ನಿದ್ದೆ ಮಾಡುವವರನ್ನು ಎಚ್ಚರಿಸಬಹುದು, ನಿದ್ದೆ ಮಾಡಿದಂತೆ ನಟಿಸುವವರನ್ನು ಎಚ್ಚರಿಸುವುದಕ್ಕೆ ಆಗಲ್ಲ; ಮೈಸೂರಿನಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ

ನಾನು ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತುತ್ತಿದ್ದೆ. ಈ ವರ್ಷ ಸಚಿವರೆಲ್ಲಾ ದೆಹಲಿಯಲ್ಲೇ ಇರಬೇಕು ಎಂಬ ಆದೇಶ ಬಂದಿತ್ತು. ಈ ಕಾರಣ ಆಷಾಢಕ್ಕೆ ಬರಲು ಸಾಧ್ಯ ಆಗಿರಲಿಲ್ಲ. ಮುಂದೆ ನವರಾತ್ರಿಗೆ ಬಂದು ಮೆಟ್ಟಿಲು ಹತ್ತುತ್ತೇನೆ.

ನಿದ್ದೆ ಮಾಡುವವರನ್ನು ಎಚ್ಚರಿಸಬಹುದು, ನಿದ್ದೆ ಮಾಡಿದಂತೆ ನಟಿಸುವವರನ್ನು ಎಚ್ಚರಿಸುವುದಕ್ಕೆ ಆಗಲ್ಲ; ಮೈಸೂರಿನಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ
ಶೋಭಾ ಕರಂದ್ಲಾಜೆ
Follow us
TV9 Web
| Updated By: sandhya thejappa

Updated on: Aug 17, 2021 | 9:19 AM

ಮೈಸೂರು: ಜಿಲ್ಲೆಗೆ ಭೇಟಿ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje), ಕೃಷಿ ತಿದ್ದುಪಡಿ ಕಾಯ್ದೆಗಳಿಗೆ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಿದ್ದೆ ಮಾಡುವವರನ್ನು ಬೇಕಾದರೆ ನಾವು ಎಚ್ಚರಿಸಬಹುದು. ಆದರೆ ನಿದ್ದೆ ಮಾಡಿದಂತೆ ನಟಿಸುವವರನ್ನು ಎಚ್ಚರಿಸುವುದಕ್ಕೆ ಆಗಲ್ಲ. ರೈತರಿಗೆ ಕೃಷಿ ಕಾಯ್ದೆ ಉಪಯೋಗದ ಬಗ್ಗೆ ತಿಳಿ ಹೇಳಬಹುದು. ಆದರೆ ರೈತರಂತೆ ನಟಿಸುವವರನ್ನು ಮನವೊಲಿಸಲು ಆಗಲ್ಲ. ದೆಹಲಿಯಲ್ಲಿ ಕೇವಲ ದಲ್ಲಾಳಿಗಳ ಹೋರಾಟವಾಗಿ ಉಳಿದಿದೆ. ಈ ಕಾಯ್ದೆಗಳಿಂದ ರೈತರ ಬೆಳೆ ಮಾರಾಟಕ್ಕೆ ಅನುಕೂಲವಾಗಲಿದೆ. ರೈತರ ಹೊಲಕ್ಕೆ ಮುಂಬೈನಿಂದ ಟ್ರಕ್ ಬಂದು ನಿಲ್ಲುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

ನನಗೆ ಗೇಲಿ ಮಾಡಿದ್ದರು ನಾನು ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತುತ್ತಿದ್ದೆ. ಈ ವರ್ಷ ಸಚಿವರೆಲ್ಲಾ ದೆಹಲಿಯಲ್ಲೇ ಇರಬೇಕು ಎಂಬ ಆದೇಶ ಬಂದಿತ್ತು. ಈ ಕಾರಣ ಆಷಾಢಕ್ಕೆ ಬರಲು ಸಾಧ್ಯ ಆಗಿರಲಿಲ್ಲ. ಮುಂದೆ ನವರಾತ್ರಿಗೆ ಬಂದು ಮೆಟ್ಟಿಲು ಹತ್ತುತ್ತೇನೆ. ತಾಯಿ ಚಾಮುಂಡೇಶ್ವರಿ ನನಗೆ ಎಲ್ಲಾ ಬಗೆಯ ಶಕ್ತಿ ತುಂಬಿದ್ದಾಳೆ. ನಾನು ಮೊದಲು ಮೈಸೂರಿಗೆ ಬಂದಾಗ ಎಲ್ಲರೂ ಗೇಲಿ ಮಾಡಿದ್ದರು. ದಸರಾ ಆಚರಣೆ ಮಾಡೋದು ಗೊತ್ತಿಲ್ಲ ಅಂತ ಗೇಲಿ ಮಾಡಿದ್ದರು. ಆದರೆ ತಾಯಿ ಕೃಪೆಯಿಂದ ಅದನ್ನು ಮಾಡಿ ತೋರಿಸಿದ್ದೇನೆ ಎಂದು ಸಚಿವೆ ತಿಳಿಸಿದರು.

ಪ್ರಧಾನಿ ಮೋದಿ (Narendra Modi) ದೇಶದ ರೈತನ ಮಗಳೊಬ್ಬಳಿಗೆ ಗುರುತಿಸಿ ಕೃಷಿ ಖಾತೆ ನೀಡಿದ್ದಾರೆ. ಹಳ್ಳಿಯಲ್ಲಿ ನಾನು ಓದುವಾಗ ಕರೆಂಟ್ ರಸ್ತೆ ಕೂಡ ಇರಲಿಲ್ಲ. ಅಂತಹ ಹಳ್ಳಿಯಿಂದ ಬಂದವಳಿಗೆ ಇಂತಹ ಖಾತೆ ಕೊಟ್ಟು ಕೆಲಸ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ನಾವು ದೇಶದ ಶೇಕಡ 80ರಷ್ಟು ರೈತರ ಹಿತ ಕಾಯಬೇಕಿದೆ. ಅವರು ಬೇರೆ ಬೇರೆ ಕೆಲಸಗಳಿಗೆ ಹೋಗದೆ ಕೃಷಿಯಲ್ಲೇ ಉಳಿಯುವಂತೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ಕಾರ್ಯಯೋಜನೆ ರೂಪಿಸುತ್ತೇನೆ ಎಂದು ಚಾಮುಂಡಿ ಬೆಟ್ಟದಲ್ಲಿ ಶೋಭಾ ಕರಂದ್ಲಾಜೆ ಹೇಳಿದರು.

ಕೇಂದ್ರ ಕೃಷಿ ಸಚಿವೆಯಾದ ನಂತರ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡುವೆ. ಒಂದೊಂದು ಜಿಲ್ಲೆಯ ರೈತರ ಸಮಸ್ಯೆ ಬೇರೆಯದಾಗಿದೆ. ಅಯಾ ಜಿಲ್ಲೆಗಳಿಗೆ ತೆರಳಿ ಅಲ್ಲಿನ ಸಮಸ್ಯೆಗಳಿಗೆ ಪರಿಹಾರ ನೀಡುವ ಕೆಲಸ ಮಾಡುತ್ತೇನೆ. ಕೊರೊನಾದಿಂದ ಕೃಷಿಗೆ ತೊಡಕಾಗಿದೆ ಅಂತ ಇಲ್ಲ. ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಆಹಾರ ಪದಾರ್ಥಗಳ ಶೇಖರಣೆ ಆಗಿರುವುದನ್ನು ವರದಿಗಳು ಹೇಳುತ್ತಿವೆ. ಕೊರೊನಾ ಸಂದರ್ಭದಲ್ಲೂ ದೇಶದಲ್ಲಿ ದಾಖಲೆ ಪ್ರಮಾಣದ ಕೃಷಿ ಉತ್ಪನ್ನ ಶೇಖರಣೆಯಾಗಿದೆ. ಅದೇ ರೀತಿ ದಾಖಲೆ ಪ್ರಮಾಣದಲ್ಲಿ ಹಣ್ಣು, ತರಕಾರಿ ಬೆಳೆಯಲಾಗಿದೆ. ನಗರಗಳಲ್ಲಿ ಇದ್ದ ನಮ್ಮ ಯುವಕರು ಹಳ್ಳಿಗೆ ಹೋಗಿ ಕೃಷಿ ಮಾಡಿದ ಪರಿಣಾಮ ಇದು ಸಾಧ್ಯವಾಗಿದೆ ಎಂದು ಸಚಿವೆ ಅಭಿಪ್ರಾಯಪಟ್ಟರು.

ಇನ್ನು ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ವಿಚಾರದ ಬಗ್ಗೆ ಮಾತನಾಡಿದ ಕೇಂದ್ರ ಸಚಿವೆ, ಇದೊಂದು ತೀರ್ವ ಖಂಡನೀಯ ವಿಚಾರ. ಪ್ರಜಾಪ್ರಭುತ್ವ ರಾಷ್ಟ್ರಗಳ ಮೇಲೆ ಇಂತಹ ದಾಳಿ ನಡೆಯುತ್ತಿರುವುದು ಆತಂಕ ತಂದಿದೆ. ಆಫ್ಘಾನಿಸ್ತಾನದ ಪಕ್ಕದಲ್ಲೇ ಪಾಕಿಸ್ತಾನ ಇದೆ. ಈ ವಿಚಾರದಲ್ಲಿ ಎಲ್ಲಾ ದೇಶಗಳು ಒಟ್ಟಾಗಿ ದನಿ ಎತ್ತಬೇಕು. ವಿಶ್ವಸಂಸ್ಥೆ ಮೇಲೆ ಒತ್ತಡ ಏರಿ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದರು.

3 ಗಂಟೆಗೆ ಹಾಸನಕ್ಕೆ ಆಗಮಿಸಲಿರುವ ಸಚಿವರು ಜನಾಶೀರ್ವಾದ ಯಾತ್ರೆಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಬಾಗಿಯಾಗಲಿದ್ದಾರೆ. ನಿನ್ನೆ ಮಂಡ್ಯ ಜಿಲ್ಲೆಯಿಂದ ಆರಂಭವಾಗಿರುವ ಯಾತ್ರೆ ಇಂದು ಹಾಸನದಲ್ಲಿ ನಡೆಯುತ್ತದೆ. ಇಂದು ಮಧ್ಯಾಹ್ನ 3 ಗಂಟೆಗೆ ಸಚಿವರು ಹಾಸನಕ್ಕೆ ಆಗಮಿಸಲಿದ್ದಾರೆ. ಶೋಭಾ ಕರಂದ್ಲಾಜೆ ಮಧ್ಯಾಹ್ನ ಜನಾಶೀರ್ವಾದ ಯಾತ್ರೆಯಲ್ಲಿ (Jan Ashirwad Yatra) ರೈತರೊಂದಿಗೆ ಸಂವಾದ ನಡೆಸಿ, ಬಳಿಕ ರೈತರ ವ್ಯವಸಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಕಾರ್ಯಕ್ರಮದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಹಾಗು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ

ಕೊವಿಡ್ ಲಸಿಕೆ 2ನೇ ಡೋಸ್ ಪಡೆಯದಿದ್ದರೂ, ಲಸಿಕೆ ಯಶಸ್ವಿಯಾಗಿದೆ ಎಂಬ ಮೆಸೇಜ್; ಕೋವಿನ್ ಪೋರ್ಟಲ್‌ನಿಂದ ಗೊಂದಲ

ಕೊರೊನಾ, ಬ್ಲ್ಯಾಕ್ ಫಂಗಸ್​ಗೆ ಹೆದರಿದ ಮಂಗಳೂರು ದಂಪತಿ; ಪೊಲೀಸ್ ಕಮಿಷನರ್​ಗೆ ಕರೆ ಮಾಡಿ ಆತ್ಮಹತ್ಯೆಗೆ ಶರಣು

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್