AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ವರ್ಸಸ್ ಜಿಟಿ ದೇವೇಗೌಡ ಫೈಟ್!

ಸಿದ್ದರಾಮಯ್ಯ ಕಳೆದ ಬಾರಿ ಸಿಎಂ ಆಗಿದ್ದಾಗ ನನ್ನನ್ನು ಸಹಕಾರ ಮಹಾಮಂಡಳದಿಂದ ತೆಗೆದುಹಾಕಿದ್ದರು. ಮತ್ತೆ ಸಹಕಾರಿಗಳೇ ನನ್ನನ್ನ ಮಹಾಮಂಡಳದ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಹರೀಶ್ ಗೌಡ ಚಾಮರಾಜನಗರ ಮೈಸೂರು ಜಿಲ್ಲೆ ಪ್ರಬಲ ನಾಯಕನಾಗುತ್ತಿದ್ದಾನೆ‌. ಈ ಕಾರಣದಿಂದ ತೆಗೆಯುತ್ತಿದ್ದಾರೆ ಎಂದು ಜಿಟಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ವರ್ಸಸ್ ಜಿಟಿ ದೇವೇಗೌಡ ಫೈಟ್!
ಜಿಟಿ ದೇವೇಗೌಡ & ಸಿದ್ದರಾಮಯ್ಯ
TV9 Web
| Edited By: |

Updated on: Nov 14, 2023 | 3:07 PM

Share

ಮೈಸೂರು, ನವೆಂಬರ್ 14: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ 2018ರ ವಿಧಾನಸಭೆಯಲ್ಲಿ ಸ್ಪರ್ಧಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಜೆಡಿಎಸ್ ಶಾಸಕ ಜಿಟಿ ದೇವೇಗೌಡ (GT Deve Gowda) ಮಣಿಸಿದ್ದು ರಾಜ್ಯದ ಗಮನ ಸೆಳೆದಿತ್ತು. ಇದೀಗ ಮತ್ತೆ ಮೈಸೂರಿನಲ್ಲಿ ಉಭಯ ನಾಯಕರ ಮಧ್ಯೆ ಜಿದ್ದಾಜಿದ್ದಿ ಏರ್ಪಡಲಿದೆ! ಹೌದು, ಮೈಸೂರು ಸಹಕಾರ ಬ್ಯಾಂಕ್ ಚುನಾವಣೆಯಲ್ಲಿ ಜಿಟಿ ದೇವೇಗೌಡ ಬಣ ಹಾಗೂ ಸಿದ್ದರಾಮಯ್ಯ ಬಣದ ಮಧ್ಯೆ ಹಣಾಹಣಿ ನಡೆಯಲಿದೆ.

ಮೈಸೂರು ಸಹಕಾರ ಬ್ಯಾಂಕ್ ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಜಿಟಿ ದೇವೇಗೌಡ ಮತ್ತೆ ತೊಡೆ ತಟ್ಟಿದ್ದಾರೆ, ಸಿದ್ದರಾಮಯ್ಯ ತಂತ್ರಕ್ಕೆ ಜಿಟಿ ದೇವೆಗೌಡ ಪ್ರತಿ ತಂತ್ರ ಹೂಡಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಸಹಕಾರ ಕ್ಷೇತ್ರದಲ್ಲಿ ನಮ್ಮ ಕುಟುಂಬದ ಹಿಡಿತ ತಪ್ಪಿಸುವ ತವಕ. ಕಳೆದ ಬಾರಿ ಸಿಎಂ ಆಗಿದ್ದಾಗಲೂ ಇದೆ ರೀತಿ ತಂತ್ರ ಹೂಡಿದ್ದರು. ಈ ಬಾರಿ ಕೂಡ ಆರು ತಿಂಗಳು ಕಾಲ ಚುನಾವಣೆ ಮುಂದೂಡಲು ತಂತ್ರ ಹೂಡಿದ್ದಾರೆ. ಆದರೆ ಸಹಕಾರಿಗಳು ನಮ್ಮ ಜೊತೆ ಇದ್ದಾರೆ. ಎಷ್ಟೇ ದಿನದ ನಂತರ ಚುನಾವಣೆ ನಡೆದರೂ ಸಹಕಾರ ಕ್ಷೇತ್ರದಲ್ಲಿ ನಾನು ಪಾರುಪತ್ಯ ಸಾಧಿಸುವೆ ಎಂದು ಜಿಟಿ ದೇವೇಗಡ ಶಪಥ ಮಾಡಿದ್ದಾರೆ.

ನವೆಂಬರ್‌ನಲ್ಲಿ ಎಂಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಲು ಉದ್ದೇಶಿಸಲಾಗಿತ್ತು. ಅದನ್ನೀಗ ಜಿಲ್ಲಾಧಿಕಾರಿ ಹಿಂತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ನನ್ನ ಮಗ ಮತ್ತು ನನ್ನನ್ನು ಸಹಕಾರ ಕ್ಷೇತ್ರದಿಂದ ದೂರ ಮಾಡುವ ಪ್ರಯತ್ನ ಸಿದ್ದರಾಮಯ್ಯ ನಡೆಸಿದ್ದಾರೆ: ಜಿಟಿ ದೇವೇಗೌಡ, ಜೆಡಿಎಸ್ ಶಾಸಕ

ಸಿದ್ದರಾಮಯ್ಯ ವಿರುದ್ಧ ಜಿಟಿಡಿ ವಾಗ್ದಾಳಿ

ಸಿದ್ದರಾಮಯ್ಯ ಕಳೆದ ಬಾರಿ ಸಿಎಂ ಆಗಿದ್ದಾಗ ನನ್ನನ್ನು ಸಹಕಾರ ಮಹಾಮಂಡಳದಿಂದ ತೆಗೆದುಹಾಕಿದ್ದರು. ಮತ್ತೆ ಸಹಕಾರಿಗಳೇ ನನ್ನನ್ನ ಮಹಾಮಂಡಳದ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಹರೀಶ್ ಗೌಡ ಚಾಮರಾಜನಗರ ಮೈಸೂರು ಜಿಲ್ಲೆ ಪ್ರಬಲ ನಾಯಕನಾಗುತ್ತಿದ್ದಾನೆ‌. ಈ ಕಾರಣದಿಂದ ತೆಗೆಯುತ್ತಿದ್ದಾರೆ ಎಂದು ಜಿಟಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಆರು ತಿಂಗಳು ಬಿಟ್ಟುಚುನಾವಣೆ ಮಾಡಿದರೂ ಸಹಕಾರಿಗಳು ಮತ್ತೆ ಹರೀಶ್ ಗೌಡನನ್ನೆ ಆಯ್ಕೆ ಮಾಡುತ್ತಾರೆ. ನಾನು ಸಹಕಾರ ಕ್ಷೇತ್ರ ಇಟ್ಟುಕೊಂಡು ರಾಜಕಾರಣ ಮಾಡಲ್ಲ. ಜನರ ಅಭಿವೃದ್ಧಿ ನಮ್ಮ ಗುರಿ ಎಂದು ಶಾಸಕ ಜಿಟಿ ದೇವೆಗೌಡ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ