AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿದ್ದರಾಮಯ್ಯ ಒಬ್ಬ ಮೀರ್​ ಸಾದಿಕ್ ರಾಜಕಾರಣಿ’ ಅವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಯಾವುದೇ ಕಾಳಜಿ ಇಲ್ಲ -ಸಚಿವ ಶ್ರೀರಾಮಲು

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಡಿಸಿಎಂ ಪರಮೇಶ್ವರ್, ಶ್ರೀನಿವಾಸ್ ಪ್ರಸಾದ್ ಸೇರಿ ಘಟಾನುಘಟಿ ದಲಿತ ನಾಯಕರನ್ನು ವ್ಯವಸ್ಥಿತವಾಗಿ ಮುಗಿಸಿದರು ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಬಿ.ಶ್ರೀರಾಮುಲು ಹರಿಹಾಯ್ದರು.

‘ಸಿದ್ದರಾಮಯ್ಯ ಒಬ್ಬ ಮೀರ್​ ಸಾದಿಕ್ ರಾಜಕಾರಣಿ’ ಅವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಯಾವುದೇ ಕಾಳಜಿ ಇಲ್ಲ -ಸಚಿವ ಶ್ರೀರಾಮಲು
ಬಿ ಶ್ರೀರಾಮುಲು, ಸಾರಿಗೆ ಸಚಿವ
TV9 Web
| Updated By: ಆಯೇಷಾ ಬಾನು|

Updated on:Oct 27, 2022 | 3:09 PM

Share

ಮೈಸೂರು: ಸದ್ಯಕ್ಕೆ KSRTC ಬಸ್​​ ಟಿಕೆಟ್​ ದರ ಹೆಚ್ಚಳ ಮಾಡುವುದಿಲ್ಲ. ಬಸ್​​ ಟಿಕೆಟ್​ ದರ ಹೆಚ್ಚಳ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮಲು ತಿಳಿಸಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಬಸ್​​ ಟಿಕೆಟ್​ ದರ ಹೆಚ್ಚಳ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಎಲೆಕ್ಟ್ರಿಕ್​ ಬಸ್​​​​ ಸೇವೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ವಿರುದ್ಧ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

‘ಸಿದ್ದರಾಮಯ್ಯ ಒಬ್ಬ ಮೀರ್​ ಸಾದಿಕ್ ರಾಜಕಾರಣಿ’

ಸಿದ್ದರಾಮಯ್ಯ ಒಬ್ಬ ಮೀರ್​ ಸಾದಿಕ್ ರಾಜಕಾರಣಿ. ಅವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಯಾವುದೇ ಕಾಳಜಿ ಇಲ್ಲ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಡಿಸಿಎಂ ಪರಮೇಶ್ವರ್, ಶ್ರೀನಿವಾಸ್ ಪ್ರಸಾದ್ ಸೇರಿ ಘಟಾನುಘಟಿ ದಲಿತ ನಾಯಕರನ್ನು ವ್ಯವಸ್ಥಿತವಾಗಿ ಮುಗಿಸಿದರು ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಬಿ.ಶ್ರೀರಾಮುಲು ಹರಿಹಾಯ್ದರು. ಇದನ್ನೂ ಓದಿ: ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ

ಕಾಂಗ್ರೆಸ್ಸಿನಿಂದ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಕ್ಕಿಲ್ಲ ಸಿಗುವುದೂ ಇಲ್ಲ. ಇತ್ತೀಚೆಗೆ ಭಾರತ್ ಜೋಡೋ ಯಾತ್ರೆ ವೇಳೆ ಕಾಡುಗೊಲ್ಲ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ರಾಹುಲ್ ಗಾಂಧಿ ಭೇಟಿ ಮಾಡಿ, ಸಂವಾದಕ್ಕೆ ಮುಂದಾಗಿದ್ದ ಕಾಡುಗೊಲ್ಲರಿಗೆ ತಡೆಯೊಡ್ಡಲಾಗಿದೆ. ಕಾಡುಗೊಲ್ಲರು ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಅಡ್ಡಿಪಡಿಸಲಾಗಿದೆ. ಇದು ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ವಿರೋಧಿತನಕ್ಕೆ ಸಾಕ್ಷಿಯಾಗಿದೆ ಎಂದರು.

SC, ST ಮೀಸಲಾತಿ ಹೆಚ್ಚಳ ಸಂಬಂಧ ಕ್ರೆಡಿಟ್​ ವಾರ್​ ವಿಚಾರ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಯಾರ ಅವಧಿಯಲ್ಲಿ ಸಮಿತಿ ರಚನೆ ಆಗಿದೆ ಎಂಬುದು ಮುಖ್ಯವಲ್ಲ. ಆದರೆ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ತಂದಿರುವುದು ಬಿಜೆಪಿ. ಜೆಡಿಎಸ್-ಕಾಂಗ್ರೆಸ್​​ಗೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿದೆ. ಹೀಗಾಗಿ ಅವರು ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ತಂದಿರಲಿಲ್ಲ. ನಮಗೆ ಇಚ್ಛಾಶಕ್ತಿ ಇರುವುದರಿಂದ ಅನುಷ್ಠಾನಕ್ಕೆ ತಂದಿದ್ದೇವೆ. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರ ಇಚ್ಛಾಶಕ್ತಿಯಿಂದ ಮೀಸಲಾತಿ ಹೆಚ್ಚಳ ಅನುಷ್ಠಾನಗೊಂಡಿದೆ ಎಂದರು.

ಯಾವುದೇ ಸಮುದಾಯ ಸೇರಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಜಾತಿಯ ಕುಲಶಾಸ್ತ್ರ ಅಧ್ಯಯನ ನಡೆಯಬೇಕು. ಮೀಸಲಾತಿ ಅನುಷ್ಠಾನಕ್ಕಾಗಿ ಸಮಿತಿಯನ್ನು ರಚಿಸಬೇಕು. ಆ ಸಮಿತಿ ನೀಡುವ ವರದಿಯನ್ವಯ ಕ್ರಮಕೈಗೊಳ್ಳಬೇಕು. ಏಕಾಏಕಿ ಮೀಸಲಾತಿ ಅನುಷ್ಠಾನ ಹೆಚ್ಚಳ ಸಾಧ್ಯವಿಲ್ಲ. SC, ST ಮೀಸಲಾತಿ ಹೆಚ್ಚಳ‌ ಸಂಬಂಧ ದಶಕದಿಂದ ಹೋರಾಟ ನಡೆಯುತ್ತಿದೆ. ಹೋರಾಟದ ಬಳಿಕ ಮೀಸಲಾತಿ ಹೆಚ್ಚಳ ಅನುಷ್ಠಾನ ಮಾಡಲಾಗಿದೆ ಎಂದರು.

Published On - 3:09 pm, Thu, 27 October 22