ವರುಣಾದಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ: ಮಲಗಿದ್ದ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಖದೀಮರು

ಮನೆಯಲ್ಲಿ ಮಲಗಿರುವಾಗ ಬಾಗಿಲನ್ನು ಮೀಟಿ ಒಳಗೆ ಪ್ರವೇಶಿಸಿದ ಕಳ್ಳರು ಭವಾನಿಯವರ ಕತ್ತಿನಲ್ಲಿದ್ದ ಸುಮಾರು 1.50 ಲಕ್ಷ ರೂ. ಬೆಳೆಬಾಳುವ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮತ್ತೊಂದೆಡೆ ಸೋಮಪ್ಪ ಎಂಬುವವರ ಮನೆಯಲ್ಲಿ ಎರಡು ಕಬ್ಬಿಣದ ಪೆಟ್ಟಿಗೆಯಲ್ಲಿದ್ದ 5 ಗ್ರಾಂ ಮಾಂಗಲ್ಯ ಮತ್ತು 40 ಸಾವಿರ ಹಣ ಕಳ್ಳತನವಾಗಿದೆ.

ವರುಣಾದಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ: ಮಲಗಿದ್ದ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಖದೀಮರು
ಮಾಂಗಲ್ಯ ಕಳೆದುಕೊಂಡ ಮಹಿಳೆ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on:Sep 24, 2023 | 12:38 PM

ಮೈಸೂರು, ಸೆ.24: ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಮೈಸೂರಿನಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ (Theft) ನಡೆದಿದೆ. ಅದರಲ್ಲೂ ಖದೀಮರು, ಮಲಗಿದ್ದ ಮಹಿಳೆಯ ಮಾಂಗಲ್ಯ ಸರವನ್ನೇ ಎಗರಿಸಿ ಪರಾರಿಯಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ಕ್ಷೇತ್ರದ ರಾಂಪುರ ಗ್ರಾಮದಲ್ಲಿ ಒಂದೇ ರಾತ್ರಿ ಐದು ಕಡೆ ಸರಣಿ ಕಳ್ಳತನ ನಡೆದಿದೆ. ನಗದು ಮತ್ತು ಚಿನ್ನಾಭರಣ ದೋಚಿ ಖದೀಮರು ಪರಾರಿಯಾಗಿದ್ದಾರೆ. ಮನೆಯಲ್ಲಿ ಮಲಗಿದ್ದ ಶಿವಕುಮಾರ್ ಎಂಬುವವರ ಪತ್ನಿ ಭವಾನಿ ಅವರ ಮಾಂಗಲ್ಯ ಸರ ಕಳ್ಳತನವಾಗಿದೆ.

ಮನೆಯಲ್ಲಿ ಮಲಗಿರುವಾಗ ಬಾಗಿಲನ್ನು ಮೀಟಿ ಒಳಗೆ ಪ್ರವೇಶಿಸಿದ ಕಳ್ಳರು ಭವಾನಿಯವರ ಕತ್ತಿನಲ್ಲಿದ್ದ ಸುಮಾರು 1.50 ಲಕ್ಷ ರೂ. ಬೆಳೆಬಾಳುವ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮತ್ತೊಂದೆಡೆ ಸೋಮಪ್ಪ ಎಂಬುವವರ ಮನೆಯಲ್ಲಿ ಎರಡು ಕಬ್ಬಿಣದ ಪೆಟ್ಟಿಗೆಯಲ್ಲಿದ್ದ 5 ಗ್ರಾಂ ಮಾಂಗಲ್ಯ ಮತ್ತು 40 ಸಾವಿರ ಹಣ ಕಳ್ಳತನವಾಗಿದೆ. ಹಾಗೂ ಕಾಡಯ್ಯ ಮತ್ತು ರಾಜಪ್ಪ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ನಾಗೇಂದ್ರ ಎಂಬುವರ ಪಂಪ್ ಹೌಸ್​ನಲ್ಲಿ ಬಾಗಿಲು ಮುರಿದು ಬೆಳೆಬಾಳುವ ವಸ್ತುಗಳನ್ನು ದೋಚಲಾಗಿದೆ. ಕಳ್ಳರನ್ನು ಬಂಧಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕಾವೇರಿ ನದಿಗಾಗಿ ಹೋರಾಟ, ಬುತ್ತುತ್ತಿರುವ ಡ್ಯಾಂಗಳು; ರಾಜ್ಯದ ಪ್ರಮುಖ ನದಿಗಳ ನೀರಿನ ಮಟ್ಟ ಹೀಗಿದೆ

ಬಲೆಯಲ್ಲಿ ಸಿಲುಕ್ಕಿದ್ದ‌ ಬೃಹತ್ ಗಾತ್ರದ ಹೆಬ್ಬಾವು ರಕ್ಷಣೆ

ಮನೆಯ ಸಮೀಪ ಬೇಲಿಗೆ ಕಟ್ಟಲಾಗಿದ್ದ ಬಲೆಯಲ್ಲಿ ಸಿಲುಕಿದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ, ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಿದ್ರಳ್ಳಿಯಲ್ಲಿ ನಡೆದಿದೆ. ಬಿದ್ರಳ್ಳಿಯ ತಿಲಕ ನಾಯ್ಕ ಎನ್ನುವವರ ಮನೆಯ ಸಮೀಪ ಗದ್ದೆಯ ಸುತ್ತ ಕಟ್ಟಲಾಗಿದ್ದ ಬಲೆಯಲ್ಲಿ ಸುಮಾರು 10 ಅಡಿ ಉದ್ದದ ಹೆಬ್ಬಾವು ಬಲೆಗೆ ಸಿಲುಕಿ ಮುಂದೆ ತೆರಳಲಾದರೆ ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ತಿಲಕ ನಾಯ್ಕ ಉಂಚಳ್ಳಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ತಕ್ಷಣ ಸ್ಥಳಕ್ಕೆ ಬಂದ ಫಾರೆಸ್ಟ್ ಗಾರ್ಡ್ ಮಂಜುನಾಥ ಹಾಗೂ ವಾಚರ್ ಕೋಟೆಗುಡ್ಡೆ ಮಂಜಣ್ಣ ಅವರಿಂದ ಬಲೆಯನ್ನು ತುಂಡರಿಸಿ, ಹೆಬ್ಬಾವು ಸುರಕ್ಷಿತವಾಗಿ ಹೊರಗೆ ತೆಗೆದು ಮರಳೊ ಅರಣ್ಯಕ್ಕೆ ಬಿಟ್ಟಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:36 pm, Sun, 24 September 23

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್