ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಮತ್ತು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರ ಬಗ್ಗೆ ದೂರು ದಾಖಲಿಸಿದ್ದ ಸ್ನೇಹಮಯಿ ಕೃಷ್ಣ ಅವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಪೊಲೀಸರು ಸ್ನೇಹಮಯಿ ಕೃಷ್ಣ ಅವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಹೆಚ್ಚಿನ ವಿವರ ಈ ಕೆಳಗಿನಂತಿದೆ.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ
ಸ್ನೇಹಮಯಿ ಕೃಷ್ಣ, ಸಿದ್ದರಾಮಯ್ಯ
Follow us
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ

Updated on:Dec 17, 2024 | 11:30 AM

ಬೆಂಗಳೂರು, ಡಿಸೆಂಬರ್​ 17: ಕರ್ನಾಟಕದಲ್ಲಿ ಭಾರಿ ಸದ್ದು ಮಾಡಿದ್ದ ಮುಡಾ ಹಗರಣದ (Muda Scam) ಪ್ರಮುಖ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ (Snehamayi Krishna) ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವುದು ತಿಳಿದುಬಂದಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದಾರೆ.

ಇದೀಗ ಪೊಲೀಸರು ಇದೀಗ ಸ್ನೇಹಮಯಿ ಕೃಷ್ಣಗಾಗಿ ಹುಡುಕಾಟ ಆರಂಭಿಸಿದ್ದಾರೆ. ಅವರ ಮೊಬೈಲ್ ಮೂರು ದಿನಗಳಿಂದ ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ.

ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯದರ್ಶಿ ವಿರುದ್ಧ ದೂರು  ಮಾಡಿದ್ದ ಸ್ನೇಹಮಯಿ

ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯದರ್ಶಿ ರೂಪಾ ಅವರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಅವರು ಗಂಭೀರ ಆರೋಪ ಮಾಡದ್ದರು. ಈ ಬಗ್ಗೆ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ವಿಡಿಯೋ ಸಮೇತ ದೂರು ನೀಡಿದ್ದರು.

ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ಬಂದ ಸೀರೆಗಳನ್ನು ಕಾರ್ಯದರ್ಶಿ ರೂಪಾ ಅವರ ಕಾರಿನಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತಿದೆ. ಯುವಕನೊಬ್ಬ ಕಾರಿಗೆ ಸೀರೆ ತುಂಬಿಸಿಕೊಂಡು ಹೋಗುವ ವಿಡಿಯೋದ ಸಿಡಿಯನ್ನು ದೂರಿನೊಂದಿಗೆ ಲಗತ್ತಿಸಿದ್ದರು.

ಈ ಹಿನ್ನೆಲೆಯಲ್ಲಿ, ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ದೇವಸ್ಥಾನದ ಕಾರ್ಯದರ್ಶಿ ರೂಪಾ ಅವರು ಸ್ನೇಹಮಯಿ ಕೃಷ್ಣ ಅವರ ವಿರುದ್ಧ ದೂರು ದಾಖಲಿಸಿದ್ದರು. ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್​ಐಆರ್ ದಾಖಲಾಗಿತ್ತು.

ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ

ಸ್ನೇಹಮಯಿ ಕೃಷ್ಣ ಅವರು ಮೈಸೂರಿನ ಬಂಡಿಪಾಳ್ಯ ನಿವಾಸಿಯಾಗಿದ್ದಾರೆ. ಕಳೆದ ಎರಡು ದಶಕಗಳಿಂದ ಮಾಹಿರಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ.ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿ ಲೋಕಾಯುಕ್ತದಲ್ಲಿ ಎಫ್​ಐಆರ್​​ ದಾಖಲಾಗುವಂತೆ ಮಾಡುವ ಮೂಲಕ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸದ್ಯ ಸುದ್ದಿಯಲ್ಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:02 am, Tue, 17 December 24

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ