ಮೈಸೂರು ನಗರ, ತಾಲೂಕಿನಾದ್ಯಂತ 1ರಿಂದ 9ನೇ ತರಗತಿ ವರೆಗೆ ಶಾಲೆ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ

ಕೊರೊನಾ ಪ್ರಕರಣಗಳು​ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸುತ್ತಾರೆ. ಶಾಲಾ- ಕಾಲೇಜು ಬಂದ್​ ಬಗ್ಗೆ ಆಯಾ ಡಿಸಿ ನಿರ್ಧರಿಸ್ತಾರೆ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್​ ಪ್ರತಿಕ್ರಿಯೆ ನೀಡಿದ್ದರು. 

ಮೈಸೂರು ನಗರ, ತಾಲೂಕಿನಾದ್ಯಂತ 1ರಿಂದ 9ನೇ ತರಗತಿ ವರೆಗೆ ಶಾಲೆ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ
ಸಾಂಕೇತಿಕ ಚಿತ್ರ

ಮೈಸೂರು: ಮೈಸೂರು ನಗರ, ತಾಲೂಕಿನಾದ್ಯಂತ ಶಾಲೆಗಳು ಬಂದ್ ಮಾಡಿ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್​ ಆದೇಶ ಹೊರಡಿಸಿದ್ದಾರೆ. 1 ರಿಂದ 9ನೇ ತರಗತಿವರೆಗೆ ಶಾಲೆಗಳನ್ನು ಬಂದ್ ಮಾಡಿ ಆದೇಶ ನೀಡಲಾಗಿದೆ. ಅದರಂತೆ, ಮೈಸೂರಿನ ಜಿಲ್ಲಾದ್ಯಂತ 1 ರಿಂದ 9ನೇ ತರಗತಿ ಶಾಲೆ ಬಂದ್ ಮಾಡಿ ಆದೇಶಿಸಲಾಗಿದೆ. ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್​ ಮಾಡುವುದಿಲ್ಲ. ಕೊರೊನಾ ಪ್ರಕರಣಗಳು​ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸುತ್ತಾರೆ. ಶಾಲಾ- ಕಾಲೇಜು ಬಂದ್​ ಬಗ್ಗೆ ಆಯಾ ಡಿಸಿ ನಿರ್ಧರಿಸ್ತಾರೆ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್​ ಪ್ರತಿಕ್ರಿಯೆ ನೀಡಿದ್ದರು. 

ಅಲ್ಲಿನ ಅವಶ್ಯಕತೆಗಳಿಗೆ ತಕ್ಕಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಯಾರೂ ಆತಂಕಕ್ಕೆ ಒಳಗಾಗುವುದು ಬೇಡ. ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಮಾಡಲ್ಲ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್​ ಹೇಳಿಕೆ ನೀಡಿದ್ದರು. ಒಂದು ವಾರದಲ್ಲಿ ರಾಜ್ಯದಲ್ಲಿ 900 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ. 1 ರಿಂದ 10 ನೇ ತರಗತಿಯ 900 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ ಎಂದು ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದರು.

ಕರ್ನಾಟಕ ಕೊರೊನಾ ವರದಿ:

ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 11) ಹೊಸದಾಗಿ 14,473 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,78,129 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,66,461 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,379 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 73,260 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 10,800 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 13,19,340 ಕ್ಕೆ ಏರಿಕೆಯಾಗಿದೆ. 13,19,340 ಸೋಂಕಿತರ ಪೈಕಿ 12,43,995 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,427 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 58,917 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ಸೋಂಕು ಹಿನ್ನೆಲೆ; ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಇದನ್ನೂ ಓದಿ: ಕೊರೊನಾವೈರಸ್ ಲಾಕ್‌ಡೌನ್ ವೇಳೆ ನಡೆದ ಮದ್ಯ ಪಾರ್ಟಿಯಲ್ಲಿ ಬ್ರಿಟನ್ ಪ್ರಧಾನಿ ಭಾಗಿ; ಇಮೇಲ್​​ನಿಂದ ಬಯಲಾಯ್ತು ಪ್ರಕರಣ

Click on your DTH Provider to Add TV9 Kannada