AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಲ್ಲಿ ಮಣ್ಣಾದ ನಿಷ್ಕಳಂಕ ರಾಜಕಾರಣಿ ಶ್ರೀನಿವಾಸ್ ಪ್ರಸಾದ್, ಅಗಲಿದ ನಾಯಕನಿಗೆ ಕಣ್ಣೀರ ವಿದಾಯ

ಅನಾರೋಗ್ಯದಿಂದ ಮೃತಪಟ್ಟ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆ ಬೌದ್ಧ ಧರ್ಮದ ವಿದಿ-ವಿಧಾನದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಮೈಸೂರಿನ ಮಾನಂದವಾಡಿ ರಸ್ತೆಯ ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಶ್ರೀನಿವಾಸ್ ಪ್ರಸಾದ್ ಮಣ್ಣಲ್ಲಿ ಮಣ್ಣಾದರು. ಗಣ್ಯರು, ಕುಟುಂಬಸ್ಥರು ಮತ್ತು ಅವರ ಅಭಿಮಾನಿಗಳು ತಮ್ಮ ನಾಯಕನಿಗೆ ಕಣ್ಣಿರ ವಿದಾಯ ಹೇಳಿದರು.

ಮಣ್ಣಲ್ಲಿ ಮಣ್ಣಾದ ನಿಷ್ಕಳಂಕ ರಾಜಕಾರಣಿ ಶ್ರೀನಿವಾಸ್ ಪ್ರಸಾದ್, ಅಗಲಿದ ನಾಯಕನಿಗೆ ಕಣ್ಣೀರ ವಿದಾಯ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Apr 30, 2024 | 4:51 PM

Share

ಮೈಸೂರು, (ಏಪ್ರಿಲ್ 30): ಅನಾರೋಗ್ಯದಿಂದ ಮೃತಪಟ್ಟ ಸಂಸದ ವಿ.ಶ್ರೀನಿವಾಸ್ ಪ್ರಸಾದ್ (Srinivasa Prasad) ಅವರ ಅಂತ್ಯಕ್ರಿಯೆ ಇಂದು(ಏಪ್ರಿಲ್ 30) ಮೈಸೂರಿನ ಅಶೋಕಪುರಂನ ಡಾ.ಬಿ.ಆರ್ ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಬೌದ್ಧ ಧರ್ಮದ ವಿದಿ-ವಿಧಾನದಂತೆ ನೆರವೇರಿತು. ಅಂತ್ಯಕ್ರಿಯೆ ವೇಳೆ ಬೆಂಗಳೂರಿನ ಮಹಾಬೋಧಿಯ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ವಿಧಿ-ವಿಧಾನಗಳು ನೆರವೇರಿತು. ಈ ವೇಳೆ ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ಪುಣ್ಯಾನುಮೋದನೆ ಬಳಿಕ ಕುಟುಂಬಸ್ಥರು ಗೌರವ ಸಲ್ಲಿಸಿದ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಣ್ಣಲ್ಲಿ ಮಣ್ಣಾದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಇನ್ನೂ ನೆನಪು ಮಾತ್ರ.

ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ,ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ಗಣ್ಯರು, ಕುಟುಂಬಸ್ಥರು ,ಸಾವಿರಾರು ಅಭಿಮಾನಿಗಳು ಭಾಗಿಯಾಗಿದ್ದು, ಅಗಲಿದ ನಾಯಕನಿಗೆ ಕಣ್ಣಿರ ವಿದಾಯ ಹೇಳಿದರು. ಅಂತ್ಯಕ್ರಿಯೆಗೂ ಮುನ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಮೃತರ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಈ ವೇಳೆ ಸಾವಿರಾರು ಜನ ಸೇರಿದ್ದು, ಅಹಿತಕರ ಘಟನೆಗಳು ಜರುಗದಂತೆ ಪೊಲೀಸ್ ಇಲಾಖೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿತ್ತು. ಅಂತ್ಯಕ್ರಿಯೆಗೂ ಮುನ್ನ ಸಚಿವ ಮಹದೇವಪ್ಪ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈಸೂರು – ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ವಡೆಯರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದರು.