ಮೈಸೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ! 6 ಜನರ ವಿರುದ್ಧ ಎಫ್ಐಆರ್ ದಾಖಲು
ಬಾರ್ ಬಳಿ ಹೆಡ್ ಕಾನ್ಸ್ಟೇಬಲ್ ಹರೀಶ್ ಮನೆಯಿದೆ. ಮನೆ ಮುಂದೆ ಗಾಡಿ ನಿಲ್ಲಿಸಬೇಡಿ ಎಂದು ಹರೀಶ್ ಹೇಳಿದ್ದಾರೆ. ಹೀಗಾಗಿ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಇನ್ನು ಪ್ರತಿದಿನ ಕುಡಿದು ಅಸಭ್ಯವಾಗಿ ವರ್ತನೆ ಮಾಡುತ್ತಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ಮೈಸೂರು: ಹೊರವಲಯದಲ್ಲಿ ಹೆಡ್ ಕಾನ್ಸ್ಟೇಬಲ್ (Head Constable) ಮೇಲೆ ಹಲ್ಲೆ ನಡೆದಿದ್ದು, ಅನುಗ್ರಹ ಬಾರ್ ಅಂಡ್ ರೆಸ್ಟೋರೆಂಟ್ ಸಿಬ್ಬಂದಿ ವಿರುದ್ಧ ಆರೋಪ ಕೇಳಿಬಂದಿದೆ. ಮನೆ ಮುಂದೆ ವಾಹನ (Vehicles) ನಿಲ್ಲಿಸಬೇಡಿ ಎಂದಿದ್ದಕ್ಕೆ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹರೀಶ್ ಎಂಬುವವರು ಮೇಲೆ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿ, ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಪ್ರಕರಣ ಸಂಬಂಧ ಪುನೀತ್, ವಿನಯ್, ಶ್ರೀಕಾಂತ್ ಸೇರಿದಂತೆ 6 ಜನರ ವಿರುದ್ಧ ಇಲವಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಾರ್ ಬಳಿ ಹೆಡ್ ಕಾನ್ಸ್ಟೇಬಲ್ ಹರೀಶ್ ಮನೆಯಿದೆ. ಮನೆ ಮುಂದೆ ಗಾಡಿ ನಿಲ್ಲಿಸಬೇಡಿ ಎಂದು ಹರೀಶ್ ಹೇಳಿದ್ದಾರೆ. ಹೀಗಾಗಿ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಇನ್ನು ಪ್ರತಿದಿನ ಕುಡಿದು ಅಸಭ್ಯವಾಗಿ ವರ್ತನೆ ಮಾಡುತ್ತಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ನಮ್ಮ ಮನೆಯಲ್ಲಿ ಮಕ್ಕಳಿದ್ದಾರೆ ಈ ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟವಾಗುತ್ತಿದೆ. ಹೀಗಾಗಿ ಬಾರ್ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ.
ಪುಂಡಾಟದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ದಂಪತಿ ಮೇಲೆ ಹಲ್ಲೆ: ಬೆಂಗಳೂರು: ಪುಂಡಾಟದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ದಂಪತಿ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕೆಕೆ ಬಡಾವಣೆಯಲ್ಲಿ ಸಂಭವಿಸಿದೆ. ಚಿಲ್ಲರೆ ಅಂಗಡಿ ಮಾಲೀಕ ರವಿ ಹಾಗೂ ಪತ್ನಿ ಸಾವಿತ್ರಿ ಮೇಲೆ ವೆಲ್ಡಿಂಗ್ ಶಾಪ್ ಮಾಲೀಕ ಮೊಹಮ್ಮದ್, ಸಹಚರರಿಂದ ಹಲ್ಲೆ ನಡೆದಿದೆ. ಆರೋಪಿಗಳು ವೆಲ್ಡಿಂಗ್ ಶಾಪ್ನಲ್ಲಿ ಪದೇ ಪದೇ ಶಬ್ದ ಮಾಡಿ ಪುಂಡಾಟ ಮಾಡುತ್ತಿದ್ದರು. ಇದನ್ನು ಪ್ರಶ್ನಿಸಿದ ರವಿ-ಸಾವಿತ್ರಿ ದಂಪತಿ ಮೇಲೆ ರಾಡ್ಗಳಿಂದ ಹಲ್ಲೆ ಮಾಡಿದ್ದಾರೆ.
ವೆಲ್ಡಿಂಗ್ ಶಾಪ್ ಮಾಲೀಕ ಮೊಹಮ್ಮದ್ ಯಾಸಿನ್, ಶರವತ ಮಸೂರ್, ನವಾಜ್ ಖಾನ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದ್ದು, ಹೊಸಕೋಟೆ ನಗರ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:19 am, Wed, 1 June 22