AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಪಬ್​​​​ನಲ್ಲಿ ಭಾರೀ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಜನರಿಗೆ ಗಂಭೀರ ಗಾಯ

ಮೈಸೂರು ಬೆಂಕಿ ದುರಂತ: ಮೈಸೂರಿನ ರಿಂಗ್ ರಸ್ತೆಯಲ್ಲಿರುವ ಪಬ್​ನಲ್ಲಿ ಭಾರೀ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ. ಇನ್ನು 7 ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗಾದ್ರೆ, ಪಬ್ ಯಾವುದು? ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಎನ್ನುವ ವಿವರ ಇಲ್ಲಿದೆ.

ಮೈಸೂರಿನ ಪಬ್​​​​ನಲ್ಲಿ ಭಾರೀ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಜನರಿಗೆ ಗಂಭೀರ ಗಾಯ
Fox Den Liquor Garage Pub
ರಾಮ್​, ಮೈಸೂರು
| Edited By: |

Updated on:Jun 15, 2026 | 5:41 PM

Share

ಮೈಸೂರು, (ಜೂನ್ 15): ಮೈಸೂರಿನ (Mysuru) ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ (Fox Den Liquor Garage)  ಪಬ್ ನಲ್ಲಿ (Pub) ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಈ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದರೆ, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.   ಪಬ್​ನಲ್ಲಿ ಕೆಲಸ ಮಾಡುತ್ತಿದ್ದ ಶಾಹಿಲ್, ಪ್ರಕಾಶ್ ಮೃತ ದುರ್ವೈವಿಗಳು. ಇನ್ನು ಗಾಯಗೊಂಡಿರುವ ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯಾಂಶಗಳು

  • ಪಬ್​ನಲ್ಲಿ ಆಕಸ್ಮಿಕ ಬೆಂಕಿಯಿಂದ ಇಬ್ಬರ ಸಜೀವ ದಹನ
  • ಮೈಸೂರಿನ ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಪಬ್​ನಲ್ಲಿ ದುರ್ಘಟನೆ
  • ಪಬ್​ನಲ್ಲಿ ಕೆಲಸ ಮಾಡುತ್ತಿದ್ದ ಶಾಹಿಲ್, ಪ್ರಕಾಶ್ ಸಾವು
  • 7 ಜನರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ

ಮೈಸೂರಿನ ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮೊದಲು ಪಬ್‌ನ ಅಡುಗೆ ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಬೆಂಕಿಯ ಕೆನ್ನಾಲಿಗೆ ಕ್ಷಣಾರ್ಧದಲ್ಲಿ ಇಡೀ ಪಬ್‌ ಗೆ ವ್ಯಾಪಿಸಿದ್ದು, ದಟ್ಟವಾದ ಕಪ್ಪು ಹೊಗೆ ಇಡೀ ಕಟ್ಟಡವನ್ನು ಆವರಿಸಿಕೊಂಡಿದೆ. ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ ಅಂದರೆ ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟಗೊಂಡಬಹುದು ಎಂದು ಶಂಕಿಸಲಾಗಿದೆ.

ಆದ್ರೆ, ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸದ್ಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:10 pm, Mon, 15 June 26

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More