಲ ಎರಡಲ್ಲ ಬರೋಬ್ಬರಿ 56 ಕಡೆ ಈತ ಕಳ್ಳತನ ಮಾಡಿದ್ದ. ಈತನ ಹೆಸರು ಸತ್ತಿಬಾಬು ಅಲಿಯಾಸ್ ಕರಿ ಸತ್ತಿಬಾಬು ಅಲಿಯಾಸ್ ಸತ್ತಿರೆ. ಮೂಲತಃ ಆಂಧ್ರಪ್ರದೇಶದವನಾದ ಸತ್ತಿಬಾಬುವನ್ನು ಮೈಸೂರು ಪೊಲೀಸರು (mysore police) ಬಂಧಿಸಿದ್ದಾರೆ!

ಈತ ಮೈಸೂರಿನ ವಿ ವಿ ಪುರಂ, ಹೆಬ್ಬಾಳು ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ. ವಿ.ವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಯಾದವಗಿರಿಯಲ್ಲಿ ಕಾರು ಮತ್ತು ಚಿನ್ನಾಭರಣ ಕಳವು ಮಾಡಿದ್ದ. ಈತನಿಂದ ಮೂರು ಕಾರು, 750 ಗ್ರಾಂ ಚಿನ್ನಾಭರಣ, ಮೂರು ವಾಚು ವಶ ಸೇರಿದಂತೆ ಸುಮಾರು 1.19 ಕೋಟಿ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮೈಸೂರು ದಸರಾದಲ್ಲಿ ಏರ್​ ಶೋ; ರಕ್ಷಣಾ ಸಚಿವ ರಾಜನಾಥ್​ ಸಿಂಗ್​ಗೆ ಸಿಎಂ ಸಿದ್ದರಾಮಯ್ಯ ಬರೆದ ಪತ್ರದಲ್ಲೇನಿದೆ?

ಈ ಖತರ್ನಾಕ್ ಕಳ್ಳ ತೆಲಂಗಾಣದಲ್ಲಿ‌ 20, ಆಂಧ್ರಪ್ರದೇಶದಲ್ಲಿ 30, ತಮಿಳುನಾಡಿನಲ್ಲಿ 3 ಹಾಗೂ ಕರ್ನಾಟಕದ 3 ಪ್ರಕರಣದಲ್ಲಿ ಭಾಗಿಯಾಗಿದ್ದ. ಐಷಾರಾಮಿ ಕಾರು ಕದ್ದು ಶೋಕಿಗಾಗಿ ಕಡಿಮೆ ಹಣಕ್ಕೆ ಮಾರುತ್ತಿದ್ದ. ಇನ್ನು ಇಂಟರ್ ನೆಟ್ ಮೂಲಕ ಐಷಾರಾಮಿ ಜನರ ಮಾಹಿತಿ ಪಡೆಯುತ್ತಿದ್ದ ಈತ ನಂತರ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ. ಈತನ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆದ್ರೂ ಆತ ಸಿಕ್ಕಿ ಬಿದ್ದಿರಲಿಲ್ಲ. ಇದೀಗ ಈತನನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

ಸದ್ಯ ಆರೋಪಿ ಮತ್ತಷ್ಟು ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ವಿವಿ ಪುರಂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಒಟ್ಟಾರೆ ಯಾರಿಗೂ ಸಿಗದೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಅಂತರಾಜ್ಯ ಕಳ್ಳನ ಬಂಧನದಿಂದ ಮೈಸೂರಿಗರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಮೈಸೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ