ಆ.27 ರಿಂದ ಸಿಎಂ ಸಿದ್ದರಾಮಯ್ಯ ಮೂರು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ
ಸಿಎಂ ಸಿದ್ದರಾಮಯ್ಯ ಅವರು ಮೂರು ದಿನ ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಮೂರು ದಿನ ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddramaiah) ಅವರು ನಾಳೆ (ಆ.27) ರಿಂದ ಮೂರು ದಿನಗಳ ಕಾಲ ಮೈಸೂರು (Mysuru) ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ದಿನಾಂಕ 27 ರಿಂದ 30ರ ತನಕ ಮೈಸೂರು ಜಿಲ್ಲೆಯಲ್ಲೇ ಇರಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಆ.28 ರಂದು ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ. ಆ.30 ರಂದು ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಮೂರು ದಿನ ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಅನಿವಾರ್ಯ ಕಾರಣಕ್ಕೆ ರಜೆ ಬೇಕಾದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಮತ್ತು ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಕರ್ನಾಟಕದ ನೀರಾವರಿ ಸಮಸ್ಯೆ: ಕೇಂದ್ರದ ಬಳಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ನಿರ್ಧಾರ- ಸಿದ್ದರಾಮಯ್ಯ
ಹೆಚ್ ಸಿ ಮಹದೇವಪ್ಪ ಮೈಸೂರು ಜಿಲ್ಲಾ ಪ್ರವಾಸ
ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮ ಪೂರ್ವಭಾವಿ ಸಭೆ ಸಂಬಂಧ ಇಂದು (ಆ.26) ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್. ಸಿ ಮಹದೇವಪ್ಪ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 11ಕ್ಕೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವ ಕೆ.ವೆಂಕಟೇಶ್ ಹಾಗೂ ಜಿಲ್ಲೆಯ ಶಾಸಕರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಸಿದ್ಧತೆ ಸಂಬಂಧಪಟ್ಟಂತೆ ಸಚಿವರು, ಶಾಸಕರು ಚರ್ಚೆ ನಡೆಸಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ