ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದ ನಂತರ ಮೈಸೂರಿನ ಆಸ್ಪತ್ರೆಗೆ ದಾಖಲಾದ ಮುಡಾ ಅಧ್ಯಕ್ಷ

| Updated By: ರಮೇಶ್ ಬಿ. ಜವಳಗೇರಾ

Updated on: Sep 04, 2024 | 7:31 PM

ಸದ್ಯ ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದೆ. ಮುಡಾದ ಮಾಜಿ ಆಯುಕ್ತರನ್ನು ಅಮಾನತು ಮಾಡುವ ಮೂಲಕ ಹಿಂದಿನ ನಿರ್ಣಯಗಳು ಹಾಗೂ ನಿರ್ದೇಶನಗಳು ತಪ್ಪಾಗಿವೆ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಂತಾಗಿದೆ. ಇದು ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದರ ಮಧ್ಯ ಮುಡಾ ಅಧ್ಯಕ್ಷ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದುಕೊಂಡು ಬಳಿಕ ಮತ್ತೆ ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದ ನಂತರ ಮೈಸೂರಿನ ಆಸ್ಪತ್ರೆಗೆ ದಾಖಲಾದ ಮುಡಾ ಅಧ್ಯಕ್ಷ
ಮುಡಾ ಅಧ್ಯಕ್ಷ ಮರೀಗೌಡ
Follow us on

ಮೈಸೂರು, (ಸೆಪ್ಟೆಂಬರ್ 04): ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ನಂತರ ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದಿಂದಾಗಿ ಸಿಎಂ ಸಿದ್ದರಾಮಯ್ಯನವರ ಆಪ್ತ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರಿಗೌಡ ಅವರು ಮೊದಲ ಬೆಂಗಳೂರಿನ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಆದ್ರೆ, ಮತ್ತೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆಯೋ ಏನೋ ಮತ್ತೆ ಅವರು ಇಂದು (ಸೆಪ್ಟೆಂಬರ್ 04) ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಡಾ ಹಗರಣಕ್ಕೆ ಅಧ್ಯಕ್ಷ ಮರೀಗೌಡ ಕಾರಣ ಎಂದು ಆರೋಪಗಳು ಕೇಳಿಬಂದಿವಿ. ಮುಡಾ ಹಗರಣ ಗೊಂದಲಕ್ಕೆ ಮೈಸೂರು ಪ್ರಾಧಿಕಾರದ ಅಧ್ಯಕ್ಷ ಕೆ ಮರೀಗೌಡ ವಿರುದ್ಧ ಸ್ವಪಕ್ಷೀಯರಾದ ಕಾಂಗ್ರೆಸ್ ಮುಖಂಡರೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಜೀವನಕ್ಕೆ ಮರೀಗೌಡನೇ ಕಪ್ಪುಚುಕ್ಕೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್​ ವಿಶ್ವನಾಥ್​ ಸಹ ಮರೀಗೌಡ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಕಿರಿಕಾರಿದ್ದರು.

ಈ ಮುಡಾ ನಿವೇಶನ ಹಂಚಿಕ ಪ್ರಕರಣ ಸದ್ದು ಮಾಡುತ್ತಿರುವ ಹೊತ್ತಿನಲ್ಲೇ ಮರೀಗೌಡ ಪತ್ನಿ ಜಯಶ್ರೀ ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ದಟ್ಟಗಳ್ಳಿಯಲ್ಲಿ 6 ಕೋಟಿ ರೂಪಾಯಿ ಮೌಲ್ಯದ ಬಂಗಲೆ ಖರೀಸಿದ್ದಾರೆ. ಇದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಈ ಮುಡಾ ಹಗರಣ ಮತ್ತು ಪತ್ನಿ ಆರು ಕೋಟಿ ರೂಪಾಯಿ ಮೌಲ್ಯದ ಬಂಗಲೆ ಖರೀದಿ ಸುದ್ದಿ ಮಧ್ಯ ಮರೀಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.