AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಪಸಂಖ್ಯಾತರಿಗೆ ಕಡಿಮೆ ಪರಿಹಾರ, ಹತ್ಯೆಗೀಡಾದ ಹಿಂದೂಗಳ ಕುಟುಂಬಕ್ಕೆ ಹೆಚ್ಚು ಪರಿಹಾರ: ಸಿದ್ದರಾಮಯ್ಯ ಕಿಡಿ

ಹತ್ಯೇಗೀಡಾದ ಹಿಂದೂಗಳ ಕುಟುಂಬಕ್ಕೆ ಹೆಚ್ಚು ಪರಿಹಾರ ನೀಡುತ್ತಾರೆ. ಇಂತಹ ತಾರತಮ್ಯ ಏಕೆಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಇಂತಹ ವರ್ತನೆಯಿಂದ ಮತ ಕ್ರೋಡೀಕರಣದ ಲೆಕ್ಕಾಚಾರ ಇದೆ. ಆದರೆ ಬಿಜೆಪಿಯವರ ಲೆಕ್ಕಾಚಾರಗಳು ಉಲ್ಟಾ ಆಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅಲ್ಪಸಂಖ್ಯಾತರಿಗೆ ಕಡಿಮೆ ಪರಿಹಾರ, ಹತ್ಯೆಗೀಡಾದ ಹಿಂದೂಗಳ ಕುಟುಂಬಕ್ಕೆ ಹೆಚ್ಚು ಪರಿಹಾರ: ಸಿದ್ದರಾಮಯ್ಯ ಕಿಡಿ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Mar 25, 2022 | 12:28 PM

Share

ಮೈಸೂರು: ಹರ್ಷ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಕೊಟ್ಟಿದ್ದಾರೆ. ಅದೇ ಕರಾವಳಿಯ ದಿನೇಶ್ ಕುಟುಂಬಕ್ಕೆ ಪರಿಹಾರ ಕೊಟ್ರಾ? ಪರಿಹಾರವೇನು ಇವರ ಅಪ್ಪನ ಮನೆಯಿಂದ ಕೊಡುತ್ತಾರಾ? ಸಾರ್ವಜನಿಕರು ಬೆವರು ಸುರಿಸಿ ದುಡಿದು ಕಟ್ಟಿರುವ ತೆರಿಗೆ ಹಣ ಅದು. ಜನರಿಗೆ ಮಕ್ಮಲ್ ಟೋಪಿ ಹಾಕಬಹುದೆಂದು ಬಿಜೆಪಿ ತಿಳಿದುಕೊಂಡಿದೆ. ಒಂದಲ್ಲಾ ಒಂದು ದಿನ ರಾಜ್ಯದ ಜನರಿಗೆ ಸತ್ಯ ಗೊತ್ತಾಗುತ್ತದೆ. ಭಾವನಾತ್ಮಕ ವಿಚಾರಗಳಿಂದಲೇ ಬಿಜೆಪಿ ಇಕ್ಕಟ್ಟಿಗೆ ಸಿಲುಕುತ್ತದೆ. ರಾಜ್ಯದ ಜನರು ದಡ್ಡರಲ್ಲ, ಎಲ್ಲವನ್ನು ಗಮನಿಸುತ್ತಾರೆ ಎಂದು ಸಿದ್ದರಾಮನಹುಂಡಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಸರ್ಕಾರ ಪರಿಹಾರ ನೀಡುವಲ್ಲಿಯೂ ತಾರತಮ್ಯ ಮಾಡ್ತಿದೆ. ಸಂಘ ಪರಿವಾರದವರು ಅಲ್ಪಸಂಖ್ಯಾತರ ಕೊಲೆ ಮಾಡಿದರೆ ಮೃತ ಅಲ್ಪಸಂಖ್ಯಾತರಿಗೆ ಕಡಿಮೆ ಪರಿಹಾರವನ್ನು ಕೊಡುತ್ತಾರೆ. ಮುಸ್ಲಿಮರು ಹಿಂದೂಗಳ ಕೊಲೆ ಮಾಡಿದರೆ ಹೆಚ್ಚು ಪರಿಹಾರ. ಹತ್ಯೇಗೀಡಾದ ಹಿಂದೂಗಳ ಕುಟುಂಬಕ್ಕೆ ಹೆಚ್ಚು ಪರಿಹಾರ ನೀಡುತ್ತಾರೆ. ಇಂತಹ ತಾರತಮ್ಯ ಏಕೆಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಇಂತಹ ವರ್ತನೆಯಿಂದ ಮತ ಕ್ರೋಡೀಕರಣದ ಲೆಕ್ಕಾಚಾರ ಇದೆ. ಆದರೆ ಬಿಜೆಪಿಯವರ ಲೆಕ್ಕಾಚಾರಗಳು ಉಲ್ಟಾ ಆಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹಿಜಾಬ್ ವಿವಾದಕ್ಕೆ ಬಿಜೆಪಿಯವರೇ ಕಾರಣ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಮುಸ್ಲಿಂ ಹೆಣ್ಣುಮಕ್ಕಳು ತಲೆಮೇಲೆ ದುಪಟ್ಟಾ ಹಾಕಿಕೊಳ್ತಾರೆ. ದುಪಟ್ಟಾ ಹಾಕಿಕೊಂಡರೆ ಏನು ತಪ್ಪಿದೆ. ಹಿಂದೂ ಹೆಣ್ಣುಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲ್ವಾ? ಸ್ವಾಮೀಜಿಗಳು ಕೂಡ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ. ಅದನ್ನೆಲ್ಲಾ ನೀವು ಪ್ರಶ್ನಿಸುತ್ತೀರಾ ಎಂದು ಸಿದ್ದರಾಮಯ್ಯ ಕೇಳಿದ್ದಾರೆ. ವಿವಾದ ಸೃಷ್ಟಿಸಿ ಅರಗಿಸಿಕೊಳ್ಳಬಹುದೆಂದು ಬಿಜೆಪಿ ತಿಳಿದಿದೆ. ರಾಜ್ಯದ ಜನರಿಗೆ ಬಿಜೆಪಿಯ ತಂತ್ರ ಏನೆಂದು ಅರ್ಥವಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ

ಬಿಜೆಪಿ ವಿವಾದ ಸೃಷ್ಟಿಸಿ ಮತ ಕ್ರೋಡೀಕರಣಕ್ಕೆ ಯತ್ನಿಸುತ್ತಿದೆ. ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ ಹಾಕಿರುವುದು ತಪ್ಪು. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧದ ಹಿಂದೆ ಅಜೆಂಡಾ ಇದೆ. ಬಿಜೆಪಿಯ ಅಜೆಂಡಾ ಇದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿಲ್ಲ. ಭಾರತೀಯ ಜನತಾ ಪಾರ್ಟಿಯೇ ಇಕ್ಕಟ್ಟಿಗೆ ಸಿಲುಕಿದೆ ಎಂದು ಅವರು ಹೇಳಿದ್ದಾರೆ.

ಸ್ಪೀಕರ್ ನಮ್ಮ ಆರ್‌ಎಸ್ಎಸ್ ಎಂದು ಹೇಳಿದ್ದು ತಪ್ಪು

ಇದೇ ವೇಳೆ, ಸ್ಪೀಕರ್ ನಮ್ಮ ಆರ್‌ಎಸ್ಎಸ್ ಎಂದು ಹೇಳಿದ್ದು ತಪ್ಪು. ಸ್ಪೀಕರ್ ಸ್ಥಾನದಲ್ಲಿ ಕುಳಿತು ಆ ಮಾತು ಹೇಳಿದ್ದು ತಪ್ಪು. ಸ್ಪೀಕರ್ ಆದವರು ಪಕ್ಷಾತೀತವಾಗಿ ನಡೆದುಕೊಳ್ಳಬೇಕು. ಆದರೆ ಸ್ಪೀಕರ್ ನಮ್ಮ RSS ಎಂದು ಹೇಳಿರುವುದು ಸರಿಯಲ್ಲ. ಸಮಾಜ ಒಡೆಯುವುದೇ ಆರ್‌ಎಸ್‌ಎಸ್‌ನವರ ಅಜೆಂಡಾ. ಹೀಗಾಗಿಯೇ ನಾವು ಆರ್‌ಎಸ್‌ಎಸ್ ವಿರೋಧಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರ ವಿವಾದಕ್ಕೆ ಸಂಬಂಧಿಸಿ ರೇಣುಕಾಚಾರ್ಯ ವಿರುದ್ಧ ಕ್ರಿಮಿನಲ್ ಕೇಸ್ ಹಾಕಬೇಕು. ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಿ. ಶಾಸಕ ರೇಣುಕಾಚಾರ್ಯರನ್ನು ಸಮರ್ಥಿಸಿಕೊಳ್ಳಬಾರದು. ಅವರನ್ನು ಸಮರ್ಥಿಸಿಕೊಳ್ಳುವುದು ಪ್ರೋತ್ಸಾಹ ಕೊಟ್ಟಂತೆ. ಕಾನೂನುಬಾಹಿರ ಕೆಲಸಕ್ಕೆ ಪ್ರೋತ್ಸಾಹ ಕೊಟ್ಟಂತಾಗುತ್ತೆ. ರಾಜ್ಯ ಸರ್ಕಾರವೇ ಈಗ ಅವರನ್ನು ಸಮರ್ಥಿಸಿಕೊಳ್ಳುತ್ತಿದೆ. ಅವರನ್ನು ಏನು ಮಾಡಬೇಕು ಹೇಳಿ ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಮುಂದಿನ ಚುನಾವಣೆಯೇ ಕೊನೆ. ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ

ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ ಇಷ್ಟು ಕ್ಷೇತ್ರದ ಜನ ಕೇಳುತ್ತಿದ್ದಾರೆ. ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ತೀರ್ಮಾನ ಮಾಡಿಲ್ಲ. ಎಲ್ಲಿ ನನಗೆ ರಾಜಕೀಯ ಪುನರ್ ಜನ್ಮ ಸಿಕ್ಕಿತೋ ಅಲ್ಲಿಯೇ ಸೋಲಿಸಿದರು. ಹಾಗಂತ ಬೇಸರ ಮಾಡಿಕೊಳ್ಳುವುದಕ್ಕೆ ಆಗುವುದಿಲ್ಲ. ಬರೋಬ್ಬರಿ ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು ಗೆಲ್ಲಿಸಿದ್ದಾರೆ. ಅದಕ್ಕಾಗಿ ಚಾಮುಂಡೇಶ್ವರಿಯನ್ನು ನಾನು ಯಾವಾಗಲೂ ಮರೆಯಲ್ಲ. ಮುಂದಿನ ಚುನಾವಣೆಯೇ ಕೊನೆ. ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಹೀಗಾಗಿ ಹಲವು ಕ್ಷೇತ್ರಗಳ ಜನ ಸ್ಪರ್ಧೆಗೆ ಆಹ್ವಾನಿಸಿದ್ದಾರೆ. ಎಲ್ಲ ಕ್ಷೇತ್ರಗಳೂ ಪ್ರಯಾರಿಟಿ, ಹೆಚ್ಚು- ಕಮ್ಮಿ ಅಂತ ಇಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಮುಂದೆ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮೈಸೂರು ತಾಲೂಕಿನ ಸಿದ್ದರಾಮನಹುಂಡಿಯಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಊರ ಜಾತ್ರೆಯಲ್ಲಿ ಸಿದ್ದರಾಮಯ್ಯ ಸಖತ್ ಸ್ಟೆಪ್: ಅಪ್ಪನ ಡಾನ್ಸ್ ನೋಡಿ ಮಗನಿಗೆ ಖುಷಿ

ಇದನ್ನೂ ಓದಿ: ಶಲ್ಯವನ್ನೇ ದುಪ್ಪಟ್ಟಾ ಮಾಡಿದ ಸಿದ್ದರಾಮಯ್ಯ! ಹಿಜಾಬ್​ಗೆ ಅವಕಾಶ ಕೊಡಿ ಎಂದು ನಾಟಕೀಯವಾಗಿ ಕೇಳಿದ್ದಕ್ಕೆ ಶಿಕ್ಷಣ ಸಚಿವರು ಕೊಟ್ಟ ಉತ್ತರವೇನು?

Published On - 12:27 pm, Fri, 25 March 22