AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ವ್ಯವಸ್ಥೆ ನಿರ್ಮೂಲನೆಗೆ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೊಟ್ಟ ಐಡಿಯಾ ಏನು ನೋಡಿ!

ಮೈಸೂರಿನಲ್ಲಿ ನಡೆದ ಜೆಎಸ್‌ಎಸ್ ಸುವರ್ಣ ಮಹೋತ್ಸವ ಉಪನ್ಯಾಸದಲ್ಲಿ ಮಾತನಾಡಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ದೇಶದ ಪ್ರಗತಿಗೆ ಸಾಮಾಜಿಕ ಸಾಮರಸ್ಯವೇ ಅಡಿಪಾಯ ಎಂದರು. ಜನಸಂಖ್ಯಾ ಅಸಮತೋಲನದ ಬಗ್ಗೆ ಎಚ್ಚರಿಕೆ ನೀಡಿದ ಅವರು, ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಕರೆ ನೀಡಿದರು. ಅಲ್ಲದೆ, ಏಕರೂಪ ನಾಗರೀಕ ಸಂಹಿತೆ ಶೀಘ್ರದಲ್ಲೇ ಜಾರಿಯಾಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಜಾತಿ ವ್ಯವಸ್ಥೆ ನಿರ್ಮೂಲನೆಗೆ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೊಟ್ಟ ಐಡಿಯಾ ಏನು ನೋಡಿ!
ಮೋಹನ್ ಭಾಗವತ್Image Credit source: TV9 Network
ಗಣಪತಿ ಶರ್ಮಾ
|

Updated on: May 09, 2026 | 8:58 AM

Share

ಮೈಸೂರು, ಮೇ 9: ಭಾರತದ ಸರ್ವತೋಮುಖ ಪ್ರಗತಿಗೆ ಸಾಮಾಜಿಕ ಸಾಮರಸ್ಯ ಮತ್ತು ಭಾವನಾತ್ಮಕ ಏಕೀಕರಣ ಅತ್ಯಗತ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ. ನಗರದ ಜೆಎಸ್‌ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವ ಉಪನ್ಯಾಸ ಮಾಲಿಕೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ಸಾಮರಸ್ಯವೇ ಪ್ರೇರಕ ಶಕ್ತಿ’ ಎಂಬ ವಿಷಯದ ಕುರಿತು ಅವರು ಗುರುವಾರ ವಿಶೇಷ ಉಪನ್ಯಾಸ ನೀಡಿದರು. ಸಮಾಜವು ಜಾತಿ ಮತ್ತು ಧರ್ಮದ ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.

ಮುಖ್ಯಾಂಶಗಳು

  • ಜನಸಂಖ್ಯಾ ನಿಯಂತ್ರಣಕ್ಕಿಂತ ಜನಸಂಖ್ಯಾ ಅಸಮತೋಲನದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯ.
  • ಜಾತಿ ಆಧಾರಿತ ರಾಜಕೀಯವನ್ನು ಕೊನೆಗಾಣಿಸಲು ಸಮಾಜವೇ ಮೊದಲು ಜಾತಿಯನ್ನು ಮರೆಯಬೇಕು.
  • ಏಕರೂಪ ನಾಗರಿಕ ಸಂಹಿತೆ (UCC) ದೇಶಾದ್ಯಂತ ಹಂತಹಂತವಾಗಿ ಜಾರಿಗೆ ಬರಲಿದೆ ಎಂಬ ವಿಶ್ವಾಸ.

ಅಭಿವೃದ್ಧಿ ಎಂದರೆ ಕೇವಲ ಭೌತಿಕ ಸಮೃದ್ಧಿಯಲ್ಲ, ಅದು ಸಮಾಜದ ಕೊನೆಯ ವ್ಯಕ್ತಿಯನ್ನೂ ತಲುಪಬೇಕು ಎಂದು ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಸ್ಮರಿಸಿದ ಅವರು, ಸಾಮಾಜಿಕ ಸಮಾನತೆ ಮತ್ತು ಭ್ರಾತೃತ್ವವಿಲ್ಲದೆ ರಾಜಕೀಯ ಮತ್ತು ಆರ್ಥಿಕ ಸಮಾನತೆ ಉಳಿಯಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಜಾತಿ ವಿಭಜನೆಯನ್ನು ಹೋಗಲಾಡಿಸಲು ಜನರ ನಡುವೆ ಪರಸ್ಪರ ಒಡನಾಟ ಹೆಚ್ಚಾಗಬೇಕು. ಪರಸ್ಪರರ ಮನೆಗಳಿಗೆ ಭೇಟಿ ನೀಡಬೇಕು ಮತ್ತು ಅಂತರಜಾತಿ ವಿವಾಹಗಳನ್ನು ಪ್ರೋತ್ಸಾಹಿಸಬೇಕು. ಸಮಾಜ ಜಾತಿ ಮರೆತರೆ ರಾಜಕೀಯ ಕ್ಷೇತ್ರದಿಂದಲೂ ಅದರ ನಿರ್ಮೂಲನೆ ಸಾಧ್ಯ ಎಂದು ಅವರು ಹೇಳಿದರು.

ಜನಸಂಖ್ಯಾ ನೀತಿ ಮತ್ತು ಏಕರೂಪ ನಾಗರೀಕ ಸಂಹಿತೆ

ಜನಸಂಖ್ಯಾ ನೀತಿಯ ಕುರಿತು ಮಾತನಾಡಿದ ಅವರು, ಸರ್ಕಾರವು ಮುಂದಿನ ನೂರು ವರ್ಷಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ದೀರ್ಘಾವಧಿಯ ನೀತಿಗಳನ್ನು ರೂಪಿಸಬೇಕು. ಜನಸಂಖ್ಯಾ ಅಸಮತೋಲನವು ದೊಡ್ಡ ಸವಾಲಾಗಿದ್ದು, ಯಾವುದೇ ತಾರತಮ್ಯವಿಲ್ಲದೆ ಇದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಇನ್ನು ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ನಿರ್ಧಾರಗಳು ಸಾಮೂಹಿಕವಾಗಿ ರೂಪುಗೊಳ್ಳಬೇಕಾದ್ದರಿಂದ ತಾಳ್ಮೆ ಅಗತ್ಯ. ಯುಸಿಸಿ ಶೀಘ್ರದಲ್ಲೇ ದೇಶಾದ್ಯಂತ ಜಾರಿಯಾಗುವ ಆಶಾವಾದ ಇದೆ ಎಂದರು.

ಧರ್ಮ ಮತ್ತು ದೇಶದ ಅಸ್ಮಿತೆ

ಭಾರತದ ಅಸ್ಮಿತೆಯು ಇಲ್ಲಿನ ಸಂಸ್ಕೃತಿ ಮತ್ತು ನಾಗರಿಕತೆಯಿಂದ ರೂಪುಗೊಂಡಿದೆ. ನಮಗೆ ಈ ಭೂಮಿ ಕೇವಲ ನೆಲವಲ್ಲ, ಅದು ‘ಮಾತೃಭೂಮಿ’. ಎಲ್ಲಾ ಧರ್ಮಗಳೂ ಒಂದೇ ಸತ್ಯವನ್ನು ಹುಡುಕುತ್ತವೆ, ಆದರೆ ದಾರಿಗಳು ಮಾತ್ರ ಬೇರೆ ಬೇರೆ. ಮಾನವಕುಲದ ಉಳಿವಿಗೆ ಧರ್ಮಗಳ ನಡುವಿನ ಸಾಮರಸ್ಯವು ಅನಿವಾರ್ಯವಾಗಿದೆ. ಸಮಾಜವು ಜಾತಿಯನ್ನು ಮರೆತರೆ, ರಾಜಕೀಯವೂ ಜಾತಿಯನ್ನು ಮರೆಯುತ್ತದೆ ಎಂದು ಮೋಹನ್ ಭಾಗವತ್ ಈ ಸಂದರ್ಭದಲ್ಲಿ ಮಾರ್ಮಿಕವಾಗಿ ನುಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!