ಯದುವೀರ್ ಒಡೆಯರ್ ಜನರ ಜೊತೆ ಬೆರೆಯುತ್ತಾರಾ ಇಲ್ಲವಾ ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ: ಎಸ್​ಎ ರಾಮದಾಸ್

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೆ, ಮೈಸೂರು ಅರಮನೆಯ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಕ್ಷೇತ್ರದಲ್ಲಿ ಬಿಜೆಪಿ ಮಣೆ ಹಾಕಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪ್ರತಾಪ್ ಸಿಂಹ ನೀಡಿದ ಹೇಳಿಕೆಗೆ ಮಾಜಿ ಶಾಸಕ ಎಸ್​ಎ ರಾಮದಾಸ್ ಟಾಂಗ್ ಕೊಟ್ಟಿದ್ದಾರೆ.

ಯದುವೀರ್ ಒಡೆಯರ್ ಜನರ ಜೊತೆ ಬೆರೆಯುತ್ತಾರಾ ಇಲ್ಲವಾ ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ: ಎಸ್​ಎ ರಾಮದಾಸ್
ಪ್ರತಾಪ್ ಸಿಂಹ ಮತ್ತು ಎಎಸ್ ರಾಮದಾಸ್
Follow us
ರಾಮ್​, ಮೈಸೂರು
| Updated By: Rakesh Nayak Manchi

Updated on:Mar 12, 2024 | 4:48 PM

ಮೈಸೂರು, ಮಾ.12: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ (Pratap Simha) ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೆ, ಮೈಸೂರು ಅರಮನೆಯ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಕ್ಷೇತ್ರದಲ್ಲಿ ಬಿಜೆಪಿ ಮಣೆ ಹಾಕಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದ ಪ್ರತಾಪ್ ಸಿಂಹ, ರಾಜ-ಪ್ರಜೆ ನಡುವಣ ವ್ಯತ್ಯಾಸ ಬದಿಗಿಟ್ಟು ಬಂದರೆ ಅವರಿಗೆ ಸ್ವಾಗತ. ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ ಎಂದಿದ್ದರು. ಈ ಹೇಳಿಕೆಗೆ ಕೌಂಟರ್ ಕೊಟ್ಟ ಮಾಜಿ ಶಾಸಕ ಎಸ್​ಎ ರಾಮದಾಸ್ (SA Ramdas), ಯದುವೀರ್ ಒಡೆಯರ್ ಅವರು ಜನರ ಜೊತೆ ಬೆರಿತಾರಾ ಇಲ್ಲವಾ ಎಂಬುದನ್ನು ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮದಾಸ್, ಕಳೆದ ವಿಧಾನಸಭಾ ಚುನಾವಣೆ ವೇಳೆ ನನಗೂ ಟಿಕೆಟ್ ಮಿಸ್ ಆಯ್ತು. ಆಗ ನಾನು ಪಕ್ಷದಲ್ಲೇ ಉಳಿದುಕೊಂಡು ಕೆಲಸ ಮಾಡಿದೆ ಎಂದು ಹೇಳುವ ಮೂಲಕ ಟಿಕೆಟ್ ಕೈ ತಪ್ಪುವ ಬಗ್ಗೆ ಅಸಮಾಧಾನ ಹೊರಹಾಕುತ್ತಿಉರವ ಪ್ರತಾಪ್ ಸಿಂಹ ಅವರಿಗೆ ಟಾಂಗ್ ಕೊಟ್ಟರು.

ಇದನ್ನು ಓದಿ: ಮಹಾರಾಜರನ್ನೇ ರಾಜಕೀಯಕ್ಕೆ ತಂದ ಪಕ್ಷದ ಮುಖಂಡರಿಗೆ ನಮೋ! ಯದುವೀರ್​​ ರಾಜಕೀಯ ಪ್ರವೇಶ ಬಗ್ಗೆ ಪ್ರತಾಪ್​ ಸಿಂಹ ಟಾಂಗ್

ಕೇಂದ್ರದಲ್ಲಿ ಇದುವರೆಗೂ ಅಭ್ಯರ್ಥಿ ಯಾರೆಂಬುದು ಅಂತಿಮವಾಗಿಲ್ಲ. ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಸುದ್ದಿಗೋಷ್ಠಿ ಕರೆದಿದ್ದೇವೆ. ಮೈಸೂರು ಅರಸರ ಕೊಡುಗೆಗಳ ಬಗ್ಗೆ ಅಪಾರ ಗೌರವವಿದೆ. ಯದುವೀರ ಒಡೆಯರ್ ರವರು ಜನರ ಜೊತೆ ಬೆರಿತಾರಾ ಇಲ್ಲವಾ ಎಂಬುದನ್ನು ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ ಎಂದರು.

ರಾಮದಾಸ್ ಅವರು ಪಕ್ಷಕ್ಕಾಗಿ ಕೆಲಸ ಮಾಡಿದ್ದರು ಎಂದು ಪ್ರತಾಪ್ ಸಿಂಹರವರೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವತ್ತಿಗೂ ನಮಗೆ ಪ್ರತಾಪಸಿಂಹ ಲೀಡರ್. ಅವರಿಗೆ ಗೌರವ ಕೊಟ್ಟೆ ಕೊಡುತ್ತೇವೆ. ಅವರಿಗೆ ಟಿಕೆಟ್ ಕೊಟ್ಟರು ಕೆಲಸ ಮಾಡುತ್ತೇವೆ. ನಾನು ಇನ್ನೊಬ್ಬರಿಗೆ ಪಾಠ ಮಾಡುವಷ್ಟು ದೊಡ್ಡವನಲ್ಲ. ನಾನು ಸೋತ ಬಳಿಕವು ಪಕ್ಷದ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ ಎಂದರು.

ಪ್ರತಾಪ್ ಸಿಂಹಗೆ ಟಿಕೆಟ್​ ನಿರಾಕರಣೆ ಆಗಿಲ್ಲ

ಕೆ.ಆರ್​ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಮಾತನಾಡಿ, ಇನ್ನೂ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್​ ನಿರಾಕರಣೆ ಆಗಿಲ್ಲ. ಪ್ರತಾಪ್​ ಸಿಂಹ 10 ವರ್ಷ ಸಂಸದರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿಯೂ ಪ್ರತಾಪ್ ಸಿಂಹಗೆ ಟಿಕೆಟ್ ಸಿಗಬಹುದು. ಬೇರೆಯವರಿಗೆ ಟಿಕೆಟ್​ ಸಿಕ್ಕರೂ ಪ್ರತಾಪಸಿಂಹ ಕೆಲಸ ಮಾಡುತ್ತಾರೆ. ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕವಾಗಿ ಮಾತಾಡಿದ್ದಾರೆ. ಅದರಿಂದ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಮುಜುಗರ ಆಗುತ್ತದೆ. ವಿಚಲಿತರಾಗಿ ಪ್ರತಾಪ್ ಸಿಂಹ ಮಾತನಾಡಬಾರದು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಹೊಂದಾಣಿಕೆ ರಾಜಕೀಯದ ಕಳ್ಳ-ಮಳ್ಳ; ಬಿಎಸ್​ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ತಿರುಗಿಬಿದ್ದ ನೆಟ್ಟಿಗರು, ಕಾರಣ ಇಲ್ಲಿದೆ

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಾತನಾಡಿದ ಮಾಜಿ ಶಾಸಕರೂ ಆಗಿರುವ ಮೈಸೂರು ನಗರ ಘಟಕದ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ, ಡಾ.ಮಂಜುನಾಥ್, ಅಪ್ಪಚ್ಚು ರಂಜನ್ ಸೇರಿ ಹಲವು ಆಕಾಂಕ್ಷಿಗಳಿದ್ದರು. ಕೆ.ಎಸ್.ಈಶ್ವರಪ್ಪ ಬಂದಾಗ ಆಕಾಂಕ್ಷಿಗಳ ಬಗ್ಗೆ ಮಾಹಿತಿ ನೀಡಿದ್ದೆವು. ಅಭ್ಯರ್ಥಿ ಯಾರಾಗಬೇಕೆಂದು ಅಭಿಪ್ರಾಯ ಸಂಗ್ರಹ ಮಾಡಿದ್ದರು. ಅಭ್ಯರ್ಥಿ ಬಗ್ಗೆ ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಅದನ್ನ ಹೈಕಮಾಂಡ್​ಗೆ ತಲುಪಿಸಿದ್ದಾರೆ. ಅದರ ಬಗ್ಗೆ ನಮಗೆ ಮಾಹಿತಿ ಇರಲ್ಲ ಎಂದರು.

ಪ್ರತಾಪ್ ಸಿಂಹಗೆ ನಾಗೇಂದ್ರ ಟಾಂಗ್

ಚುನಾವಣೆಯಲ್ಲಿ ಸೋತವರು ಅವರ ನಡವಳಿಕೆಯಿಂದ ಸೋತಿರಬಹುದು ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಟಾಂಗ್ ಕೊಟ್ಟ ನಾಗೇಂದ್ರ, ನನ್ನ ನಡವಳಿಕೆಯಿಂದ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರ ಆಗಿಲ್ಲ. ನಡವಳಿಕೆ ಸರಿಯಿಲ್ಲ ಅನ್ನೋದಾದರೆ ನನಗೆ ನಗರಾಧ್ಯಕ್ಷ ಸ್ಥಾನ ನೀಡುತ್ತಿದ್ದರೇ ಎಂದು ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:46 pm, Tue, 12 March 24

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ