ಮೈಸೂರು ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಕಾಣಿಕೊಂಡ ಹೊಗೆ, ತಪ್ಪಿದ ದುರಂತ

ವಿಶ್ವವಿಖ್ಯಾತ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಕೊಂಡ ಘಟನೆ ನಡೆದಿದೆ. ಇನ್ನು ಕೆಲವೇ ಕ್ಷಣದಲ್ಲಿ ವಸ್ತು ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಮೈಸೂರು ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಕಾಣಿಕೊಂಡ ಹೊಗೆ, ತಪ್ಪಿದ ದುರಂತ
ಮೈಸೂರು ದಸರಾ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 15, 2023 | 5:22 PM

ಮೈಸೂರು, ಅ.15: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ವಸ್ತು ಪ್ರದರ್ಶನ ಆವರಣದಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಕೊಂಡ ಘಟನೆ ನಡೆದಿದೆ. ಶಾರ್ಟ್​ಸರ್ಕ್ಯೂಟ್​ನಿಂದ, ಫ್ಯೂಸ್ ಬಾಕ್ಸ್​ನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ವಸ್ತು ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ವೇಳೆ ಇಂತಹ ಘಟನೆ ನಡೆದಿದೆ. ಇನ್ನು ಓವರ್​ಲೋಡ್​ನಿಂದ ಶಾರ್ಟ್​ಸರ್ಕ್ಯೂಟ್ ಆಗಿರುವ ಅನುಮಾನ ವ್ಯಕ್ತವಾಗಿದ್ದು, ಎಚ್ಚೆತ್ತ ಸಿಬ್ಬಂದಿಗಳು ಕೂಡಲೇ ವಸ್ತು ಪ್ರದರ್ಶನ ಆವರಣದಲ್ಲಿ ಫ್ಯೂಸ್ ಸರಿಪಡಿಸುತ್ತಿದ್ದಾರೆ.

ದಸರಾ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರಿನ ಕುಪ್ಪಣ್ಣ ಪಾರ್ಕ್​ನಲ್ಲಿರುವ ಗಾಜಿನ ಮನೆಯಲ್ಲಿ ಟೇಪ್ ಕತ್ತರಿಸಿ ದಸರಾ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಇನ್ನು ಫಲಪುಷ್ಪ ಪ್ರದರ್ಶನಲ್ಲಿ ವಿವಿಧ ರೀತಿಯ ಚಿತ್ರಗಳನ್ನು ಬಿಡಿಸಲಾಗಿದ್ದು, 2.5 ಲಕ್ಷ ಹೂವುಗಳಲ್ಲಿ ಚಂದ್ರಯಾನ-3 ಕಲಾಕೃತಿಯನ್ನು ಅರಳಿಸಲಾಗಿದೆ. ಈ ವೇಳೆ ಸಿಎಂಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಸಾಥ್​ ನೀಡಿದ್ದಾರೆ.

ಇದನ್ನೂ ಓದಿ: ಒಡೆಯರ ದಸರಾ ಹೇಗಿರುತ್ತೆ? ಹೇಗೆಲ್ಲ ಆಚರಿಸುತ್ತಾರೆ? ಮೈಸೂರು ದಸರಾ ನಡೆದು ಬಂದಿದ್ಹೇಗೆ? ಸಂಪೂರ್ಣ ಇತಿಹಾಸ ಇಲ್ಲಿದೆ

ಕಾಂಗ್ರೆಸ್ ಸರ್ಕಾರದಲ್ಲಿ ಬದಲಾದ ಕುಸ್ತಿ ಪೇಟದ ಬಣ್ಣ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ಕುಸ್ತಿ ಹಬ್ಬವೇ ಒಂದು ಮೆರಗು ಹೆಚ್ಚಿಸುತ್ತದೆ. ಕೆಲವೇ ಕ್ಷಣಗಳಲ್ಲಿ ಪಾರಂಪರಿಕ ಕುಸ್ತಿ ಪಂದ್ಯಾವಳಿಗಳ ಉದ್ಘಾಟನೆಗೆ ನಡೆಯಲಿದೆ. ಆದರೆ, ಈ ಬಾರಿ ಕಾಂಗ್ರೆಸ್ ಸರ್ಕಾರದಲ್ಲಿ ಕುಸ್ತಿ ಪೇಟದ ಬಣ್ಣ ಬದಲಾಗಿದೆ. ಪ್ರತಿ ವರ್ಷ ಆಯೋಜಕರು ಧರಿಸುತ್ತಿದ್ದ ಕೇಸರಿ ಬಣ್ಣದ ಪೇಟಕ್ಕೆ ಬ್ರೇಕ್ ಹಾಕಲಾಗಿದೆ. ಈ ಮೂಲಕ ದಸರಾದಲ್ಲೂ ಸದ್ದು ಮಾಡುತ್ತಿದೆಯಾ ಕೇಸರಿ ಬಣ್ಣ ? ಎಂಬ ಪ್ರಶ್ನೆ ಮೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:59 pm, Sun, 15 October 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ