ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ: ಮೈಸೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವುದಿಲ್ವಾ? ಎಂದು ಕೇಳಿದ ಮಾಧ್ಯಮದವರ ಪ್ರಶ್ನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಗು ನಗುತ್ತಾ ಇಲ್ಲ ಅಂತಾ ತಲೆ ಅಲ್ಲಾಡಿಸಿದ್ದಾರೆ.

ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ: ಮೈಸೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
ಸುತ್ತೂರು ಶ್ರೀಗಳನ್ನು ಭೇಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Follow us
TV9 Web
| Updated By: sandhya thejappa

Updated on: Aug 17, 2021 | 10:16 AM

ಮೈಸೂರು: ಜಿಲ್ಲೆಗೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje), ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಶೋಭಾ ಕರಂದ್ಲಾಜೆ ಆಗಮಿಸಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು. ಈ ವೇಳೆ ಕೃಷಿಗೆ ಸಂಬಂಧಿಸಿದ ಕಾರ್ಯಕ್ರಮವನ್ನು ಆಯೋಜನೆ ಮಾಡುವಂತೆ ಶ್ರೀಗಳು ಸೂಚಿಸಿದರು. ಈ ಬಗ್ಗೆ ಮಾತನಾಡಿದ ಸಚಿವೆ, ಬರುವ ಸೆಪ್ಟೆಂಬರ್​ನಲ್ಲಿ ಕೃಷಿಗೆ ಸಂಬಂಧಿಸಿದಂತೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸುತ್ತೂರು ಶ್ರೀಗಳು ಹೇಳಿದ್ದಾರೆ. ಸುತ್ತೂರಿನಲ್ಲಿ ಕೃಷಿಕರಿಗೆ ಪೂರಕವಾಗುವಂತೆ ಸೆಪ್ಟೆಂಬರ್​ನಲ್ಲಿ ಕಾರ್ಯಾಗಾರ ಸಂವಾದ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವುದಿಲ್ವಾ? ಎಂದು ಕೇಳಿದ ಮಾಧ್ಯಮದವರ ಪ್ರಶ್ನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಗು ನಗುತ್ತಾ ಇಲ್ಲ ಅಂತಾ ತಲೆ ಅಲ್ಲಾಡಿಸಿದ್ದಾರೆ. ಕೇಂದ್ರ ಸಚಿವರಾದ ಬಳಿಕ ಶೋಭಾ ಕರಂದ್ಲಾಜೆ ಇದೇ ಮೊದಲ ಬಾರಿಗೆ ಮಠಕ್ಕೆ ಭೇಟಿ ನೀಡಿದ್ದಾರೆ. ಮಠದಲ್ಲೇ ಉಪಹಾರ ಸೇವಿಸಿ ಶ್ರೀಗಳ ಜೊತೆ ಕೆಲಕಾಲ ಮಾತುಕತೆ ನಡೆಸಿದರು.

ಹಾಸನಕ್ಕೆ ತೆರಳಲಿರುವ ಕೇಂದ್ರ ಸಚಿವೆ ಇಂದು (ಆಗಸ್ಟ್ 17) ಮಧ್ಯಾಹ್ನ 3 ಗಂಟೆಗೆ ಸಚಿವೆ ಶೋಭಾ ಕರಂದ್ಲಾಜೆ ಹಾಸನಕ್ಕೆ ತೆರಳಿ ಜನಾಶೀರ್ವಾದ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ ಜನಾಶೀರ್ವಾದ ಯಾತ್ರೆಯಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಬಳಿಕ ರೈತರ ವ್ಯವಸಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಈ ಕಾರ್ಯಕ್ರಮದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಹಾಗು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಪಾಲ್ಗೊಳ್ಳುತ್ತಾರೆ.

ಇದನ್ನೂ ಓದಿ

ಕೊವಿಡ್ ಲಸಿಕೆ 2ನೇ ಡೋಸ್ ಪಡೆಯದಿದ್ದರೂ, ಲಸಿಕೆ ಯಶಸ್ವಿಯಾಗಿದೆ ಎಂಬ ಮೆಸೇಜ್; ಕೋವಿನ್ ಪೋರ್ಟಲ್‌ನಿಂದ ಗೊಂದಲ

ನಿದ್ದೆ ಮಾಡುವವರನ್ನು ಎಚ್ಚರಿಸಬಹುದು, ನಿದ್ದೆ ಮಾಡಿದಂತೆ ನಟಿಸುವವರನ್ನು ಎಚ್ಚರಿಸುವುದಕ್ಕೆ ಆಗಲ್ಲ; ಮೈಸೂರಿನಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ

(Shobha Karandlaje says that did not get into Karnataka politics at Mysuru)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್