Siddaramaiah: ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘಿಸಿದರೇ ಸಿದ್ದರಾಮಯ್ಯ?

|

Updated on: Mar 29, 2023 | 4:27 PM

ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಮಧ್ಯೆ, ಮೈಸೂರಿನ ವರುಣಾ ಕ್ಷೇತ್ರದ ಬಿಳುಗುಲಿ ಗ್ರಾಮದಲ್ಲಿ ಕಾರ್ಯಕ್ರವೊಂದರಲ್ಲಿ ಭಾಗವಹಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Siddaramaiah: ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘಿಸಿದರೇ ಸಿದ್ದರಾಮಯ್ಯ?
ಸಿದ್ದರಾಮಯ್ಯ
Follow us on

ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಮಧ್ಯೆ, ಮೈಸೂರಿನ ವರುಣಾ ಕ್ಷೇತ್ರದ ಬಿಳುಗುಲಿ ಗ್ರಾಮದಲ್ಲಿ ಕಾರ್ಯಕ್ರವೊಂದರಲ್ಲಿ ಭಾಗವಹಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರೋಡ್ ಶೋ ವೇಳೆ ತಮಟೆ ಬಡಿಯುವವರಿಗೆ ಸಿದ್ದರಾಮಯ್ಯ 1 ಸಾವಿರ ರೂ. ನೀಡಿದ್ದಾರೆ ಎನ್ನಲಾಗಿದೆ. ಬಿಳುಗುಲಿ ಗ್ರಾಮದಲ್ಲಿ ಸಿದ್ದರಾಮಯ್ಯ ರೋಡ್ ​ಶೋ ನಡೆಸಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಬಿಳುಗಲಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಿದ್ದಾರೆ.

ರೋಡ್​ ಶೋ ಹಾಗೂ ಪುತ್ಥಳಿ ಅನಾವರಣದ ವೇಳೆ ಸಿದ್ದರಾಮುಯ್ಯಗೆ ಮಾಜಿ ಸಚಿವ ಹೆಚ್​.ಸಿ. ಮಹದೇವಪ್ಪ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಸುನೀಲ್ ಬೋಸ್ ಸಾಥ್ ನೀಡಿದ್ದಾರೆ.

ಪುತ್ಥಳಿ ಅನಾವರಣದ ಬಳಿಕ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನೆ ಸಮಾರಂಭದಲ್ಲಿಯೂ ಸಿದ್ದರಾಮಯ್ಯ ಭಾಗವಹಿಸಿದ್ದಾರೆ. ಸಮಾರಂಭ ನೆಪದಲ್ಲಿ ಗ್ರಾಮಸ್ಥರು ಬೃಹತ್ ಸಮಾವೇಶ ಏರ್ಪಡಿಸಿದ್ದರು. ಇದರಲ್ಲಿ ಸಿದ್ದರಾಮಯ್ಯ ಅತ್ಯಂತ ಭಾಗಿಯಾಗಿದ್ದಾರೆ.

ಸಮಾವೇಶಕ್ಕೆ ಮಳೆ ಅಡ್ಡಿ

ಸಮಾವೇಶದ ಸಂದರ್ಭ ತುಸು ಮಳೆಯಾಗಿ ಅಡಚಣೆ ಉಂಟಾಯಿತು. ಮಳೆಯಲ್ಲಿ ಕುರ್ಚಿ ಹಿಡಿದು ನಿಂತ ಜನರು ಸಿದ್ದರಾಮಯ್ಯ ಪರ ಘೋಷಣೆಗಳನ್ನು ಕೂಗಿದರು. ಜತೆಗೆ ಸಿದ್ದರಾಮಯ್ಯಗೆ ಹಾರ ಹಾಕಲು ಮುಗಿಬಿದ್ದರು. ಸಿದ್ದರಾಮಯ್ಯಗೆ ಬೆಳ್ಳಿ ಗಣಪತಿ ವಿಗ್ರಹ ನೀಡಿ ಗ್ರಾಮಸ್ಥರು ಗೌರವ ಸಲ್ಲಿಸಿದರು.

ಈ ಮಧ್ಯೆ, ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಸರ್ಕಾರಿ ಕಾರು ಖಾಲಿ ಮಾಡಿದ ಸಿದ್ದರಾಮಯ್ಯ ಖಾಸಗಿ ಕಾರಿಗೆ ಶಿಫ್ಟ್ ಆಗುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: Karnataka Election 2023: ಬುಧವಾರವೇ ಚುನಾವಣೆ ನಿಗದಿ ಮಾಡಿದ್ದೇಕೆ? ಇಲ್ಲಿದೆ ಕಾರಣ

ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ಈ ಬಾರಿ ವಾರದ ಮಧ್ಯದ ದಿನವಾದ ಬುಧವಾರ ಮತದಾನಕ್ಕೆ ದಿನ ನಿಗದಿ ಮಾಡಲಾಗಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಬುಧವಾರ ಪತ್ರಿಕಾಗೋಷ್ಠಿ ನಡೆಸಿ, ಮತದಾನ, ಮತ ಎಣಿಕೆ ಸೇರಿದಂತೆ ಎಲ್ಲ ವಿವರಗಳನ್ನು ಪ್ರಕಟಿಸಿದರು. ಇದರಂತೆ, ಮೇ 10ರಂದು ಬುಧವಾರ ಮತದಾನ ನಡೆಯಲಿದ್ದು, ಮೇ 13ರಂದು ಶನಿವಾರ ಫಲಿತಾಂಶ ಪ್ರಕಟಗೊಳ್ಳಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ