
ಮೈಸೂರು, ಮೇ 24: ಹೆಚ್.ಡಿ.ಕೋಟೆ (HD Kote) ತಾಲೂಕಿನ ಬೂದನೂರು ಕೆರೆಗೆ (Budanur Lake) ಹಾರಿ ಒಂದೇ ಕುಟಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಪುತ್ರಿ ಹರ್ಷಿತಾ ಮೃತ ದುರ್ದೈವಿಗಳು. ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಯುವಕನೋರ್ವನೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ. ಇದರಿಂದ ತಂದೆ ಮಹದೇವಸ್ವಾಮಿ, ತಾಯಿ ಮಂಜುಳಾ ಮತ್ತು ಸಹೋದರಿ ಹರ್ಷಿತಾ ಮನನೊಂದಿದ್ದರು.
ನಂತರ , ಮೂವರೂ ಕಾಣೆಯಾಗಿದ್ದು, ಇವರ ಚಪ್ಪಲಿಗಳು ಮತ್ತು ಬೈಕ್ ಬೂದನೂರು ಕೆರೆ ಏರಿ ಮೇಲೆ ಪತ್ತೆಯಾಗಿದೆ. ಮೂವರೂ ಕೆರೆಗೆ ಹಾರಿ ಮೃತಪಟ್ಟಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸಿದಾಗ, ಮೂವರ ಶವ ಕೆರೆಯಲ್ಲಿ ಪತ್ತೆಯಾಗಿದೆ.
ಅಗ್ನಿಶಾಮಕ ದಳ ಸಿಬ್ಬಂದಿ ಶವಗಳನ್ನು ಹೊರ ತೆಗೆದರು. ಶವಗಳ ಸೊಂಟದಲ್ಲಿ ಹಗ್ಗ ಇದ್ದು, ಮೂವರು ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಗೊತ್ತಿಗಿದೆ. ಮೂವರ ಮೃತ ದೇಹ ಒಂದೇ ಸ್ಥಳದಲ್ಲಿ ಪತ್ತೆಯಾಗಿವೆ. ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ: ಅಡುಗೆ ಎಣ್ಣೆ ಮಿಲ್ನಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟಿರುವ ಘಟನೆ ಜಮಖಂಡಿಯ ರಹಮತ್ ನಗರದಲ್ಲಿ ನಡೆದಿದೆ. ರಫಿಕ್ ಸೈಯದ್ ಕುಡಚಿ (35) ಮೃತದುರ್ದೈವಿ. ಜಮಖಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಪಂಜಾಬ್ನಲ್ಲಿ ಧರ್ಮಸ್ಥಳದ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ
ವಿಜಯಪುರ: ಹೃದಯಾಘಾತದಿಂದ ಯುವಕ ಮೊಹಮ್ಮದ್ ಪೈಗಂಬರ್ ಗಂಗನಹಳ್ಳಿ (28) ಮೃತಪಟ್ಟಿದ್ದಾನೆ. ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ಘಟನೆ ನಡೆದಿದೆ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಮೊಹಮ್ಮದ್ ಪೈಗಂಬರ್ ಮೃತಪಟ್ಟಿದ್ದಾನೆ. ಮೃತ ಮೊಹಮ್ಮದ್ ಅಲ್ಯೂಮಿನಿಯಂ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:40 pm, Sat, 24 May 25