AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಅಪಘಾತ ಪ್ರಕರಣ: ಮೃತ ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿದ ಸಚಿವ ನಾಗೇಂದ್ರ

ರಸ್ತೆ ಅಫಘಾತದಲ್ಲಿ ಮೃತಪಟ್ಟ ಒಂದೇ ಕುಟುಂಬದ 10 ಜನರ ಬಗ್ಗೆ ಬಳ್ಳಾರಿ ಗ್ರಾಮಾಂತರ ಶಾಸಕ ಹಾಗೂ ಸಚಿವ ನಾಗೇಂದ್ರ ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ: ಮೃತ ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿದ ಸಚಿವ ನಾಗೇಂದ್ರ
ಸಚಿವ ಬಿ.ನಾಗೇಂದ್ರ
ಗಂಗಾಧರ​ ಬ. ಸಾಬೋಜಿ
|

Updated on:May 29, 2023 | 9:57 PM

Share

ಮೈಸೂರು: ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ಏಕಾಏಕಿ ಬಸ್​ಗೆ ಡಿಕ್ಕಿಯಾಗಿ ಒಂದೇ ಕುಟುಂಬದ 10 ಮಂದಿ ಮೃತಪಟ್ಟಿದ್ದು, ಸದ್ಯ ಬಳ್ಳಾರಿ ಗ್ರಾಮಾಂತರ ಶಾಸಕ ಹಾಗೂ ಸಚಿವ ನಾಗೇಂದ್ರ (Minister Nagendra) ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮೃತ ಹತ್ತು ಜನರು ಸಂಬಂಧಿಕರು. ಮನೆಯವರೆಲ್ಲಾ ಸೇರಿ ಖಾನಾವಳಿಗಳಿಗೆ ರೊಟ್ಟಿ ಮಾರಿ ಜೀವನ ನಡೆಸುತ್ತಿದ್ದರು. ಮತ್ತು ಎಲ್ಲರೂ ಲಿಂಗಾಯತ ಸಮುದಾಯದವರು. ನಾನು ಈ ಕುಟುಂಬವನ್ನು ಬಹಳ ಹತ್ತಿರದಿಂದ ಬಲ್ಲೆ ಎಂದು ತಿಳಿಸಿದರು.

ಅನ್ನ ಹಾಕುತ್ತಿದ್ದವರೇ ದುರ್ಮರಣ

ಚುನಾವಣೆಯಲ್ಲಿ ನನ್ನ ಪರವಾಗಿ ಈ ಕುಟಂಬ ಉತ್ಸಾಹದಿಂದ ಕೆಲಸ ಮಾಡಿತ್ತು. ಎಲ್ಲರಿಗೂ ಅನ್ನ ಹಾಕುತ್ತಿದ್ದವರೇ ಇಂದು ದುರ್ಮರಣಕ್ಕೀಡಾಗಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ. ಅದರಲ್ಲಿ ಒಂದು ಮಗುವಿನ ಸ್ಥಿತಿ ಮನಕಲುಕುತ್ತಿದೆ. ಗಾಯಾಳು ಮಗು ತನ್ನ ತಂದೆಯನ್ನ ಕೇಳುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: T Narasipura Accident: ಟಿ ನರಸೀಪುರ ಅಪಘಾತದ ಭೀಕರ ವಿಡಿಯೋ

ಒಂದೇ ಕಡೆ ಅಂತ್ಯ ಸಂಸ್ಕಾರಕ್ಕೆ ಚಿಂತನೆ

ಇವರ ಜೊತೆ ಇನ್ನಷ್ಟು ಜನರು ಪ್ರವಾಸಕ್ಕೆ ಬರಬೇಕಿತ್ತು. ಕಾರಣಂತರದಿಂದ ಹೋಗಿಲ್ಲ. ಈ ಸಾವು ನನಗೆ ವೈಯಕ್ತಿಕವಾಗಿ ಬಹಳ ನೋವು ಕೊಟ್ಟಿದೆ. ಅವರ ಅಂತ್ಯ ಸಂಸ್ಕಾರವನ್ನು ಅವರ ಊರಿನಲ್ಲಿ ಒಂದೇ ಕಡೆ ಮಾಡುತ್ತೇವೆ. ಅವರ ಮನೆಗಳಿಗೆ ಖುದ್ದು ಭೇಟಿ ಕೊಟ್ಟು ವೈಯಕ್ತಿಕ ಪರಿಹಾರ ನೀಡುತ್ತೇನೆ ಎಂದು ಸಚಿವ ನಾಗೇಂದ್ರ ಹೇಳಿದರು.

ತಲಾ 2 ಲಕ್ಷ ರೂ. ಪರಿಹಾರ

ಈ ಮಧ್ಯೆ, ಮೃತಪಟ್ಟ 10 ಜನರ ಮನೆಯವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಟ್ವೀಟ್​ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಟಿ.ನರಸೀಪುರ: ಅಪಘಾತದಲ್ಲಿ ಮೃತಪಟ್ಟ 10 ಜನರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸ್ಥಳಕ್ಕೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಭೇಟಿ

ಘಟನಾ ಸ್ಥಳಕ್ಕೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಭೇಟಿ ಪರಿಶೀಲನೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಮಹದೇವಪ್ಪ, ಈ ಘಟನೆ ಬಗ್ಗೆ ಸಿಎಂ ಜೊತೆ ಮಾತನಾಡಿದ್ದೇನೆ. ಸಿಎಂ ಸಹಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾನು ಸಹ ಆಸ್ಪತ್ರೆಗೆ ಭೇಟಿ ನೀಡುತ್ತೇನೆ. ಈ ಸಂಬಂಧ ಅಧಿಕಾರಿಗಳ ಬಳಿ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:57 pm, Mon, 29 May 23

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!