Mysore Dasara 2021: ಪ್ರಧಾನಿ ಮೋದಿ ಬಹಳ ಶ್ರದ್ಧೆಯಿಂದ ದೇಶ ಕಟ್ಟುತ್ತಿದ್ದಾರೆ – ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಭಿಮತ

ಮೈಸೂರು ದಸರಾ 2021: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮೈಸೂರು ದಸರಾಕ್ಕೆ ವಿದ್ಯುಕ್ತವಾಗಿಒ ಚಾಲನೆ ನೀಡಿದ್ದಾರೆ. ಇದೇ ವೇಳೆ ಅವರು ಮಾತನಾಡುತ್ತಾ, ಪ್ರಧಾನಿ ಮೋದಿ ಆಡಳಿತವನ್ನು ಶ್ಲಾಘಿಸಿದ್ದಾರೆ.

Mysore Dasara 2021: ಪ್ರಧಾನಿ ಮೋದಿ ಬಹಳ ಶ್ರದ್ಧೆಯಿಂದ ದೇಶ ಕಟ್ಟುತ್ತಿದ್ದಾರೆ - ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಭಿಮತ
ದಸರಾ ಉದ್ಘಾಟಿಸಿ ಮಾತನಾಡುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 07, 2021 | 11:21 AM

ಪ್ರಧಾನಿ ನರೇಂದ್ರ ಮೋದಿ ಬಹಳ ಶ್ರದ್ಧೆಯಿಂದ ಅಚ್ಚುಕಟ್ಟಾಗಿ ದೇಶ ಕಟ್ಟುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನುಡಿದಿದ್ದಾರೆ. ವಿಶ್ವವಿಖ್ಯಾತ 411ನೇ ಮೈಸೂರು ದಸರಾವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘‘ಮೋದಿ ಬಹಳ ಒಳ್ಳೆಯ ಕೆಲಸ ಮಾಡಿ ದೇಶ ಕಟ್ಟುತ್ತಿದ್ದಾರೆ. ನಾನು ಬಹಳಷ್ಟು ಜನಪ್ರತಿನಿಧಿಗಳ ಆಡಳಿತ ನೋಡಿದ್ದೇನೆ. ಮೋದಿ , ಅಚ್ಚುಕಟ್ಟಾಗಿ ದೇಶ ಕಟ್ಟುತ್ತಿದ್ದಾರೆ. ತಾಯಿ ಚಾಮುಂಡಿ ಮೋದಿ ಅವರಿಗೆ ಇನ್ನಷ್ಟು ಶಕ್ತಿ ಕೊಡಲಿ’’ ಎಂದು ಎಸ್.ಎಂ.ಕೃಷ್ಣ ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಪ್ಯಾಕೇಜ್ ಟೂರಿಸಂಗೆ ಎಸ್ಎಂ ಕೃಷ್ಣ ಸಲಹೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಲಹೆ ನೀಡಿದ ಅವರು, ಇದರಿಂದ ಪ್ರವಾಸೋದ್ಯಮ ಕೂಡ ಅಭಿವೃದ್ಧಿಯಾಗುತ್ತದೆ. ಸಿಂಗಾಪುರ ನೋಡಲು ಲಕ್ಷಾಂತರ ಜನ ಹೋಗುತ್ತಾರೆ. ಸಿಂಗಾಪುರ ತುಂಬಾ ಸ್ವಚ್ಛವಾಗಿರುವುದರಿಂದ ಹೋಗಗುತ್ತಾರೆ. ನಮ್ಮ ಮೈಸೂರನ್ನು ಕೂಡ ಸುಂದರ ನಗರ ಮಾಡಬೇಕು. ಪ್ರಕೃತಿದತ್ತವಾಗಿ ಎಲ್ಲ ಸಿಗುವಾಗ ಅದನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

2023ರ ದಸರಾ ಉದ್ಘಾಟನೆಯಲ್ಲಿ ಬೊಮ್ಮಾಯಿ ಇರುತ್ತಾರೆ; ಸಂಸದ ಪ್ರತಾಪ್ ಸಿಂಹ ವಿಶ್ವಾಸ

ಮಾಜಿ ಸಿಎಂ ಎಸ್.ಎಂ.ಕೃಷ್ಣ ಉತ್ತಮ ಆಡಳಿತಗಾರರಾಗಿದ್ದರು ಎಂದು ಸಂಸದ ಪ್ರತಾಪ್ ಸಿಂಹ ನುಡಿದಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  ಆಡಳಿತದಲ್ಲಿ ಆರ್ಥಿಕ ಶಿಸ್ತು ತಂದಿದ್ದು ಎಸ್.ಎಂ.ಕೃಷ್ಣ ಆಡಳಿತ. ದೊಡ್ಡ ದೊಡ್ಡ ಸಮಸ್ಯೆಗಳನ್ನು ಎದುರಿಸಿ ಉತ್ತಮ ಆಡಳಿತ ನಡೆಸಿದ್ದರು. ಇದೀಗ ಅವರ ಹಾದಿಯಲ್ಲೇ ಸಿಎಂ ಬೊಮ್ಮಾಯಿ ಸಾಗುವ ಲಕ್ಷಣ ಕಾಣುತ್ತಿದೆ. 2023ರ ದಸರಾ ಉದ್ಘಾಟನೆಯಲ್ಲಿ ಬೊಮ್ಮಾಯಿಯವರೇ ಸಿಎಂ ಆಗಿ ಇರುತ್ತಾರೆ. ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ. ಜನಕ್ಕೆ ಹತ್ತಿರವಾಗುವ ರೀತಿ ಸಿಎಂ ನಡೆದುಕೊಳ್ಳುತ್ತಿದ್ದಾರೆ ಎಂದು ಬೊಮ್ಮಾಯಿ ಅವರನ್ನು ಪ್ರತಾಪ್ ಸಿಂಹ ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

“ಯಾವ ಜನ್ಮದ ಪುಣ್ಯವೋ ಗೊತ್ತಿಲ್ಲ ನನಗೆ ಅವಕಾಶ ಸಿಕ್ಕಿದೆ”- ಮೈಸೂರು ದಸರಾ ಉದ್ಘಾಟಿಸಿ ಎಸ್ಎಂ ಕೃಷ್ಣ ಮಾತು

Dasara 2021 Inauguration: ಮೈಸೂರು ದಸರಾಕ್ಕೆ ವಿದ್ಯುಕ್ತ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ

Published On - 9:59 am, Thu, 7 October 21