Siddaramaiah Tattoo: ಸಿದ್ದರಾಮಯ್ಯ ಸಿಎಂ; ಎದೆ ಮೇಲೆ ಹಚ್ಚೆ ಹಾಕಿಸಿಕೊಂಡ ಮೈಸೂರಿನ ಅಭಿಮಾನಿ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕೆಂದು ಮೈಸೂರಿನ ಓರ್ವ ಅಭಿಮಾನಿ ವಿಶೇಷ ರೀತಿಯಲ್ಲಿ ಪಟ್ಟು ಹಿಡಿದಿದ್ದಾರೆ.

Siddaramaiah Tattoo: ಸಿದ್ದರಾಮಯ್ಯ ಸಿಎಂ; ಎದೆ ಮೇಲೆ ಹಚ್ಚೆ ಹಾಕಿಸಿಕೊಂಡ ಮೈಸೂರಿನ ಅಭಿಮಾನಿ
ಸಿದ್ದರಾಮಯ್ಯ ಸಿಎಂ ಎದೆ ಮೇಲೆ ಹಚ್ಚೆ
Edited By:

Updated on: May 15, 2023 | 11:14 AM

ಬೆಂಗಳೂರು: ಕಾಂಗ್ರೆಸ್ (Congress) ಅಭೂತಪೂರ್ವ ಜಯಗಳಿಸಿದ್ದು, ಸರ್ಕಾರ ರಚಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದೆ. ನೂತನ ಸರ್ಕಾರಕ್ಕೆ ಮುಖ್ಯಮಂತ್ರಿ ಯಾರಾಗಬೇಕೆಂಬ ಚರ್ಚೆ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakuamr)​ ಮತ್ತು ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ (Siddaramaiah) ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಈ ಸಂಬಂಧ ತಡರಾತ್ರಿವರೆಗೂ ಶಾಸಕಾಂಗ ಸಭೆ ನಡೆದಿದ್ದು, ಮುಖ್ಯಮಂತ್ರಿ ಆಯ್ಕೆ ಹೈಕಮಾಂಡ್​ಗೆ ಬಿಟ್ಟಿದ್ದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆ ಕೈ ನಾಯಕರು ಇಂದು (ಮೇ.15) ದೆಹಲಿಗೆ ಹೊರಟಿದ್ದಾರೆ.

ಇದೊಂದಡೆಯಾದರೇ, ಮತ್ತೊಂದಡೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಮೈಸೂರಿನ ಸಿದ್ದರಾಮಯ್ಯ ಬೆಂಬಲಿಗನೋರ್ವ “ಸಿದ್ದರಾಮಯ್ಯ ಸಿಎಂ” ಎಂದು ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿರುವ ವಿಡಿಯೋ ವೈರಲ್​​ ಆಗಿದೆ.

ಸಿದ್ದರಾಮಯ್ಯ ನಿವಾಸದ ಬಳಿ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತ ಘೋಷಣೆ ಕೂಗಿದ್ದಾರೆ. ಅಲ್ಲದೇ ನಿವಾಸದ ಸುತ್ತಮುತ್ತ “ಮುಂದಿನ ಸಿಎಂ ಸಿದ್ದರಾಮಯ್ಯ” ಎಂದು ಬ್ಯಾನರ್​​ ಹಾಕಿದ್ದಾರೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು ಎಂದು ಪೋಸ್ಟರ್ ಹಾಕಿದ್ದಾರೆ. ಈ ಹಿನ್ನೆಲೆ ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅತಿ ಕಡಿಮೆ ಮತಗಳ ಅಂತರದಿಂದ ಗೆಲುವು-ಸೋಲು ಕಂಡವರು

ಮೊದಲಿನಿಂದಲೂ ಸಿದ್ದರಾಮಯ್ಯ ಅವರು ಯಾವುದೇ ಸಭೆ ಸಮಾರಂಭಗಳಿಗೆ ಹೋದರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಘೋಷಣೆಗಳು ಕೇಳಿ ಬರುತ್ತಿತ್ತು, ಇದೀಗ ಸಿಎಂ ಯಾರು ಎಂಬ ಬಗ್ಗೆ ಕಾಂಗ್ರೆಸ್‌ ಪಾಳಯದಲ್ಲಿ ಚರ್ಚೆ ನಡೆಯುತ್ತಿದ್ದು, ಅಭಿಮಾನಿಗಳ ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಬ್ಯಾನರ್‌ ಸಾಕಷ್ಟು ವೈರಲ್‌ ಆಗುತ್ತಿದೆ.

ಮೇ.10 ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 13 ರಂದು ಫಲಿತಾಂಶ ಪ್ರಕಟಗೊಂಡಿತ್ತು. ಕಾಂಗ್ರೆಸ್​ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೇ, ಬಿಜೆಪಿ 66 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಹೀನಾಯವಾಗಿ ಸೋತಿದೆ. ಇನ್ನು ಜೆಡಿಎಸ್ 19 ಕ್ಷೇತ್ರಗಳಲ್ಲಿ ಜಯಕಂಡು ತೃಪ್ತಿಪಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:58 am, Mon, 15 May 23