ಮೈಸೂರು: ಜಿಲ್ಲೆಗೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje), ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಶೋಭಾ ಕರಂದ್ಲಾಜೆ ಆಗಮಿಸಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು. ಈ ವೇಳೆ ಕೃಷಿಗೆ ಸಂಬಂಧಿಸಿದ ಕಾರ್ಯಕ್ರಮವನ್ನು ಆಯೋಜನೆ ಮಾಡುವಂತೆ ಶ್ರೀಗಳು ಸೂಚಿಸಿದರು. ಈ ಬಗ್ಗೆ ಮಾತನಾಡಿದ ಸಚಿವೆ, ಬರುವ ಸೆಪ್ಟೆಂಬರ್ನಲ್ಲಿ ಕೃಷಿಗೆ ಸಂಬಂಧಿಸಿದಂತೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸುತ್ತೂರು ಶ್ರೀಗಳು ಹೇಳಿದ್ದಾರೆ. ಸುತ್ತೂರಿನಲ್ಲಿ ಕೃಷಿಕರಿಗೆ ಪೂರಕವಾಗುವಂತೆ ಸೆಪ್ಟೆಂಬರ್ನಲ್ಲಿ ಕಾರ್ಯಾಗಾರ ಸಂವಾದ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವುದಿಲ್ವಾ? ಎಂದು ಕೇಳಿದ ಮಾಧ್ಯಮದವರ ಪ್ರಶ್ನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಗು ನಗುತ್ತಾ ಇಲ್ಲ ಅಂತಾ ತಲೆ ಅಲ್ಲಾಡಿಸಿದ್ದಾರೆ. ಕೇಂದ್ರ ಸಚಿವರಾದ ಬಳಿಕ ಶೋಭಾ ಕರಂದ್ಲಾಜೆ ಇದೇ ಮೊದಲ ಬಾರಿಗೆ ಮಠಕ್ಕೆ ಭೇಟಿ ನೀಡಿದ್ದಾರೆ. ಮಠದಲ್ಲೇ ಉಪಹಾರ ಸೇವಿಸಿ ಶ್ರೀಗಳ ಜೊತೆ ಕೆಲಕಾಲ ಮಾತುಕತೆ ನಡೆಸಿದರು.
ಹಾಸನಕ್ಕೆ ತೆರಳಲಿರುವ ಕೇಂದ್ರ ಸಚಿವೆ
ಇಂದು (ಆಗಸ್ಟ್ 17) ಮಧ್ಯಾಹ್ನ 3 ಗಂಟೆಗೆ ಸಚಿವೆ ಶೋಭಾ ಕರಂದ್ಲಾಜೆ ಹಾಸನಕ್ಕೆ ತೆರಳಿ ಜನಾಶೀರ್ವಾದ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ ಜನಾಶೀರ್ವಾದ ಯಾತ್ರೆಯಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಬಳಿಕ ರೈತರ ವ್ಯವಸಾಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಈ ಕಾರ್ಯಕ್ರಮದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಹಾಗು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಪಾಲ್ಗೊಳ್ಳುತ್ತಾರೆ.
ಇದನ್ನೂ ಓದಿ
ಕೊವಿಡ್ ಲಸಿಕೆ 2ನೇ ಡೋಸ್ ಪಡೆಯದಿದ್ದರೂ, ಲಸಿಕೆ ಯಶಸ್ವಿಯಾಗಿದೆ ಎಂಬ ಮೆಸೇಜ್; ಕೋವಿನ್ ಪೋರ್ಟಲ್‌ನಿಂದ ಗೊಂದಲ
(Shobha Karandlaje says that did not get into Karnataka politics at Mysuru)