Mysuru News: ಸಿದ್ದರಾಮಯ್ಯಗೆ ಸಿಎಂ ಪಟ್ಟ; ಮೈಸೂರು ಇಂದಿರಾ ಕ್ಯಾಂಟೀನಲ್ಲಿ ಭರ್ಜರಿ ಹೋಳಿಗೆ ಊಟ

ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿ ಬಸವರಾಜ್ ಎಂಬವರು ಇಂದಿರಾ ಕ್ಯಾಂಟೀನ್‌ನಲ್ಲಿ ಶುಕ್ರವಾರ ಹೋಳಿಗೆ ಸಹಿತ ಊಟ ಹಂಚಿದರು.

Mysuru News: ಸಿದ್ದರಾಮಯ್ಯಗೆ ಸಿಎಂ ಪಟ್ಟ; ಮೈಸೂರು ಇಂದಿರಾ ಕ್ಯಾಂಟೀನಲ್ಲಿ ಭರ್ಜರಿ ಹೋಳಿಗೆ ಊಟ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 19, 2023 | 7:32 PM

ಮೈಸೂರು: ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ಕಟ್ಟಾ ಅಭಿಮಾನಿ ಬಸವರಾಜ್ ಎಂಬವರು ಇಲ್ಲಿನ ಇಂದಿರಾ ಕ್ಯಾಂಟೀನ್‌ನಲ್ಲಿ ಶುಕ್ರವಾರ ಹೋಳಿಗೆ ಸಹಿತ ಊಟ ಹಂಚಿದರು. ತಮ್ಮ ನೆಚ್ಚಿನ ನಾಯಕ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿರುವುದರ ಸಂಭ್ರಮ ಆಚರಿಸಲು ಅವರು ಮೈಸೂರಿನ 11 ಇಂದಿರಾಗಾಂಧಿ ಕ್ಯಾಂಟೀನ್‌ಗಳಲ್ಲಿ ಇದೇ ರೀತಿ ಶನಿವಾರವೂ ಹೋಳಿಗೆ ಊಟ ನೀಡಲು ಯೋಜಿಸಿದ್ದಾರೆ.

2013ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಬಸವರಾಜ್ ಅವರು ನಂಜುಮಳಿಗೆ ವೃತ್ತದಲ್ಲಿ ಸಿಹಿ ಹಂಚಿದ್ದರು.

ಕೃಷ್ಣರಾಜೇಂದ್ರ ಸಹಕಾರಿ ಬ್ಯಾಂಕ್‌ನ ಉಪಾಧ್ಯಕ್ಷ ಡಿ ಬಸವರಾಜ್ 1987 ರಿಂದ ಸಿದ್ದರಾಮಯ್ಯ ಅವರೊಂದಿಗೆ ಬಾಂಧವ್ಯ ಹೊಂದಿದ್ದಾರೆ.

ಶುಕ್ರವಾರ ಇಂದಿರಾ ಕ್ಯಾಂಟೀನ್​ನಲ್ಲಿ 150 ಸದಸ್ಯರಿಗೆ ಹೋಳಿಗೆ ವಿತರಿಸಲಾಗಿದೆ. ಶನಿವಾರ ಸಿದ್ದರಾಮಯ್ಯನವರ ಅನ್ನ ಭಾಗ್ಯ ಯೋಜನೆಗೆ ಗೌರವಾರ್ಥ ಹೋಳಿಗೆ ವಿತರಿಸಲು ಮುಂದಾಗಿದ್ದಾರೆ. ‘ಕ್ಷೀರ ಭಾಗ್ಯ’ ಯೋಜನೆಯನ್ನು ಗುರುತಿಸಲು ಅವರು ಬಾದಾಮ್ ಹಾಲು ವಿತರಿಸಲು ಯೋಜಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನಾಳೆ ಮಳೆ ಸಾಧ್ಯತೆ; ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಅಡ್ಡಿಯ ಆತಂಕ

ಕರ್ನಾಟಕದ ನೂತನ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭ ಶನಿವಾರ ಮಧ್ಯಾಹ್ನ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ