ಪ್ರತಾಪ್ ಸಿಂಹನನ್ನು ಸೋಲಿಸಿ ಎಂದ ಸಿದ್ದರಾಮಯ್ಯ, ಮಹಿಷಾ ದಸರಾ ಆರಂಭ ಮಾಡಿ ಮೈಸೂರಿನ ಸ್ವಾಸ್ಥ್ಯ ಕೆಡಿಸಿದ್ದು ಯಾರು ಅಂತ ಹೇಳಲಿ- ಸಂಸದ ಪ್ರತಾಪ್​

ನನ್ನನ್ನು ಯಾಕೆ ಜನ ಸೋಲಿಸಬೇಕು ಅಂತಾ ಸಿಎಂ ಐದು ಹತ್ತು ಕಾರಣ ಕೊಡಲಿ. ಹೈವೆ ಮಾಡಿಸಿದ್ದು ನನ್ನ ತಪ್ಪಾ? ಗ್ರೇಟರ್ ಮೈಸೂರು ಮಾಡಲು ಹೊರಟ್ಟಿದ್ದು ತಪ್ಪಾ? ವಿಮಾನ ನಿಲ್ದಾಣ ಅಭಿವೃದ್ಧಿ ಮಾಡಲು ಹೊರಟ್ಟಿದ್ದು ತಪ್ಪಾ? ಚಾಮುಂಡಿ ಬೆಟ್ಟದ ಅಭಿವೃದ್ಧಿ ಮಾಡುತ್ತಿರುವುದು ತಪ್ಪಾ? 40 ವರ್ಷದಿಂದ ಸಿದ್ದರಾಮಯ್ಯ ರಾಜಕೀಯದಲ್ಲಿದ್ದಾರೆ. ಮೈಸೂರಿಗೆ ಮಾಡಿರುವ ಕೆಲಸ ಏನೂ ಎಂಬುದು ಹೇಳಲಿ - ಸಂಸದ ಪ್ರತಾಪ್ ಸಿಂಹ​

ಪ್ರತಾಪ್ ಸಿಂಹನನ್ನು ಸೋಲಿಸಿ ಎಂದ ಸಿದ್ದರಾಮಯ್ಯ, ಮಹಿಷಾ ದಸರಾ ಆರಂಭ ಮಾಡಿ ಮೈಸೂರಿನ ಸ್ವಾಸ್ಥ್ಯ ಕೆಡಿಸಿದ್ದು ಯಾರು ಅಂತ ಹೇಳಲಿ- ಸಂಸದ ಪ್ರತಾಪ್​
ಮೈಸೂರಿನ ಸ್ವಾಸ್ಥ್ಯ ಕೆಡಿಸಿದ್ದು ಯಾರು ಅಂತ ಸಿಎಂ ಸಿದ್ದರಾಮಯ್ಯ ಹೇಳಲಿ- ಸಂಸದ ಪ್ರತಾಪ್​
Follow us
ದಿಲೀಪ್​, ಚೌಡಹಳ್ಳಿ
| Updated By: ಸಾಧು ಶ್ರೀನಾಥ್​

Updated on:Sep 02, 2023 | 1:45 PM

ಮೈಸೂರು, ಸೆಪ್ಟೆಂಬರ್​ 2: ಪ್ರತಾಪ್ ಸಿಂಹನನ್ನು ಈ ಬಾರಿ ಸೋಲಿಸಿ ಎಂಬ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ವಿಚಾರವಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ ( Pratap simha) ಕಿಡಿಕಾರಿದ್ದಾರೆ. ಸಿಎಂ ಯಾವ ಬಡಾವಣೆಯಲ್ಲಿ ನಿಂತು ನನ್ನ ಸೋಲಿಸಿ ಅಂತಾ ಹೇಳಿದ್ದಾರೆ ಎಂಬುದು ನೋಡಿದೆ. ಮೈಸೂರಿನ ಕುವೆಂಪು ನಗರದಲ್ಲೋ, ಸರಸ್ವತಿ ಪುರಂ ನಲ್ಲೋ, ಸಿದ್ದಾರ್ಥ ಬಡಾವಣೆಯಲ್ಲೋ ಬಂದು ಸಿಎಂ ಈ ರೀತಿ ಹೇಳೋಕೆ ಆಗಲ್ಲ. ಉದಯಗಿರಿಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಬಾಂಧವರ ಮುಂದೆ ಹೋಗಿ ಕೈ ಮುಗಿದು ನನ್ನ ಸೋಲಿಸಲು ಕರೆ ಕೊಟ್ಟಿದ್ದಾರೆ. ತಮ್ಮ ಬಾಂಧವರ ಉದ್ಧಾರಕ್ಕೆ ಮಾತ್ರ ಸಿದ್ದರಾಮಯ್ಯ ಇರೋದು ಎಂಬುದು ನನಗೆ ಗೊತ್ತು. ತಮ್ಮ ಬಾಂಧವರ ಮುಂದೆ ಕೈಮಗಿದು ನನ್ನ ಸೋಲಿಸಿ ಅಂತಾ ಕೇಳುವ ದೈನಾಸಿ ಸ್ಥಿತಿ ಸಿಎಂ ಗೆ ಬರಬಾರದಿತ್ತು ಎಂದು ಸಂಸದ ( Mysore MP) ಪ್ರತಾಪ್ ವ್ಯಂಗ್ಯವಾಡಿದ್ದಾರೆ.

ನನ್ನನ್ನು ಯಾಕೆ ಜನ ಸೋಲಿಸಬೇಕು ಅಂತಾ ಸಿಎಂ ಐದು ಹತ್ತು ಕಾರಣ ಕೊಡಲಿ. ಹೈವೆ ಮಾಡಿಸಿದ್ದು ನನ್ನ ತಪ್ಪಾ? ಗ್ರೇಟರ್ ಮೈಸೂರು ಮಾಡಲು ಹೊರಟ್ಟಿದ್ದು ತಪ್ಪಾ? ವಿಮಾನ ನಿಲ್ದಾಣ ಅಭಿವೃದ್ಧಿ ಮಾಡಲು ಹೊರಟ್ಟಿದ್ದು ತಪ್ಪಾ? ಚಾಮುಂಡಿ ಬೆಟ್ಟದ ಅಭಿವೃದ್ಧಿ ಮಾಡುತ್ತಿರುವುದು ತಪ್ಪಾ? ಯಾವ ಕಾರಣಕ್ಕೆ ಮೈಸೂರು ಜನ ಪ್ರತಾಪ್ ಸಿಂಹನನ್ನು ಸೋಲಿಸಬೇಕು ಹೇಳಿ? 40 ವರ್ಷದಿಂದ ಸಿದ್ದರಾಮಯ್ಯ ರಾಜಕೀಯದಲ್ಲಿದ್ದಾರೆ. ಮೈಸೂರಿಗೆ ಮಾಡಿರುವ ಕೆಲಸ ಏನೂ ಎಂಬುದು ಹೇಳಲಿ. ಕೆಲಸ ಮಾಡಿದವನನ್ನು ಸೋಲಿಸಬೇಕು ಅಂತಾ ಕೈ ಮುಗಿದು ಸಿಎಂ ಕೇಳಿದರೆ ಜನ ಅದನ್ನು ಒಪ್ಪುತ್ತಾರಾ?

Also Read: ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ? ಬಿಎಲ್ ಸಂತೋಷ್ ಉತ್ತರಿಸಲಿ ಎಂದ ಪ್ರಿಯಾಂಕ್ ಖರ್ಗೆ ಸಿದ್ದರಾಮಯ್ಯ ಅವರಿಗೆ ಬಡವರ ಮಕ್ಕಳ ಉದ್ಧಾರವಾಗಬಾರದು. ಬಡವರ ಮಕ್ಕಳು ಬೆಳೆಯಬಾರದು. ಅವರು ಅವರ ಮಕ್ಕಳು ಮಾತ್ರ ರಾಜಕಾರಣ ಮಾಡ್ತಾ ಇರಬೇಕು ಅಷ್ಟೆ. ಮಹಿಷಾ ದಸರಾ ಆರಂಭ ಮಾಡಿ ಮೈಸೂರಿನ ಸ್ವಾಸ್ಥ್ಯ ಕೆಡಿಸಿದ್ದು ಸಿದ್ದರಾಮಯ್ಯ ತಾನೇ? ಟಿಪ್ಪು ಜಯಂತಿ ಮಾಡಿ ರಾಜ್ಯದ ಸೌಹಾರ್ದತೆ ಕೆಡಿಸಿದ್ದು ಸಿದ್ದರಾಮಯ್ಯ ತಾನೇ? ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಸಾಲು ಸಾಲು ಹಿಂದೂ ಕಾರ್ಯಾಕರ್ತರ ಕೊಲೆಯಾಯಿತು. ಇದಕ್ಕೆ ಯಾರು ಕಾರಣ? ಸಿದ್ದರಾಮಯ್ಯ ಪ್ರತಿ ಬಾರಿಯೂ ಪ್ರಧಾನಿ ಮೋದಿ ವಿರುದ್ದ ಮಾತಾಡುತ್ತಾರೆ. ಇದು ಒಂಥರ ಆಕಾಶದ ಕಡೆ ಮುಖ ಮಾಡಿ ಉಗಿದಂತೆ. ಈ ಕೆಲಸವನ್ನು ನಿರಂತರವಾಗಿ ಸಿದ್ದರಾಮಯ್ಯ ಮಾಡುತ್ತಲೆ ಇದ್ದಾರೆ ಎಂದು ಸಂಸದ ಪ್ರತಾಪ್​ ಹರಿಹಾಯ್ದರು.

ಕಾಂಗ್ರೆಸ್​​ಗೆ ದಲಿತರು ಕೇರಿಯಲ್ಲೇ ಇರಬೇಕು-ಮುಸಲ್ಮಾನರು ಮೊಹಲ್ಲಾದಲ್ಲೇ ಇರಬೇಕು

ಬೃಹತ್ ಮೈಸೂರು ಪಾಲಿಕೆ ಮಾಡಬೇಕು ಎಂಬ ಫೈಲ್ ಪಾಲಿಕೆ ಕೌನ್ಸಿಲ್ ಮುಂದೆ ಇದೆ. ಕೌನ್ಸಿಲ್ ಸಭೆಯನ್ನು ಸರಕಾರ ದಿಢೀರ್ ರದ್ದುಗೊಳಿಸಿದೆ. ಕಾಂಗ್ರೆಸ್ ಬೃಹತ್ ಮೈಸೂರು ಪಾಲಿಕೆಗೆ ವಿರೋಧವಿದೆ. ಕಾಂಗ್ರೆಸ್ ಗೆ ದಲಿತರು ಕೇರಿಯಲ್ಲೇ ಇರಬೇಕು. ಮುಸಲ್ಮಾನರು ಮೊಹಲ್ಲಾದಲ್ಲೇ ಇರಬೇಕು. ನೀವು ಮಾತ್ರ ಸದಾಶಿವನಗರದಲ್ಲಿ ಇರಬೇಕಾ? ಮೈಸೂರು ಅಭಿವೃದ್ಧಿ ಮಾಡಬಾರದಾ? ಮೈಸೂರು ಅಭಿವೃದ್ಧಿ ಆಗಬಾರದಾ? ನೀವಂತೂ ಮೈಸೂರು ಅಭಿವೃದ್ಧಿ ಮಾಡಲಿಲ್ಲ. ನಮಗಾದರೂ ಅಭಿವೃದ್ಧಿ ಮಾಡಲು ಬಿಡಿ. ಅಭಿವೃದ್ಧಿಗೆ ಕಾಂಗ್ರೆಸ್ ವಿರೋಧವಿದೆ. ಭಾಗ್ಯಗಳ ಕೊಟ್ಟಿದಾರೆ. ಇನ್ನೂ ಓಸಿ ಪ್ಯಾಕ್ ಕೊಡುವುದು ಮಾತ್ರ ಬಾಕಿ ಇದೆ. ಅದನ್ನು ಕೊಟ್ಟು ಜನರನ್ನು ಅಲ್ಲೇ ಕೂರಿಸಿ. ನೀವು ಮಾತ್ರ ಬೆಂಗಳೂರಿನಲ್ಲಿ ಅರಾಮಾಗಿ ಇರಿ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:39 pm, Sat, 2 September 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?