ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಬೈಕ್, ಆಟೋ ನಿಷೇಧ: ಮೊದಲ ದಿನ 137 ಕೇಸ್​ ದಾಖಲು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ನಿಯಂತ್ರಿಸಲು ದ್ವಿಚಕ್ರ, ತ್ರಿಚಕ್ರ, ಟ್ಯಾಕ್ಟರ್​​ ಮತ್ತು ಮೋಟಾರು ರಹಿತ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಆದರೂ ನಿಯಮ ಉಲ್ಲಂಘಿಸಿ ಸಂಚರಿಸುತ್ತಿರುವವರಿಂದ 500 ರೂ. ದಂಡ ವಸೂಲಿ ಮಾಡಲಾಗುತ್ತಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಬೈಕ್, ಆಟೋ ನಿಷೇಧ: ಮೊದಲ ದಿನ 137 ಕೇಸ್​ ದಾಖಲು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ
Follow us
ವಿವೇಕ ಬಿರಾದಾರ
|

Updated on: Aug 02, 2023 | 12:21 PM

ಮೈಸೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ (Bengaluru-Mysore Expressway) ಸಂಭವಿಸುತ್ತಿರುವ ಅಪಘಾತಗಳನ್ನು (Accident) ನಿಯಂತ್ರಿಸಲು ದ್ವಿಚಕ್ರ, ತ್ರಿಚಕ್ರ, ಟ್ಯಾಕ್ಟರ್​​ ಮತ್ತು ಮೋಟಾರು ರಹಿತ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಆದರೂ ನಿಯಮ ಉಲ್ಲಂಘಿಸಿ ಸಂಚರಿಸುತ್ತಿರುವವರಿಂದ 500 ರೂ. ದಂಡ ವಸೂಲಿ ಮಾಡಲಾಗುತ್ತಿದೆ. ಹೀಗೆ ಮೊದಲ ದಿನ 137 ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, ಒಟ್ಟು 68,500 ರೂ. ದಂಡ ವಸೂಲಿ ಮಾಡಲಾಗಿದೆ.

ಈ ಬಗ್ಗೆ ರಾಮನಗರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಾರ್ತಿಕ್ ರೆಡ್ಡಿ ಟ್ವಿಟ್​ ಮಾಡಿ “ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಪ್ರವೇಶ ಮತ್ತು ಸಂಚಾರವನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘನೆಗಾಗಿ 137 ಪ್ರಕರಣಗಳು ದಾಖಲಾಗಿವೆ. 68,500 ರೂ.ಗಳ ದಂಡವನ್ನು ಸಂಗ್ರಹಿಸಲಾಗಿದೆ. ಪ್ರವೇಶ ನಿರ್ಬಂಧವಿರುವುದರಿಂದ ಸದರಿ ವಾಹನಗಳು ಸರ್ವಿಸ್ ರಸ್ತೆಯಲ್ಲಿ ಸಂಚರಿಸಬೇಕು” ಎಂದು ವಿನಂತಿಸಿದ್ದಾರೆ.

ಇದನ್ನೂ ಓದಿ: Bengaluru-Mysore Expressway: ವಾಹನಗಳ ವೇಗಕ್ಕೆ ಬ್ರೇಕ್​​: ನಿಯಮ ಮುರಿದರೆ ದಂಡ ಅಷ್ಟೇ ಅಲ್ಲ, ಡ್ರೈವಿಂಗ್ ಲೈಸೆನ್ಸ್ ರದ್ದು

ಮೊದಲ ದಿನ ಬೆಳಗ್ಗೆ 8 ರಿಂದ 11 ಗಂಟೆವರೆಗೆ ರಾಮನಗರ, ಮೈಸೂರು ಮತ್ತು ಮಂಡ್ಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳು, ಆಟೋಗಳು ಮತ್ತು ಮೋಟಾರು ರಹಿತ ವಾಹನಗಳು ಎಕ್ಸ್‌ಪ್ರೆಸ್‌ವೇನಲ್ಲಿ ಪ್ರವೇಶಿಸುವವರಿಗೆ ಎಚ್ಚರಿಕೆ ನೀಡಿ, ಸರ್ವೀಸ್ ರಸ್ತೆಯಲ್ಲಿ ಕಳುಹಿಸುತ್ತಿದ್ದರು. ಅದನ್ನು ಮೀರಿಯೂ ಕೆಲವರು ಹೆದ್ದಾರಿ ಪ್ರವೇಶಿಸಿದರೆ ಅಂತವರಿಗೆ ನಿರ್ಗಮನ ಸ್ಥಳಗಳಲ್ಲಿ 500 ರೂ.ದಂಡ ಹಾಕಲಾಯಿತು.

ನ್ನು ಎರಡನೇ ದಿನವೂ ನಿಯಮ ಕಟ್ಟುನಿಟ್ಟಾಗಿ ಪಾಲನೆಗೆ ಮೈಸೂರಿನ ಕಳಸ್ತವಾಡಿ ಬಳಿ ಹೆದ್ದಾರಿ ಪ್ರವೇಶ ಹಾಗೂ ನಿರ್ಗಮ ಸ್ಥಳದಲ್ಲಿ ಸಬ್​ ಇನ್ಸಪೆಕ್ಟರ್ ನಟರಾಜ್ ನೇತೃತ್ವದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಸರ್ವಿಸ್ ರಸ್ತೆಯಿಂದ ಮುಖ್ಯರಸ್ತೆಗೆ ಬಾರದಂತೆ ಎಚ್ಚರ ವಹಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ