ಕಾಂಗ್ರೆಸ್ ಬೇಡಿಕೆ ಈಡೇರಿಸಿದ ಚಾಮುಂಡೇಶ್ವರಿ, ತಾಯಿಗೆ ಹರಕೆ ತೀರಿಸಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್
ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಬೇಡಿಕೆಕೊಂಡಿದ್ದನ್ನು ಚಾಮುಂಡೇಶ್ವರಿ ದೇವಿ ಈಡೇರಿಸಿದ್ದಾಳೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಉಪಮುಮಂತ್ರಿ ಡಿಕೆ ಶಿವಕುಮಾರ್ ಅವರು ಚಾಮುಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಿಕೆ ತೀರಿಸಿದ್ದಾರೆ. ಹಸಿರು ಮತ್ತು ಕೆಂಪು ಸೀರೆಯೊಂದಿಗೆ ಫಲ ಪುಷ್ಪ ಸಮರ್ಪಿಸಿ ಪೂಜೆ ಸಲ್ಲಿಸಿದರು.

ಮೈಸೂರು, (ಆಗಸ್ಟ್ರ 29): ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿಗೆ(mysuru chamundeshwari) ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಹರಕೆ ತೀರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar) ಸೇರಿದಂತೆ ಹಲವು ಸೇರಿ ಇಂದು (ಆಗಸ್ಟ್ 29) ಹಸಿರು ಮತ್ತು ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಮತ್ತಯ ಫಲ ಸಮರ್ಪಣೆ ಮಾಡುವ ಮೂಲಕ ತಾಯಿ ಚಾಮುಂಡೇಶ್ವರಿಗೆ ಹೊತ್ತುಕೊಂಡಿದ್ದ ಹರಿಕೆಯನ್ನು ತೀರಿಸಿದರು. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಅವರು ವಾಗ್ದಾನ ಮಾಡಿದ್ದರು. ಇದೀಗ ಆ ಬೇಡಿಕೆ ಈಡೇರಿದ್ದರಿಂದ ಹರಕೆ ತೀರಿಸಿದ್ದಾರೆ. ಅಲ್ಲದೇ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ಮೊದಲ ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿಯನ್ನು ಕಾಣಿಕೆ ಸಂದಾಯ ಮಾಡಿದರು. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರು ತಲಾ 2 ಸಾವಿರ ರೂ. ಕಾಣಿಕೆ ಹಾಕಿದರು.
ಇನ್ನು ಚಾಮುಂಡೇಶ್ವರಿಗೆ ಹರಕೆ ತೀರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಮೇ 9ರಂದು ನಾನು(ಸಿದ್ದರಾಮಯ್ಯ), ಡಿಕೆ ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದೆವು. 5 ಗ್ಯಾರಂಟಿ ಜಾರಿಗೊಳಿಸುವುದಾಗಿ ಹರಕೆ ಹೊತ್ತಿದ್ದೆವು. ಅದರಂತೆ ಇದೀಗ ಇಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇವೆ. ನಾಳೆ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದೇವೆ ಎಂದು ಹೇಳಿದರು.
ಇನ್ನು ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಚಾಮುಂಡೇಶ್ವರಿ ದೇವಿ ಮುಂದೆ ಗ್ಯಾರಂಟಿ ಕಾರ್ಡ್ ಇಟ್ಟು ಬೇಡಿಕೊಂಡಿದ್ದೆವು. ಗೃಹಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಶಕ್ತಿ ಕೊಡುವಂತೆ ಬೇಡಿಕೊಂಡಿದ್ದೆವು. ಈಗ ಗೃಹಲಕ್ಷ್ಮೀ ಯೋಜನೆ ಜಾರಿಯಾಗುತ್ತಿದೆ. ಹೀಗಾಗಿ ಇಂದು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದೇವೆ. ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಚಾಮುಂಡೇಶ್ವರಿಯ ನೆಲದಲ್ಲೇ ಕಾರ್ಯಕ್ರಮ ಮಾಡುತ್ತಿದ್ದೇವೆ. ವಿಶೇಷ ರೀತಿಯಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಡೆಯುತ್ತಿದ್ದು, 12,600 ಕಡೆ ನೇರ ಪ್ರಸಾರದ ಮೂಲಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ನಿಮ್ಮ-ನಿಮ್ಮ ಜಿಲ್ಲೆಗಳ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ