ಗುಜರಾತ್​ನಲ್ಲಿ ಸ್ಯಾಂಟ್ರೋ ರವಿ ಬಂಧನ: ಖಾಕಿ ಸ್ಪೆಷಲ್​ ಟೀಂ ಕಾರ್ಯಾಚರಣೆ ಹೇಗಿತ್ತು ಗೊತ್ತಾ?

25ಕ್ಕೂ ಹೆಚ್ಚು ಪೊಲೀಸರ ಕಾರ್ಯಾಚರಣೆಯಿಂದ ಕೆ.ಎಸ್.ಮಂಜುನಾಥ ಅಲಿಯಾಸ್​ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಬಂಧಿಸಿ ರಾಜ್ಯಕ್ಕೆ ಕರೆತರಲಾಗಿದೆ.

ಗುಜರಾತ್​ನಲ್ಲಿ ಸ್ಯಾಂಟ್ರೋ ರವಿ ಬಂಧನ: ಖಾಕಿ ಸ್ಪೆಷಲ್​ ಟೀಂ ಕಾರ್ಯಾಚರಣೆ ಹೇಗಿತ್ತು ಗೊತ್ತಾ?
ಕರ್ನಾಟಕ ಪೊಲೀಸ್​
Follow us
| Updated By: ವಿವೇಕ ಬಿರಾದಾರ

Updated on: Jan 15, 2023 | 3:28 PM

ಮೈಸೂರು: ಕೆ.ಎಸ್.ಮಂಜುನಾಥ ಅಲಿಯಾಸ್​ ಸ್ಯಾಂಟ್ರೋ ರವಿಯನ್ನು (Santro Ravi) ಮೈಸೂರು ಪೊಲೀಸರು (Mysore Police) ಬಂಧಿಸಿ ರಾಜ್ಯಕ್ಕೆ ಕರೆತಂದಿದ್ದಾರೆ. ಸತತ 12 ದಿನಗಳ ಕಾರ್ಯಾಚರಣೆ ಬಳಿಕ ಸ್ಯಾಂಟ್ರೋ ರವಿ ಬಂಧನವಾಗಿದೆ. ಪ್ರಕರಣ ಕಾರ್ಯಾಚರಣೆ ಹಿಂದೆ ಸುಮಾರು 25ಕ್ಕೂ ಹೆಚ್ಚು ಪೊಲೀಸರು ಇದ್ದಾರೆ. ಹಿರಿಯ ಅಧಿಕಾರಿಗಳ ಜೊತೆ ಸುಮಾರು 19 ಠಾಣೆಗಳ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಅಧಿಕಾರಿಗಳ ಪಟ್ಟಿ ಟಿವಿ9ಗೆ ಲಭ್ಯವಾಗಿದೆ.

ಪ್ರಕರಣ ಭೇದಿಸಲು ಮೈಸೂರು ಹೊರ ಜಿಲ್ಲೆ ಪೊಲೀಸರು ಸಹಾಯ ಮಾಡಿದ್ದರು. ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್, ರಾಮನಗರ ಎಸ್​ಪಿ ಸಂತೋಷ್​ ಬಾಬು, ಮಂಡ್ಯ ಎಸ್​ಪಿ ಯತೀಶ್​, ರಾಯಚೂರು ಎಸ್​​​ಪಿ ಬಿ.ನಿಖಿಲ್, ಮೈಸೂರು ಡಿಸಿಪಿ ಮುತ್ತುರಾಜ್, ಇಲಾಖೆಯ ವಿವಿಧ ಘಟಕಗಳ ಪೊಲೀಸ್ ಸಿಬ್ಬಂದಿ ಮತ್ತು ಕಾರ್ಯಾಚರಣೆಯ ಯಶಸ್ಸಿಗೆ ಕೈಜೋಡಿಸಿರುವ ಟ್ರಾಫಿಕ್, ಕ್ರೈಂ ಹಾಗೂ ಸಿಸಿಬಿ ಪೊಲೀಸ್ ಸಿಬ್ಬಂದಿ ಸ್ಯಾಂಟ್ರೋ ರವಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಕುಖ್ಯಾತ ಕ್ರಿಮಿನಲ್ ಸ್ಯಾಂಟ್ರೋ ರವಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಜೆಎಂಎಫ್​ಸಿ ಕೋರ್ಟ್​

ಹರಕೆ ಹೊತ್ತ 22 ಗಂಟೆಗಳಲ್ಲಿ ಸ್ಯಾಂಟ್ರೋ ರವಿ ಬಂಧನ: ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ ಅಲೋಕ್ ಕುಮಾರ್

ಮಂಡ್ಯ: ಕಳೆದ ಹತ್ತು ಹನ್ನೊಂದು ದಿನದಿಂದ ರಾಜ್ಯದಲ್ಲಿ ಬಾರಿ ಸದ್ದು ಮಾಡಿದ ಹೆಸರು ಸ್ಯಾಂಟ್ರೋ ರವಿ. ರಾಜ್ಯ ರಾಜಕೀಯದಲ್ಲಿ, ಪೊಲೀಸ್ ವಲಯದಲ್ಲಿ ಸಂಚಲನ ಎಬ್ಬಿಸಿದ್ದ. ಮಾಡಬಾರದ ಮಣ್ಣು ತಿನ್ನೋ ಕೆಲಸ ಮಾಡಿ ಪೊಲೀಸರಿಗೂ ಸಿಗದೇ ತಲೆ ತಪ್ಪಿಸಿಕೊಂಡು ಓಡುತ್ತಿದ್ದಾ ಸ್ಯಾಂಟ್ರೋ ಅಂತಿಮವಾಗಿ ಗುಜರಾತ್​ನಲ್ಲಿ ಖಾಕಿ ಬಲೆಗೆ ಬಿದ್ದಿದ್ದಾನೆ. ಇನ್ನು ಈ ಸ್ಯಾಂಟ್ರೋ ರವಿ ಬಂಧನಕ್ಕೆ ಎಡಿಜಿಪಿ ಅಲೋಕ್ ಕುಮಾರ್  ದೇವರಿಗೆ ಹರಕೆ ಹೊತ್ತಿದ್ದರಂತೆ. ಇದೀಗ ಸ್ಯಾಂಟ್ರೋ ರವಿ ಬಂಧನವಾಗಿದ್ದರಿಂದ ಹರಕೆ ತೀರಿಸಿದ್ದಾರೆ.

ಹೌದು…ಸ್ಯಾಂಟ್ರೋ ಬಂಧನಕ್ಕೆ ಪೊಲೀಸ್ ಇಲಾಖೆ ಮೇಲೆ ಒತ್ತಡ ಹೆಚ್ಚಾಗಿತ್ತು. ಇದರಿಂದ ಪೊಲೀಸರು ಹಲವು ತಂಡಗಳನ್ನು ಮಾಡಿಕೊಂಡು ಬೇರೆ-ಬೇರೆ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಇತ್ತ ಅಲೋಕ್ ಕುಮಾರ್ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿರುವ ನಿಮಿಷಾಂಭ ದೇವಿಗೆ ಹರಕೆ ಹೊತ್ತಿದ್ದರು. ಅದರಂತೆ ಇದೀಗ ಸ್ಯಾಂಟ್ರೋ ಪೊಲೀಸ್ ಬಲೆ ಬಿದ್ದಿದ್ದಾನೆ. ಈ ಹಿನ್ನೆಲೆಯಲ್ಲಿ ಇಂದು ಅಲೋಕ್ ಕುಮಾರ್ ನಿಮಿಷಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು.

ಇದನ್ನೂ ಓದಿ:  ವೈಟ್‌ ಕಾಲರ್ ಕ್ರಿಮಿನಲ್ ಸ್ಯಾಂಟ್ರೋ ರವಿ ಬಂಧನ: ಎಡಿಜಿಪಿ ಅಲೋಕ್ ಕುಮಾರ್​ ಹೇಳಿದ್ದಿಷ್ಟು ​

ಇನ್ನು ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಲೋಕ್ ಕುಮಾರ್, ದೇವಿ ಮೇಲೆ ಹನ್ನೆರಡು ವರ್ಷಗಳಿಂದ ನನಗೆ ನಂಬಿಕೆ ಇದೆ. 2011 ರಲ್ಲಿ ಮೈಸೂರಿನಲ್ಲಿ ಡಬಲ್ ಮರ್ಡರ್ ಕೇಸ್ ಆಗಿತ್ತು. ಆಗಲೂ ಬಂದು ನಾನು ದೇವಿಗೆ ಹರಕೆ ಹೊತ್ತಿದ್ದೆ. ಹಾಗೇ ಹರಕೆ ಹೊತ್ತು ಪೂಜೆ ಸಲ್ಲಿಸಿ ನಾವು ಮೈಸೂರಿಗೆ ಹೋಗುವುದರೊಳಗಾಗಿ ಅಂದ್ರೆ ಐದೇ ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಲಾಗಿತ್ತು. ಈಗಲೂ ಹತ್ತನೇ ತಾರೀಖು ಬಂದು ನಾನು ಪೂಜೆ ಸಲ್ಲಿಸಿ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಹರಕೆ ಹೊತ್ತಿದ್ದೆ. ಈಗಲೂ ಹರಕೆ ಹೊತ್ತ 22 ಗಂಟೆಗಳಲ್ಲೇ ಆರೋಪಿ ಸಿಕ್ಕಿದ್ದಾನೆ. ಹಾಗಾಗಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇನೆ ಎಂದರು.

ದೇವಿ ಮೇಲೆ ಅಪಾರವಾದ ನಂಬಿಕೆ ಇದೆ. ಆತನಿಂದಾಗಿ (ಸ್ಯಾಂಟ್ರೋ ರವಿ) ಸರ್ಕಾರಕ್ಕೆ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತಿತ್ತು. ಹಾಗಾಗಿ ಆತ ನಮಗೆ ಬೇಗ ಸಿಗಲಿ ಎಂದು ಹರಕೆ ಹೊತ್ತಿದ್ದೆ. ಈಗ ಸ್ಯಾಂಟ್ರೋ ರವಿ ನಮ್ಮ‌ ಕಸ್ಟಡಿಯಲ್ಲಿದ್ದಾನೆ. ಆತನ ಹೇಳಿಕೆ ದಾಖಲಿಸಲಾಗುತ್ತಿದೆ. ಮೊದಲು ಆತನ ವಿರುದ್ದ ದಾಖಲಾಗಿರುವ ಕೇಸ್ ಬಗೆಗೆ ವಿಚಾರಣೆ ನಡೆಯುತ್ತೆ. ಬಳಿಕ ತಲೆ ಮರೆಸಿಕೊಂಡು ಎಲ್ಲೆಲ್ಲಿ ಇದ್ದ ಆತನಿಗೆ ಯಾರೆಲ್ಲಾ ಸಹಾಯ ಮಾಡಿದ್ರು ಎನ್ನುವ ಬಗ್ಗೆ ವಿಚಾರಣೆ ಮಾಡುತ್ತೇವೆ. ಹಾಗೊಂದು ವೇಳೆ ಯಾರಾದ್ರು ಸಹಾಯ ಮಾಡಿದ್ರೆ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ