ಇನ್ನು 3 ತಿಂಗಳು ಸಚಿವ ಸಂಪುಟ ವಿಸ್ತರಣೆ ಇಲ್ಲ: ಘಂಟಾಘೋಷವಾಗಿ ಹೇಳಿದ ಸಚಿವ ಕೆ ಎಸ್​ ಈಶ್ವರಪ್ಪ

ಮೈಸೂರು: ಅತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraj bommai) ಅವರು 2 ದಿನಗಳ ನವದೆಹಲಿ ಪ್ರವಾಸದಲ್ಲಿದ್ದು, ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿಸಿದ್ದಾರೆ. ಅದರಲ್ಲೂ ರಾಜ್ಯ ಸಂಪುಟ ವಿಸ್ತರಣೆ ನನೆಗುದಿಗೆ ಬಿದ್ದಿದ್ದು, ಶೀಘ್ರವೇ ಸಚಿವ ವಿಸ್ತರಣೆ ಆಗಬೇಕೆಂದು ಆಡಳಿತಾರೂಢ ಬಿಜೆಪಿಯ ಅನೇಕ ಶಾಸಕರು ಒತ್ತಾಯಿಸುತ್ತಾ ಬಂದಿದ್ದಾರೆ. ಇದರ ಸಮ್ಮುಖದಲ್ಲಿ, ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ ಅವರು ಪಕ್ಷದ ಹೈಕಮಾಂಡ್​​ ಅನ್ನು ಒಪ್ಪಿಸಿ, ತಮ್ಮ ಸಂಪುಟವನ್ನು ವಿಸ್ತರಿಸು ತ್ತಾರಾ? ತನ್ಮೂಲಕ ಅಸಮಾಧಾನಗೊಂಡಿರುವ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರಾ ಎಂಬ […]

ಇನ್ನು 3 ತಿಂಗಳು ಸಚಿವ ಸಂಪುಟ ವಿಸ್ತರಣೆ ಇಲ್ಲ: ಘಂಟಾಘೋಷವಾಗಿ ಹೇಳಿದ ಸಚಿವ ಕೆ ಎಸ್​ ಈಶ್ವರಪ್ಪ
ಸಚಿವ ಕೆ.ಎಸ್.ಈಶ್ವರಪ್ಪ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 08, 2022 | 1:23 PM

ಮೈಸೂರು: ಅತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraj bommai) ಅವರು 2 ದಿನಗಳ ನವದೆಹಲಿ ಪ್ರವಾಸದಲ್ಲಿದ್ದು, ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿಸಿದ್ದಾರೆ. ಅದರಲ್ಲೂ ರಾಜ್ಯ ಸಂಪುಟ ವಿಸ್ತರಣೆ ನನೆಗುದಿಗೆ ಬಿದ್ದಿದ್ದು, ಶೀಘ್ರವೇ ಸಚಿವ ವಿಸ್ತರಣೆ ಆಗಬೇಕೆಂದು ಆಡಳಿತಾರೂಢ ಬಿಜೆಪಿಯ ಅನೇಕ ಶಾಸಕರು ಒತ್ತಾಯಿಸುತ್ತಾ ಬಂದಿದ್ದಾರೆ. ಇದರ ಸಮ್ಮುಖದಲ್ಲಿ, ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ ಅವರು ಪಕ್ಷದ ಹೈಕಮಾಂಡ್​​ ಅನ್ನು ಒಪ್ಪಿಸಿ, ತಮ್ಮ ಸಂಪುಟವನ್ನು ವಿಸ್ತರಿಸು ತ್ತಾರಾ? ತನ್ಮೂಲಕ ಅಸಮಾಧಾನಗೊಂಡಿರುವ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರಾ ಎಂಬ ಕುತೂಹಲ ಗರಿಗೆದರಿದೆ. ಆದರೆ ಇದೇ ವೇಳೆ ಇಂದು ಮೈಸೂರಿನಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್​ ಈಶ್ವರಪ್ಪ (Rural Development and Panchayat Raj Minister K S Eshwarappa) ಇನ್ನೂ 3 ತಿಂಗಳು ಕಾಲ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ ಎಂದು ಘಂಟಾಘೋಷವಾಗಿ ಹೇಳಿದ್ದಾರೆ.

ಸದ್ಯಕ್ಕೆ ಪಂಚರಾಜ್ಯ ಚುನಾವಣೆ ನಡೆಯುತ್ತಿದೆ. ಅದು ಮುಗಿಯುವವರೆಗೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದ ವಿಸ್ತರಣೆ ನಡೆಯುವುದಿಲ್ಲ. ಈ ಬಗ್ಗೆ ನನಗೆ ನಮ್ಮ ಹೈಕಮಾಂಡ್ ನಾಯಕರು ಹೇಳಿಲ್ಲ. ಆದರೆ ಖುದ್ದು ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ ಎಂದು ಈಶ್ವರಪ್ಪ ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಮಾಧ್ಯಮಗಳಲ್ಲಿ ಬಂದಿರುವದನ್ನು ಓದಿದ್ದೇನೆ. ಈ ವಿಚಾರದಲ್ಲಿ ಹೈ ಕಮಾಂಡ್ ತೀರ್ಮಾನಕ್ಕೆ ನಾನು ಬದ್ದ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಇದನ್ನು ಹೈ ಕಮಾಂಡ್ ನಾಯಕರು ನಿರ್ಧರಿಸುತ್ತಾರೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.

ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವ ಮೊದಲು ದಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ: ಸಚಿವ ಈಶ್ವರಪ್ಪ ಸವಾಲ್​ ಮೈಸೂರು: ಹಿಜಾಬ್ ಧರಿಸಿಯೇ ಅಸೆಂಬ್ಲಿ ಅಧಿವೇಶನಕ್ಕೆ ಬರುವೆ, ಯಾರಿಗಾದರೂ ಧೈರ್ಯವಿದ್ರೆ ತಡೆಯಲಿ ಎಂದು ಕಲಬುರಗಿ ಶಾಸಕಿ ಖನೀಜ್ ಫಾತೀಮಾ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಕೆ ಎಸ್ ಈಶ್ವರಪ್ಪ ಹಿಜಾಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ನೀವು ಮೊದಲು ಮಸೀದಿಗೆ ಹೋಗಿ, ದಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಯರಿಗೆ ಪ್ರವೇಶ ಕೊಡಿಸಿ ಶಾಸಕಿಗೆ ಸವಾಲು ಹಾಕಿದ್ದಾರೆ. ನಾವು ಶಾಲೆಗೆ ಮಾತ್ರ ಹಿಜಾಬ್ ನಿಷೇಧಿಸಿದ್ದೇವೆ. ಹೊರಗಡೆಗೆ ನಿಷೇಧ ಮಾಡಿಲ್ಲ. ಎಲ್ಲಾ ಕಡೆ ಅದನ್ನು ಹಾಕಿಕೊಂಡು ಹೋಗಬಹುದು ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಹಿಜಾಬ್ ವಿಚಾರದಲ್ಲಿ ಎಂ.ಎಲ್.ಸಿ. ಸಿಎಂ‌ ಇಬ್ರಾಹಿಂ ಹೇಳಿಕೆ ವಿಚಾರವನ್ನೂ ಪ್ರಸ್ತಾಪಿಸಿದ ಸಚಿವ ಕೆ ಎಸ್ ಈಶ್ವರಪ್ಪ ಇದು ವಿಕೃತಿಯಿಂದ ಕೂಡಿದ ಹೇಳಿಕೆ. ಇದು ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ. ಅವರ ಮುಖ‌ ನೋಡಲು ಹಿಜಾಬ್ ತೆಗೆಯಬೇಕಾ? ಇಬ್ರಾಹಿಂ ಅವರ ಈ ಹೇಳಿಕೆ ಯಾರೂ ಒಪ್ಪುವಂತಹದ್ದಲ್ಲ ಎಂದು ಮೈಸೂರಿನಲ್ಲಿ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.

ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ: ರಾಜ್ಯದಲ್ಲಿ ಹಿಜಾಬ್ ವಿವಾದ/ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ. ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ. ಈ ಹಿಂದೆ ಗೋ ಹತ್ಯೆ ನಿಷೇಧವನ್ನು ಉಡುಪಿಯಲ್ಲೇ ಮಾಡಿದ್ದರು. ಆಗ ಸಿದ್ದರಾಮಯ್ಯ ಸಿಎಂ ಅಧಿಕಾರ ಕಳೆದುಕೊಂಡರು. ಚಾಮುಂಡೇಶ್ವರಿಯಲ್ಲೂ ಸೋತರು. ಈಗ ಅಲ್ಲಿಂದಲೇ ಹಿಜಾಬ್ ವಿವಾದವಾಗಿದೆ. ಹಿಜಾಬ್ ವಿವಾದದ ಹಿಂದೆ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷ ಇದೆ. ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮುಖಂಡರಿಂದ ಈ ಕೆಲಸ ನಡೆದಿದೆ. ಕಾಂಗ್ರೆಸ್ ಮುಖಂಡರು ಮನಸು ಮಾಡಿದ್ದರೆ ಸಮಸ್ಯೆ ಬಗರಹರಿಸಬಹುದಿತ್ತು. ಆ ಆರೂ ವಿದ್ಯಾರ್ಥಿನಿಯರಿಗೆ ತಿಳಿವಳಿಕೆ ನೀಡಬಹುದಿತ್ತು. ಆದರೆ ಕಾಂಗ್ರೆಸ್‌ಗೆ ಮುಸ್ಲಿಂ ಮತಗಳೇ ಮುಖ್ಯವಾದವು. ಕಾಂಗ್ರೆಸ್ ಎಂದಿನಂತೆ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಹಿಂದೆ ವೀರಶೈವ ಲಿಂಗಾಯತ ಧರ್ಮ್, ನಂತರ ಮತಾಂತರದ ವಿಷಯ, ಗೋಹತ್ಯೆ. ಇದೀಗ ಹಿಜಾಬ್ ಅವರ ರಾಜಕೀಯ ವಿಚಾರವಾಗಿದೆ. ಹಿಂದೂ ಮುಸ್ಲಿಂ ಒಡೆದಿದ್ದು ಕಾಂಗ್ರೆಸ್, ಆದರೆ ಅದರ ಅಪವಾದ ನಮ್ಮ ಮೇಲೆ ಎಂದು ಮೈಸೂರಿನಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ಸಿಎಂ ಆಗಿದ್ದ ಸಿದ್ದರಾಮಯ್ಯಗೆ ನ್ಯಾಯಾಲಯದ ಆದೇಶ ಗೊತ್ತಿಲ್ಲವಾ? ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದವೂ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ತಾನು ಎರಡನೇ ಅಂಬೇಡ್ಕರ್ ಅಂತಾ ಹೇಳಿಕೊಳ್ಳುತ್ತಾರೆ. ಅವರಿಗೆ ಸಂವಿಧಾನ, ಕಾನೂನು ಗೊತ್ತಿಲ್ಲವಾ? ಸಿಎಂ ಆಗಿದ್ದವರಿಗೆ ನ್ಯಾಯಾಲಯದ ಆದೇಶ ಕಾನೂನು ಗೊತ್ತಿಲ್ಲವಾ? ಕೇರಳದ ಹೈಕೋರ್ಟ್ ಏನು ಹೇಳಿದೆ ಎಂಬುದನ್ನು ಸಿದ್ದರಾಮಯ್ಯ ಓದಿ ಕೊಳ್ಳಲಿ. ಸರ್ಕಾರದ ಆದೇಶ ಮಾಡಿದೆ, ಈ ಬಗ್ಗೆ ಕಾಂಗ್ರೆಸ್ ನಿಲುವ ಸ್ಪಷ್ಟನೆ ಮಾಡಲಿ. ಕಾನೂನು ಪಾಲನೆ ಮಾಡಬೇಕೋ ಬೇಡವೋ ಸಿದ್ದರಾಮಯ್ಯ ಸ್ಪಷ್ಟಪಡಿಸಲಿ ಎಂದು ಮೈಸೂರಿನಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ.

Published On - 9:11 am, Tue, 8 February 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ