ತವರು ಜಿಲ್ಲೆಯಲ್ಲಿ ಮೂರು ದಿನ ಸಿದ್ದರಾಮಯ್ಯ ಠಿಕಾಣಿ; ಮೈಸೂರು, ಚಾಮರಾಜನಗರ ಗೆಲ್ಲಲು ಮಾಸ್ಟರ್ ಪ್ಲಾನ್

ಈ ಬಾರಿಯ ಲೋಕಸಭಾ ಚುನಾವಣೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಠೆಯ ಚುನಾವಣೆಯಾಗಿದೆ. ಹೀಗಾಗಿ ರಾಜ್ಯ ನಾಯಕರು ರಣತಂತ್ರಗಳನ್ನು ರೂಪಿಸುತ್ತಿದ್ದಾರೆ. ಇನ್ನೊಂದೆಡೆ, ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ (ಮೈಸೂರು-ಕೊಡಗು ಕ್ಷೇತ್ರ) ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನ ಮೈಸೂರಿನಲ್ಲಿ ಠಿಕಾಣಿ ಹೂಡಲಿದ್ದಾರೆ.

ತವರು ಜಿಲ್ಲೆಯಲ್ಲಿ ಮೂರು ದಿನ ಸಿದ್ದರಾಮಯ್ಯ ಠಿಕಾಣಿ; ಮೈಸೂರು, ಚಾಮರಾಜನಗರ ಗೆಲ್ಲಲು ಮಾಸ್ಟರ್ ಪ್ಲಾನ್
ಮೈಸೂರು, ಚಾಮರಾಜನಗರ ಗೆಲ್ಲಲು ಮಾಸ್ಟರ್ ಪ್ಲಾನ್; ಜಿಲ್ಲೆಯಲ್ಲಿ ಠಿಕಾಣಿ ಹೂಡಲಿರುವ ಸಿದ್ದರಾಮಯ್ಯ
Follow us
ದಿಲೀಪ್​, ಚೌಡಹಳ್ಳಿ
| Updated By: Rakesh Nayak Manchi

Updated on:Mar 24, 2024 | 6:07 PM

ಮೈಸೂರು, ಮಾ.24: ಈ ಬಾರಿಯ ಕರ್ನಾಟಕ ಲೋಕಸಭಾ ಚುನಾವಣೆ (Lok Sabha Elections) ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯ ಚುನಾವಣೆಯಾಗಿದೆ. ಹೀಗಾಗಿ ರಾಜ್ಯ ನಾಯಕರು ರಣತಂತ್ರಗಳನ್ನು ರೂಪಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ತವರು ಜಿಲ್ಲೆ ಮೈಸೂರನ್ನು ಒಳಗೊಂಡಿರುವ ಮೈಸೂರು-ಕೊಡಗು (Mysuru-Kodagu) ಲೋಕಸಭಾ ಕ್ಷೇತ್ರ ಹಾಗೂ ಚಾಮರಾಜನಗರ (Chamarajanagara) ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಪಣತೊಟ್ಟಿದ್ದಾರೆ. ಮೂರು ದಿನಗಳ ಕಾಲ ಅವರು ಮೈಸೂರಿನಲ್ಲಿ ಠಿಕಾಣಿ ಹೂಡಲಿದ್ದಾರೆ.

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಗೆಲುವಿಗೆ ರಣತಂತ್ರ ರೂಪಿಸುತ್ತಿರುವ ಸಿದ್ದರಾಮಯ್ಯ ಅವರು, ಈಗಾಗಲೇ ಪಕ್ಷದ ಶಾಸಕರು, ಮುಖಂಡರ ಜೊತೆ ಸಭೆ ನಡೆಸಿದ್ದಾರೆ. ಶಾಸಕರ ಜೊತೆ ಒಂದು ಸುತ್ತಿನ ಸಭೆ ನಡೆಸಿರುವ ಅವರು, ಇಂದು ರಾತ್ರಿ ಖಾಸಗಿ ರೆಸಾರ್ಟ್​ಗೆ ತೆರಳಲಿದ್ದಾರೆ. ವಿಶ್ರಾಂತಿ ನೆಪದಲ್ಲಿ ಪಕ್ಷದ ಗೆಲುವಿಗೆ ರಣತಂತ್ರ ರೂಪಿಸುತ್ತಿದ್ದಾರೆ.

ಹೆಚ್.ಡಿ.ಕೋಟೆ ತಾಲೂಕಿನ ಖಾಸಗಿ ರೆಸಾರ್ಟ್​ಗೆ ತೆರಳಲಿರುವ ಸಿದ್ದರಾಮಯ್ಯ, ರೆಸಾರ್ಟ್ ಬಳಿ ಯಾವ ಕಾರ್ಯಕರ್ತರು ಬರಬಾರದೆಂದು ಸೂಚನೆ ನೀಡಿದ್ದಾರೆ. ಕೇವಲ ಶಾಸಕರು, ಪ್ರಮುಖ ಮುಖಂಡರಿಗೆ ಮಾತ್ರ ಭೇಟಿಗೆ ಅವಕಾಶ ನೀಡಿದ್ದಾರೆ. ಎರಡು ಲೋಕಸಭೆ ಕ್ಷೇತ್ರಗಳ ಎಲ್ಲಾ ವಿಧಾನಸಭಾ ಕ್ಷೇತ್ರದ ಇಂಚಿಂಚು ಮಾಹಿತಿ ಕಲೆ ಹಾಕಲಿದ್ದಾರೆ.

ಮೈಸೂರು, ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು

ಎರಡು ಕ್ಷೇತ್ರಗಳ ಮುಖಂಡರ ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಮೈಸೂರು, ಚಾಮರಾಜನಗರ ಕ್ಷೇತ್ರದಲ್ಲಿ ಗೆಲ್ಲುವ ವಾತಾವರಣ ಇದೆ. ಎರಡು ಕ್ಷೇತ್ರದಲ್ಲೂ ಮುಖಂಡರು ಕೆಲಸ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಮೈಸೂರು, ಚಾಮರಾಜನಗರ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂದರು. ಮೈಸೂರು ಅರಮನೆಯ ಯದುವೀರ್ ಅವರಿ​ಗೆ​ ಟಿಕೆಟ್​ ಕೊಟ್ಟಿದ್ದು ಬಿಜೆಪಿಯ ಆಂತರಿಕ ವಿಚಾರ ಎಂದರು.

ಇದನ್ನೂ ಓದಿ: ಮೈಸೂರಿನ ಸಭೆಯಲ್ಲಿ ಮುಖಂಡರಿಗೆ, ಶಾಸಕರಿಗೆ ಮಹತ್ವದ ಟಾಸ್ಕ್ ಕೊಟ್ಟ ಸಿಎಂ, ಇಲ್ಲಿದೆ ಇನ್​ಸೈಡ್ ಮಾಹಿತಿ

ಬಿಜೆಪಿಯ ಮೈನಸ್ ಪಾಯಿಂಟ್​ಗಳ ಮೇಲೆ ನಾವು ಯಾವತ್ತು ಚುನಾವಣೆ ಮಾಡುವುದಿಲ್ಲ. ನಾವು ನಮ್ಮ ಕೆಲಸದ ಮೇಲೆ ಚುನಾವಣೆ ಮಾಡುತ್ತೇವೆ. ಮೈಸೂರಿನಲ್ಲಿ ನನಗೆ ಟಿಕೆಟ್ ಸಿಗುತ್ತದೆ ಎಂದು ಪ್ರತಾಪಸಿಂಹಗೆ ಭಾರೀ ವಿಶ್ವಾಸ ಇತ್ತು. ಅವನಿಗೆ ತಪ್ಪಿಸಿ ರಾಜಮನೆತನದ ಯದುವೀರ್​ಗೆ ಕೊಟ್ಟಿದ್ದಾರೆ. ಅದರ ಪ್ಲಸ್ ಮೈನಸ್​ನಿಂದ ಲೆಕ್ಕಹಾಕಿ ನಾವು ಚುನಾವಣೆ ಮಾಡುವುದಿಲ್ಲ. ಅದು ಅವರ ಪಾರ್ಟಿಯ ನಿರ್ಧಾರ ಅಷ್ಟೇ‌ ಎಂದರು.

ನಮಗೆ ಮೈಸೂರು ಚಾಮರಾಜನಗರ ಎರಡು ಕ್ಷೇತ್ರದಲ್ಲೂ ಗೆಲುವಿನ ವಾತಾವರಣ ಇದೆ. ನಾವು ಕಳೆದ ಅವಧಿಯಲ್ಲಿ ಮಾಡಿರುವ ಕೆಲಸ ಈ ಅವಧಿಯಲ್ಲಿ ಮಾಡುತ್ತಿರುವ ಕೆಲಸ ನಮ್ಮನ್ನ ಕೈ ಹಿಡಿಯುತ್ತದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಎಂದು ಹೇಳಿದ್ದೇನೆ ಎಂದರು.

ಕೆಆರ್​ಪಿಪಿ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ನಾಳೆ ಪಕ್ಷ ಸೇರ್ಪಡೆಗೆ ಮುಹೂರ್ತ ಕೂಡ ಫಿಕ್ಸ್ ಆಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಜನಾರ್ದನರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ನನಗೆ ಗೊತ್ತಿಲ್ಲ. ಎರಡು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಹೀಗಾಗಿ ಖುಷಿಯಲ್ಲಿದ್ದೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Sun, 24 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ